ಆ್ಯಪ್ನಗರ

ಹಾನಿಗೊಂಡ ಕಟ್ಟಡ ವರದಿ ನೀಡಿ

ಗದಗ: ಜಿಲ್ಲೆಯಲ್ಲಿನೆರೆ ಪ್ರವಾಹದಿಂದ ಸಂಕಷ್ಟಕ್ಕೊಳಗಾದ ಗ್ರಾಮಗಳಲ್ಲಿನ ಶಾಲಾ ಹಾಗೂ ಅಂಗನವಾಡಿ ಕಟ್ಟಡಗಳ ಸ್ಥಳಗಳ ಪರಿಶೀಲನೆ ಮಾಡಿ ಸಂಬಂಧಪಟ್ಟ ಹಾನಿಗಳ ವರದಿ ತಯಾರಿಸಿ ಸಲ್ಲಿಸಬೇಕು. ಇದಕ್ಕಾಗಿ ವಿಶೇಷ ಕ್ರಿಯಾ ಯೋಜನೆ ರೂಪಿಸಲು ಉದ್ದೇಶಿಸಲಾಗಿದೆ ಎಂದು ಸಂಸದ ಶಿವಕುಮಾರ ಉದಾಸಿ ಹೇಳಿದರು.

Vijaya Karnataka 16 Oct 2019, 5:00 am
ಗದಗ: ಜಿಲ್ಲೆಯಲ್ಲಿನೆರೆ ಪ್ರವಾಹದಿಂದ ಸಂಕಷ್ಟಕ್ಕೊಳಗಾದ ಗ್ರಾಮಗಳಲ್ಲಿನ ಶಾಲಾ ಹಾಗೂ ಅಂಗನವಾಡಿ ಕಟ್ಟಡಗಳ ಸ್ಥಳಗಳ ಪರಿಶೀಲನೆ ಮಾಡಿ ಸಂಬಂಧಪಟ್ಟ ಹಾನಿಗಳ ವರದಿ ತಯಾರಿಸಿ ಸಲ್ಲಿಸಬೇಕು. ಇದಕ್ಕಾಗಿ ವಿಶೇಷ ಕ್ರಿಯಾ ಯೋಜನೆ ರೂಪಿಸಲು ಉದ್ದೇಶಿಸಲಾಗಿದೆ ಎಂದು ಸಂಸದ ಶಿವಕುಮಾರ ಉದಾಸಿ ಹೇಳಿದರು.
Vijaya Karnataka Web give a damaged building report
ಹಾನಿಗೊಂಡ ಕಟ್ಟಡ ವರದಿ ನೀಡಿ


ಮಂಗಳವಾರ ನಗರದ ಜಿಪಂ ಸಭಾಂಗಣದಲ್ಲಿನಡೆದ ಜಿಲ್ಲಾಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ( ದಿಶಾ) ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಾಮಾಜಿಕ ಲೆಕ್ಕ ಪರಿಶೋಧನಾ ವರದಿಗೆ ಸಂಬಂಧಿಸಿದಂತೆ ತಾಪಂ ಕಾರ‍್ಯನಿರ್ವಹಣಾಧಿಕಾರಿಗಳನ್ನೊಳಗೊಂಡಂತೆ ಜಿಪಂ ಮುಖ್ಯ ಕಾರ‍್ಯನಿರ್ವಹಣಾಧಿಕಾರಿ ಅಧ್ಯಕ್ಷತೆಯಲ್ಲಿಸಭೆ ಜರುಗಿಸಬೇಕು. ಸಾಮಾಜಿಕ ಲೆಕ್ಕ ಪರಿಶೋಧನೆ ವ್ಯವಸ್ಥೆ ಬಲಿಷ್ಟಪಡಿಸಿದರೆ ಯೋಜನೆಗಳ ದುರುಪಯೋಗ ತಪ್ಪುತ್ತದೆ.

ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಮಾತನಾಡಿ, ವೃದ್ಧಾಪ್ಯ ವೇತನ ಯೋಜನೆಯಡಿ 28,903 ಫಲಾನುಭವಿಗಳಿಗೆ 2.35 ಕೋಟಿ, ವಿಧವಾ ವೇತನ ಯೋಜನೆಯಡಿ 61,708 ಫಲಾನುಭವಿಗಳಿಗೆ 3.76 ಕೋಟಿ ರೂ. , ಅಂಗವಿಕಲರ ವೇತನ ಯೋಜನೆಯಡಿ 3.15 ಕೋಟಿ ರೂ. ವಿತರಣೆ ಆಗಿದೆ ಎಂದರು.

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ವಿವಿಧ ಕಾರ‍್ಯಕ್ರಮಗಳಿಗಾಗಿ 22.97 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು 9.13 ಕೋಟಿ ರೂ. ಖರ್ಚಾಗಿದೆ ಎಂದು ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ವಿರುಪಾಕ್ಷರಡ್ಡಿ ಮಾದಿನೂರ ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಅಕ್ಕಮಹಾದೇವಿ ಮಾತನಾಡಿ, ಐಸಿಡಿಎಸ್‌ ಯೋಜನೆಯಡಿ 13.58 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು ಆ ಪೈಕಿ 8.76 ಕೋಟಿ ರೂ. ಖರ್ಚಾಗಿದೆ ಎಂದರು.

ಸಾರ್ವಜನಿಕ ಶಿಕ್ಷಣ ಇಲಾಖೆ, ತೋಟಗಾರಿಕೆ, ಹೆಸ್ಕಾಂ, ನಗರಾಭಿವೃದ್ಧಿ , ಜಿಲ್ಲಾಕೌಶಲ್ಯಾಭಿವೃದ್ಧಿ, ಆಹಾರ ನಾಗರಿಕ ಸರಬರಾಜು, ಭಾರತ ಸಂಚಾರ ನಿಗಮ , ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡಸಲಾಯಿತು.

ಜಿಪಂ ಅಧ್ಯಕ್ಷ ಸಿದ್ಧಲಿಂಗೇಶ್ವರ ಪಾಟೀಲ, ಜಿಪಂ ಮುಖ್ಯ ಕಾರ‍್ಯನಿರ್ವಹಣಾಧಿಕಾರಿ ಡಾ. ಆನಂದ್‌ ಕೆ , ಉಪ ಅರಣ್ಯ ಸಂರಕ್ಷಣಾಧಿಕಾರಿ ಸೂರ‍್ಯಸೇನ , ಜಿಪಂ ಉಪಕಾರ‍್ಯದರ್ಶಿ ಪ್ರಾಣೇಶ ರಾವ್‌ , ಜಿಪಂ ಯೋಜನಾ ನಿರ್ದೇಶಕ ಟಿ. ದಿನೇಶ, ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಇದ್ದರು.

1,32,231 ರೈತರು ನೊಂದಣಿ:

ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ ಮಾತನಾಡಿ, ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಕಿಸಾನ ಸಮ್ಮಾನ್‌ ನಿಧಿ ಯೋಜನೆಯಡಿ ಈಗಾಗಲೇ ಜಿಲ್ಲೆಯ 1,32,231 ರೈತರು ಹೆಸರನ್ನು ನೊಂದಾಯಿಸಿದ್ದು ಆ ಪೈಕಿ 1,06.351 ಜನರಿಗೆ ಹಣ ಪಾವತಿ ಆರಂಭಗೊಂಡಿದೆ. ರಸಗೊಬ್ಬರ ವಿತರಣೆಗೆ ಯಾವುದೇ ಸಮಸ್ಯೆ ಇಲ್ಲಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ