ಆ್ಯಪ್ನಗರ

ಜಿಲ್ಲಾಮಟ್ಟದ ಮಕ್ಕಳ ವಿಜ್ಞಾನ ಹಬ್ಬ ನಾಳೆ

ಮುಂಡರಗಿ: ಪಟ್ಟಣದ ಸರಕಾರಿ ಮಾದರಿ ಕೇಂದ್ರ ಶಾಲೆಯಲ್ಲಿಜಿಪಂ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಭಾರತ ಜ್ಞಾನ ವಿಜ್ಞಾನ ಸಮಿತಿ ಆಶ್ರಯದಲ್ಲಿಡಿ.12ರಿಂದ 14 ರವರೆಗೆ ಜಿಲ್ಲಾಮಟ್ಟದ ಮಕ್ಕಳ ವಿಜ್ಞಾನ ಹಬ್ಬ ನಡೆಯಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್‌.ಎನ್‌.ಹಳ್ಳಿಗುಡಿ ತಿಳಿಸಿದರು.

Vijaya Karnataka 11 Dec 2019, 5:00 am
ಮುಂಡರಗಿ: ಪಟ್ಟಣದ ಸರಕಾರಿ ಮಾದರಿ ಕೇಂದ್ರ ಶಾಲೆಯಲ್ಲಿಜಿಪಂ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಭಾರತ ಜ್ಞಾನ ವಿಜ್ಞಾನ ಸಮಿತಿ ಆಶ್ರಯದಲ್ಲಿಡಿ.12ರಿಂದ 14 ರವರೆಗೆ ಜಿಲ್ಲಾಮಟ್ಟದ ಮಕ್ಕಳ ವಿಜ್ಞಾನ ಹಬ್ಬ ನಡೆಯಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್‌.ಎನ್‌.ಹಳ್ಳಿಗುಡಿ ತಿಳಿಸಿದರು.
Vijaya Karnataka Web district childrens science festival tomorrow
ಜಿಲ್ಲಾಮಟ್ಟದ ಮಕ್ಕಳ ವಿಜ್ಞಾನ ಹಬ್ಬ ನಾಳೆ


ಮಂಗಳವಾರ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು, 6, 7 ಮತ್ತು 8 ನೇ ತರಬೇತಿ ಮಕ್ಕಳಿಗೆ ವಿಜ್ಞಾನ ಚಟುವಟಿಕೆ ನಡೆಯುತ್ತವೆ. ಜಿಲ್ಲೆಯ 16 ಕ್ಲಸ್ಟರ್‌ನಿಂದ 128 ವಿದ್ಯಾರ್ಥಿಗಳು ಹಾಗೂ ಪಟ್ಟಣದ 150 ವಿದ್ಯಾರ್ಥಿಗಳು ವಿಜ್ಞಾನ ಹಬ್ಬ ಕಾರ್ಯಕ್ರಮದಲ್ಲಿಶಿಬಿರಾರ್ಥಿಗಳಾಗಿ ಭಾಗವಹಿಸಲಿದ್ದಾರೆ. 20 ಜನ ರಾಜ್ಯ ಸಂಪನ್ಮೂಲ ವ್ಯಕ್ತಿಗಳು ಪಾಲ್ಗೊಳ್ಳಲಿದ್ದಾರೆ. ಉದ್ಘಾಟನಾ ಸಮಾರಂಭದಲ್ಲಿಜನಪ್ರತಿನಿಧಿಗಳು, ಸಾಹಿತಿಗಳು ಶಿಕ್ಷಣ ಪ್ರೇಮಿಗಳು ಆಗಮಿಸಲಿದ್ದಾರೆ ಎಂದರು.

ಡಿ.12ರಂದು ಬೆಳಗ್ಗೆ 9 ಗಂಟೆಗೆ ಮಕ್ಕಳ ವಿಜ್ಞಾನ ಹಬ್ಬ ಉದ್ಘಾಟನೆಗೊಳ್ಳಲಿದೆ. ಪ್ರತಿದಿನ ವಿಜ್ಞಾನ ಹಬ್ಬದ ಚಟುವಟಿಕೆಗಳು, ಯೋಗಧ್ಯಾನ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಡಿ.14ರಂದು ಸಂಜೆ 7 ಗಂಟೆಗೆ ಕಾರ್ಯಕ್ರಮ ಸಮಾರೋಪ ಸಮಾರಂಭ ನಡೆಯುವುದು ಎಂದರು.

ಶಿಕ್ಷಕ ಡಾ.ನಿಂಗು ಸೊಲಗಿ ಮಾತನಾಡಿ, ಮಕ್ಕಳ ವಿಜ್ಞಾನ ಹಬ್ಬದಲ್ಲಿಮಲ್ಲಕಂಬ, ವಿಜ್ಞಾನ ವಸ್ತು ಪ್ರದರ್ಶನ, ರಸ್ತೆಯಲ್ಲಿರಂಗೋಲಿ, ಇಂಗ್ಲೀಷ್‌ ಪ್ರಯೋಗಾಲಯ ಪಾತ್ಯಕ್ಷಿಕೆ, ಸೂರ್ಯಗ್ರಹಣ ಮಾಹಿತಿ ಜತೆಗೆ ಮಕ್ಕಳಿಂದ ವಿವಿಧ ಸಾಂಸ್ಕೃತಿ ಕಾರ್ಯಕ್ರಮಗಳು ನಡೆಯುತ್ತವೆ ಎಂದರು.

ಎಚ್‌.ಬಿ.ರಡ್ಡೇರ, ಶ್ರೀಧರ ಬಡಿಗೇರಿ, ಗಂಗಾಧರ ಅಣ್ಣಿಗೇರಿ, ಆರ್‌.ಎಲ್‌.ಬಾದಾಮಿ, ಪ್ರಭಾವತಿ ಅಬ್ಬಿಗೇರಿ, ಮಂಜುನಾಥ ಶಿರಬಡಗಿ, ಎಸ್‌.ಡಿ.ಬಸೇಗೌಡ್ರ, ಪಿ.ಡಿ.ಹಿರೇಮಠ, ಇತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ