ಆ್ಯಪ್ನಗರ

ಹತ್ತಿಜಿನ್‌ಗೆ ಬೆಂಕಿ: ಲಕ್ಷಾಂತರ ರೂ. ಹಾನಿ

ಗದಗ: ಇಲ್ಲಿನ ರಾಜೀವಗಾಂಧಿ ನಗರದ ಕೈಗಾರಿಕಾ ಪ್ರದೇಶದಲ್ಲಿವಿದ್ಯುತ್‌ ಶಾರ್ಟ್‌ ಸಕ್ರ್ಯೂಟ್‌ನಿಂದ ಹತ್ತಿಜಿನ್‌ಗೆ ಬೆಂಕಿ ಹೊತ್ತಿ ಲಕ್ಷಾಂತರ ರೂ. ಹಾನಿಯಾದ ಘಟನೆ ಶುಕ್ರವಾರ ನಡೆದಿದೆ.

Vijaya Karnataka 15 Feb 2020, 5:00 am
ಗದಗ: ಇಲ್ಲಿನ ರಾಜೀವಗಾಂಧಿ ನಗರದ ಕೈಗಾರಿಕಾ ಪ್ರದೇಶದಲ್ಲಿವಿದ್ಯುತ್‌ ಶಾರ್ಟ್‌ ಸಕ್ರ್ಯೂಟ್‌ನಿಂದ ಹತ್ತಿಜಿನ್‌ಗೆ ಬೆಂಕಿ ಹೊತ್ತಿ ಲಕ್ಷಾಂತರ ರೂ. ಹಾನಿಯಾದ ಘಟನೆ ಶುಕ್ರವಾರ ನಡೆದಿದೆ.
Vijaya Karnataka Web fire at cottonjin lakhs of rs damage
ಹತ್ತಿಜಿನ್‌ಗೆ ಬೆಂಕಿ: ಲಕ್ಷಾಂತರ ರೂ. ಹಾನಿ


ಇಲ್ಲಿನ ಎಪಿಎಂಸಿ ಹಿಂಭಾಗದಲ್ಲಿರುವ ವಿಜಯಲಕ್ಷ್ಮಿ ಟ್ರೆಡರ್ಸ್‌ನಲ್ಲಿಶುಕ್ರವಾರ ಸಂಜೆ ವಿದ್ಯುತ್‌ ಶಾರ್ಟ್‌ ಬೋರ್ಡ್‌ನಲ್ಲಿಶಾರ್ಟ್‌ ಸಕ್ರ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ. ಹೀಗಾಗಿ ಬಿಡಿಸಿದ ಹಾಗೂ ಸ್ಪಿನ್ನಿಂಗ್‌ ಮಾಡಿದ್ದ ಹತ್ತಿ ದಾಸ್ತಾನಿಗೆ ಬೆಂಕಿ ಕಿಡಿಯು ಇಡೀ ಗೋದಾಮಿಗೆ ವ್ಯಾಪಿಸಿದೆ.

ಘಟನೆ ಕುರಿತು ಸುದ್ದಿ ತಿಳಿಯುತ್ತಿದ್ದಂತೆ ಎರಡು ಅಗ್ನಿ ಶಾಮಕ ವಾಹನಗಳೊಂದಿಗೆ ಸ್ಥಳಕ್ಕೆ ಆಗಮಿಸಿದ್ದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಒಂದೆಡೆ ಬೆಂಕಿ ನಿಯಂತ್ರಣಕ್ಕೆ ಬರುತ್ತಿದೆ ಎನ್ನುವಷ್ಟರಲ್ಲಿಮತ್ತೊಂದು ಹೊಗೆ ಕಾಣಿಸಿಕೊಂಡು ಹೊತ್ತಿ ಉರಿಯುತ್ತಿತ್ತು. ಒಟ್ಟು ಐದು ಅಗ್ನಿ ಶಾಮಕ ವಾಹನಗಳ ನೆರವಿನಿಂದ ಸುಮಾರು ಒಂದೂವರೆ ಗಂಟೆ ಕಾಲ ಶ್ರಮಿಸಿ, ಬೆಂಕಿ ನಂದಿಸುವ ಕಾರ್ಯ ಮಾಡಲಾಯಿತು.

ಬಸವರಾಜ್‌ ಆರ್‌.ಹುಮ್ನಾಬಾದಿ ಎಂಬುವರಿಗೆ ಸೇರಿದ ಹತ್ತಿ ಮಿಲ್‌ ಇದಾಗಿದ್ದು, ಅಗ್ನಿ ಅವಘಡದಿಂದ ಲಕ್ಷಾಂತರ ರೂ. ಮೌಲ್ಯದ ಹತ್ತಿ ಹಾನಿಯಾಗಿದೆ ಎಂದು ಅಗ್ನಿ ಶಾಮಕ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಕುರಿತು ಬೆಟಗೇರಿ ಬಡಾವಣೆ ಪೊಲೀಸ್‌ ಠಾಣೆಯಲ್ಲಿಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ