ಆ್ಯಪ್ನಗರ

ಕರಾಳ ದೀಪಾವಳಿ: ಪ್ರತ್ಯೇಕ ಘಟನೆಯಲ್ಲಿ ನಾಲ್ವರ ಸಾವು

ಗದಗ: ಬೆಳಕಿನ ಹಬ್ಬ ದೀಪಾವಳಿ ವೇಳೆ ಜಿಲ್ಲೆಯಲ್ಲಿಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿಒಟ್ಟು ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ. ಸೋಮವಾರ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಬಳಿ ಟಿಪ್ಪರ್‌ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಮತ್ತು ಮಹಿಳೆಯೊಬ್ಬರು

Vijaya Karnataka 29 Oct 2019, 5:00 am
ಗದಗ: ಬೆಳಕಿನ ಹಬ್ಬ ದೀಪಾವಳಿ ವೇಳೆ ಜಿಲ್ಲೆಯಲ್ಲಿಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿಒಟ್ಟು ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ.
Vijaya Karnataka Web dark diwali four killed in separate incidents
ಕರಾಳ ದೀಪಾವಳಿ: ಪ್ರತ್ಯೇಕ ಘಟನೆಯಲ್ಲಿ ನಾಲ್ವರ ಸಾವು

ಸೋಮವಾರ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಬಳಿ ಟಿಪ್ಪರ್‌ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಮತ್ತು ಮಹಿಳೆಯೊಬ್ಬರು ಸ್ಥಳದಲ್ಲೆಮೃತಪಟ್ಟಿದ್ದಾರೆ. ಬಳ್ಳಾರಿ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ನವಲಿ ಗ್ರಾಮದ ನಿವಾಸಿ ಎಸ್‌.ಎನ್‌. ನಾಗರಾಜ (27) ಮತ್ತು ಹಿಂಬದಿ ಕುಳಿತಿದ್ದ ಮಹಿಳೆ ಲಕ್ಷಿತ್ರ್ಮಬಾಯಿ ಡಿಕ್ಯಾನಾಯಕ (40) ಸ್ಥಳದಲ್ಲೆಮೃತಪಟ್ಟಿದ್ದಾರೆ.

ಸಹಾಯಕ ಕಾರ್ಯಪಾಲಕ ಅಭಿಯಂತರರು, ಸಿಂಗಟಾಲೂರ ಏತ ನೀರಾವರಿ ಕಾಲುವೆ ಉಪವಿಭಾಗ ನಂ. 2ರಲ್ಲಿಡಿ ದರ್ಜೆ ನೌಕರರಾಗಿ ಸೇವೆ ಸಲ್ಲಿಸುತ್ತಿದ್ದ ನಾಗರಾಜ್‌, ಕೊರ್ಲಹಳ್ಳಿಯಿಂದ ಮುಂಡರಗಿ ಹೊರಟಿದ್ದ ವೇಳೆ ಆದರ್ಶ ಶಾಲೆ ಸಮೀಪ ಟಿಪ್ಪರ್‌ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಹೊಡೆತಕ್ಕೆ ಬೈಕ್‌ ಸವಾರರಿಬ್ಬರು ಸ್ಥಳದಲ್ಲೆಮೃತಪಟ್ಟಿದ್ದಾರೆ. ಲಾರಿ ಚಾಲಕ ಪರಾರಿಯಾಗಿದ್ದಾನೆ. ಮುಂಡರಗಿ ಪೊಲೀಸ್‌ ಠಾಣೆಯಲ್ಲಿಪ್ರಕರಣ ದಾಖಲಾಗಿದೆ.

ಟ್ರ್ಯಾಕ್ಟರ್‌ ಪಲ್ಟಿ :ಭಾನುವಾರ ನರಗುಂದ ತಾಲೂಕಿನ ಚಿಕ್ಕನರಗುಂದ ಗ್ರಾಮದ ಬಳಿ ಟ್ರ್ಯಾಕ್ಟರ್‌ ಪಲ್ಟಿಯಾಗಿ ಯುವಕರಿಬ್ಬರು ಮೃತಪಟ್ಟಿದ್ದಾರೆ. ಚಿಕ್ಕ ನರಗುಂದ ಗ್ರಾಮದ ಮಲ್ಲಿಕಾರ್ಜುನ (20) ಹಾಗೂ ಶಿವಾನಂದ (18) ಮೃತ ದುರ್ದೈವಿಗಳು. ಹಿರೇಕೊಪ್ಪ-ಚಿಕ್ಕನರಗುಂದ ರಸ್ತೆಯ ಅರಿಶಿಣಗುಡಿ ಕ್ರಾಸ್‌ ಬಳಿ ಟ್ರಾಕ್ಟರ್‌ ಪಲ್ಟಿಯಾಗಿ ಸ್ಥಳದಲ್ಲೆಮೃತಪಟ್ಟಿದ್ದಾರೆ. ಈ ಕುರಿತು ನರಗುಂದ ಪೊಲೀಸ್‌ ಠಾಣೆಯಲ್ಲಿಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ