ಆ್ಯಪ್ನಗರ

2 ರಂದು ಗದಗ ಬಂದ್‌

ಗದಗ : ಇತ್ತೀಚೆಗೆ ಹಿರೇಬಾಗೇವಾಡಿ ಬಸ್‌ ನಿಲ್ದಾಣದಲ್ಲಿ ಅನುಮಾನಾಸ್ಪದವಾಗಿ ಸಾವಿಗೀಡಾದ ಶಿವು ಉಪ್ಪಾರ ಪ್ರಕರಣ ಸಿಬಿಐ ವಹಿಸುವಂತೆ ಆಗ್ರಹಿಸಿ ವಿವಿಧ ಹಿಂದು ಸಂಘಟನೆಗಳ ಸಹಯೋಗದಲ್ಲಿ ಜು.2 ರಂದು ಗದಗ ಬಂದ್‌ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀರಾಮ ಸೇನೆ ಧಾರವಾಡ ವಿಭಾಗದ ಸಂಘಟನಾ ಕಾರ್ಯದರ್ಶಿ ರಾಜು ಖಾನಪ್ಪನವರ ಹೇಳಿದರು.

Vijaya Karnataka 30 Jun 2019, 5:00 am
ಗದಗ : ಇತ್ತೀಚೆಗೆ ಹಿರೇಬಾಗೇವಾಡಿ ಬಸ್‌ ನಿಲ್ದಾಣದಲ್ಲಿ ಅನುಮಾನಾಸ್ಪದವಾಗಿ ಸಾವಿಗೀಡಾದ ಶಿವು ಉಪ್ಪಾರ ಪ್ರಕರಣ ಸಿಬಿಐ ವಹಿಸುವಂತೆ ಆಗ್ರಹಿಸಿ ವಿವಿಧ ಹಿಂದು ಸಂಘಟನೆಗಳ ಸಹಯೋಗದಲ್ಲಿ ಜು.2 ರಂದು ಗದಗ ಬಂದ್‌ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀರಾಮ ಸೇನೆ ಧಾರವಾಡ ವಿಭಾಗದ ಸಂಘಟನಾ ಕಾರ್ಯದರ್ಶಿ ರಾಜು ಖಾನಪ್ಪನವರ ಹೇಳಿದರು.
Vijaya Karnataka Web gadag bandh on the 2nd july
2 ರಂದು ಗದಗ ಬಂದ್‌

ಶನಿವಾರ ನಗರದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,ರಾಜ್ಯದಲ್ಲಿ ಗೋವುಗಳ ಹತ್ಯೆ ನಿರಂತರವಾಗಿ ನಡೆಯುತ್ತಿದೆ. ಹೀಗಾಗಿ ನಿತ್ಯ ರಾಜ್ಯದಲ್ಲಿ ಸಾವಿರಾರು ಗೋವುಗಳನ್ನು ಕಳ್ಳಸಾಗಾಣಿಕೆಯ ಮೂಲಕ ಕಸಾಯಿಖಾನೆಗೆ ರವಾನಿಸಲಾಗುತ್ತಿದೆ. ಇದನ್ನು ತಡೆಯಲು ಬಂದ ಗೋರಕ್ಷ ಕರ ಮೇಲೆ ಹಲ್ಲೆಯಂತಹ ಘಟನೆಗಳು ನಡೆಯುತ್ತಿದೆ. ಸರಕಾರ ಇಂತಹ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿ ಸಿಬಿಐ ತನಿಖೆಗೆ ನೀಡಬೇಕು ಎಂದರು.

ಗದಗ ಬಂದ್‌ಗೆ ಪೆಟ್ರೊಲ್‌ ಬಂಕ್‌, ಕಿರಾಣಿ ಅಂಗಡಿ, ಚಲನಚಿತ್ರ ಮಂದಿರಗಳು ಬೆಂಬಲ ವ್ಯಕ್ತಪಡಿಸಿವೆ ಎಂದರು.ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ಮಹೇಶ ರೋಖಡೆ, ಮುತ್ತಣ್ಣ ಪವಾಡಶೆಟ್ಟರ, ಶಿವಾನಂದ ಹಿರೇಮಠ, ಅಪ್ಪು ದುಂಡಸಿ, ರಾಜು ಗದ್ದಿ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ