ಆ್ಯಪ್ನಗರ

21ರಂದು ಅಂಬಿಗರ ಚೌಡಯ್ಯ ಜಯಂತಿ

ಗದಗ : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಕಾರ‍್ಯಕ್ರಮ ಜ. 21ರಂದು ಬೆಳಗ್ಗೆ 11 ಗಂಟೆಗೆ ತೋಂಟದಾರ್ಯ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.

Vijaya Karnataka 19 Jan 2019, 5:00 am
ಗದಗ : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಕಾರ‍್ಯಕ್ರಮ ಜ. 21ರಂದು ಬೆಳಗ್ಗೆ 11 ಗಂಟೆಗೆ ತೋಂಟದಾರ್ಯ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.
Vijaya Karnataka Web chowdiah jayanti of ambigarh on 21st
21ರಂದು ಅಂಬಿಗರ ಚೌಡಯ್ಯ ಜಯಂತಿ


ಗದಗ ಜಿಪಂ ಅಧ್ಯಕ್ಷ ಎಸ್‌.ಪಿ. ಬಳಿಗಾರ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಎಚ್‌.ಕೆ. ಪಾಟೀಲ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದ ಶಿವಕುಮಾರ ಉದಾಸಿ, ಪಿ.ಸಿ. ಗದ್ದಿಗೌಡರ, ಶಾಸಕರಾದ ಸಿ.ಸಿ. ಪಾಟೀಲ, ಕಳಕಪ್ಪ ಬಂಡಿ, ರಾಮಣ್ಣ ಲಮಾಣಿ, ವಿಧಾನ ಪರಿಷತ್‌ ಸದಸ್ಯರಾದ ಬಸವರಾಜ ಹೊರಟ್ಟಿ, ಶ್ರೀನಿವಾಸ ಮಾನೆ, ಎಸ್‌.ವಿ. ಸಂಕನೂರ, ಪ್ರದೀಪ ಶೆಟ್ಟರ, ಗದಗ ಜಿಪಂ ಉಪಾಧ್ಯಕ್ಷೆ ಶಕುಂತಲಾ ಮೂಲಿಮನಿ, ಗದಗ ತಾಪಂ ಅಧ್ಯಕ್ಷ ಮೋಹನ ದುರಗಣ್ಣವರ, ಉಪಾಧ್ಯಕ್ಷೆ ಸುಜಾತಾ ಖಂಡು, ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷ ಸುರೇಶ ಕಟ್ಟಿಮನಿ, ಉಪಾಧ್ಯಕ್ಷ ಪ್ರಕಾಶ ಬಾಕಳೆ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಕಲಾಶ್ರೀ ಮಲ್ಲಿಕಾರ್ಜುನ ಹಾದಿಮನಿ ಅಂಬಿಗರ ಚೌಡಯ್ಯನವರ ಜೀವನ ಮತ್ತು ಸಂದೇಶ ಕುರಿತು ಉಪನ್ಯಾಸ ನೀಡುವರು. ಗದಗ ಜಿಲ್ಲಾ ನಿಜಶರಣ ಅಂಬಿಗರ ಚೌಡಯ್ಯ ಸೇವಾ ಸಮಿತಿ ಅಧ್ಯಕ್ಷ ಬಿ.ಎನ್‌. ಯರನಾಳ, ಗದಗ ಜಿಲ್ಲಾ ನಿಜಶರಣ ಅಂಬಿಗರ ಚೌಡಯ್ಯ ಸೇವಾ ಸಮಿತಿ ಕಾರ‍್ಯದರ್ಶಿ ಜೆ.ಬಿ. ಗಾರವಾಡ ವಿಶೇಷ ಆಹ್ವಾನಿತರಾಗಿ ಆಗಮಿಸುವರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ