ಆ್ಯಪ್ನಗರ

ಸ್ಕ್ಯಾ‌ನಿಂಗ್‌ ಸೆಂಟರ್‌ಗಳ ಪರಿಶೀಲನೆಗೆ ಡಿಸಿ ಸೂಚನೆ

ಗದಗ : ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಸಲಹಾ ಸಮಿತಿ ಹಾಗೂ ಜಿಲ್ಲಾ ತಪಾಸಣಾ ಮತ್ತು ಮೇಲ್ವಿಚಾರಣೆ ಸಮಿತಿ ಸಭೆ ನಡೆಯಿತು.

Vijaya Karnataka 27 May 2019, 5:00 am
ಗದಗ : ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಸಲಹಾ ಸಮಿತಿ ಹಾಗೂ ಜಿಲ್ಲಾ ತಪಾಸಣಾ ಮತ್ತು ಮೇಲ್ವಿಚಾರಣೆ ಸಮಿತಿ ಸಭೆ ನಡೆಯಿತು.
Vijaya Karnataka Web dc notification for scanning centers review
ಸ್ಕ್ಯಾ‌ನಿಂಗ್‌ ಸೆಂಟರ್‌ಗಳ ಪರಿಶೀಲನೆಗೆ ಡಿಸಿ ಸೂಚನೆ


ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಮಾತನಾಡಿ, ಜಿಲ್ಲೆಯಲ್ಲಿ ನೋಂದಾಯಿತ ಮತ್ತು ನೋಂದಾಯಿತವಲ್ಲದ ಸ್ಕ್ಯಾನಿಂಗ್‌ ಸೆಂಟರ್‌ಗಳಿಗೆ ಪೂರ್ವ ಮಾಹಿತಿ ನೀಡದೆ ಪರಿಶೀಲನೆ ನಡೆಸಿ, ಕಾನೂನು ಪಾಲನೆ ಮಾಡುತ್ತಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಅಲ್ಲದೇ ಗದಗ ನಗರದಲ್ಲಿ ಹೆಚ್ಚಿನ ಸ್ಕ್ಯಾನಿಂಗ್‌ ಸೆಂಟರ್‌ ಇದ್ದು, ತಂಡಗಳ ರಚನೆ ಮಾಡಿ ಸೂಕ್ತ ದಾಖಲಾತಿ ಮತ್ತು ರಜಿಸ್ಟರ್‌ಗಳನ್ನು ನಿರ್ವಹಣೆ ಮಾಡುತ್ತಿರುವ ಬಗ್ಗೆ ಪರಿಶೀಲಿಸಿ. ನ್ಯೂನ್ಯತೆಗಳು ಕಂಡುಬಂದಲ್ಲಿ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲು ಸೂಚಿಸಿದರು.

ಹೊಸದಾಗಿ ನೋಂದಾಯಿಸಲು ಬಂದಂತಹ ಸಂದರ್ಭಗಳಲ್ಲಿ ದಾಖಲಾತಿಗಳು ಅಪೂರ್ಣ ಅಥವಾ ನಕಲಿ ಅಂತ ಕಂಡುಬಂದಲ್ಲಿ ಅಂಥವರ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಎಫ್‌ಐಆರ್‌ ದಾಖಲಿಸಿ. ತಾಲೂಕು ಆರೋಗ್ಯಾಧಿಕಾರಿಗಳು ಸ್ಕ್ಯಾನಿಂಗ್‌ ಸೆಂಟರ್‌ಗಳಿಗೆ ಭೇಟಿ ನೀಡಿ, ಮಾಸಿಕ ವರದಿ ಸಲ್ಲಿಸಲು ಸೂಚಿಸಿದರು.

ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ವೈ.ಕೆ. ಭಜಂತ್ರಿ ಮಾತನಾಡಿ, ಜಿಲ್ಲೆಯಲ್ಲಿ 71 ಸ್ಕ್ಯಾನಿಂಗ್‌ ಸೆಂಟರ್‌ಗಳು ನೋಂದಣಿಯಾಗಿದ್ದು, ಅವುಗಳ ಪೈಕಿ 12 ಸೆಂಟರ್‌ ಬಂದ್‌ ಆಗಿವೆ. 59 ಸೆಂಟರ್‌ಗಳು ಕಾರ್ಯ ನಿರ್ವಹಿಸುತ್ತಿವೆ ಎಂದು ಮಾಹಿತಿ ನೀಡಿದರು.

ಸ್ಕ್ಯಾನಿಂಗ್‌ ಸೆಂಟರ್‌ಗಳ ತಪಾಸಣೆಗಾಗಿ ತಾಲೂಕು ಮಟ್ಟದಲ್ಲಿ ತಂಡಗಳ ರಚನೆ ಮಾಡುವುದು, ತಾಲೂಕು ಆರೋಗ್ಯಾಧಿಕಾರಿಗಳು ಸ್ಕ್ಯಾನಿಂಗ್‌ ಸೆಂಟರಗಳಿಗೆ ಭೇಟಿ ನೀಡಿ ವರದಿ ಸಲ್ಲಿಸುವುದು, ತಾಯಿ ಹಾಗೂ ಶಿಶು ಮರಣ ಪ್ರಮಾಣ ಕಡಿಮೆ ಮಾಡಲು ಸೂಕ್ತ ಕ್ರಮಕೈಗೊಳ್ಳುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ವಿ.ಎಸ್‌. ಮಾದಿನೂರ, ಡಾ. ಎಸ್‌. ಎಂ. ಹೊನಕೇರಿ, ವೆಂಕಟೇಶ ಮಹಾಜನ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಕೆಪಿಎಂಇ ಸಭೆ

ಜಿಲ್ಲೆಯಲ್ಲಿ ನೋಂದಾಯಿತ ಮತ್ತು ನೋಂದಾಯಿತವಲ್ಲದ ಆಸ್ಪತ್ರೆಗಳಿಗೆ ಪೂರ್ವಭಾವಿ ಮಾಹಿತಿ ನೀಡದೇ ಪರಿಶೀಲನೆ ಮಾಡಿ ಎಲ್ಲ ಆಸ್ಪತ್ರೆಗಳಿಗೆ ಭೇಟಿ ನೀಡಿ ಕಾನೂನು ಹಾಗೂ ನಿಯಮ ಪಾಲಿಸುತ್ತಿರುವ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಸೂಚಿಸಿದರು.

ಶನಿವಾರ ಜಿಲ್ಲಾಡಳಿತ ಭವನದಲ್ಲಿ ಜರುಗಿದ ಕೆಪಿಎಂಇ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯಲ್ಲಿ ನಕಲಿ ವೈದ್ಯರ ಬಗ್ಗೆ ನಿಗಾ ವಹಿಸಿ ಕ್ರಮ ಕೈಗೊಳ್ಳಲು ಸೂಚಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ