ಆ್ಯಪ್ನಗರ

ಆರೋಗ್ಯದತ್ತ ಹೆಚ್ಚಿನ ಕಾಳಜಿ ಅಗತ್ಯ

ಗದಗ : ವಿದ್ಯಾರ್ಥಿಗಳು ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ಸಮತೋಲಿತ ಹಾಗೂ ಪೌಷ್ಟಿಕ ಆಹಾರ ಸೇವನೆ ಮೂಲಕ ತಮ್ಮ ಆರೋಗ್ಯ ಸ್ಥಿತಿ ಸದೃಢವಾಗಿಟ್ಟುಕೊಳ್ಳಬೇಕೆಂದು ಡಾ.ಗೀತಾ ಧನಗರ ಹೇಳಿದರು.

Vijaya Karnataka 14 Mar 2019, 5:00 am
ಗದಗ : ವಿದ್ಯಾರ್ಥಿಗಳು ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ಸಮತೋಲಿತ ಹಾಗೂ ಪೌಷ್ಟಿಕ ಆಹಾರ ಸೇವನೆ ಮೂಲಕ ತಮ್ಮ ಆರೋಗ್ಯ ಸ್ಥಿತಿ ಸದೃಢವಾಗಿಟ್ಟುಕೊಳ್ಳಬೇಕೆಂದು ಡಾ.ಗೀತಾ ಧನಗರ ಹೇಳಿದರು.
Vijaya Karnataka Web GDG-13RUDRAGOUD8
ಗದಗನ ತಾಲೂಕಿನ ನರಸಾಪುರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣೆ ನಡೆಸಲಾಯಿತು.


ತಾಲೂಕಿನ ನರಸಾಪುರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸರಕಾರಿ ಪಾಲಿಟೆಕ್ನಿಕ್‌ ಸಂಸ್ಥೆಯ ಎನ್‌ಎಸ್‌ಎಸ್‌ ಘಟಕದಿಂದ ಹಮ್ಮಿಕೊಂಡಿರುವ ವಾರ್ಷಿಕ ವಿಶೇಷ ಶಿಬಿರದ ಪ್ರಯುಕ್ತ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ಮಾತನಾಡಿದರು.

ವಿದ್ಯಾರ್ಥಿಗಳು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಬೇಸಿಗೆ ಸಂದರ್ಭದಲ್ಲಿ ಶುದ್ಧ ನೀರನ್ನು ಸೇವಿಸಬೇಕು. ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿವಹಿಸಬೇಕು. ನಾವು ಸೇವಿಸುವ ಆಹಾರವು ನಮ್ಮ ಆರೋಗ್ಯವನ್ನು ಬಲಿಷ್ಠ ಮಾಡುತ್ತದೆ ಎಂದರು.ಶಿಬಿರದಲ್ಲಿ ಒಟ್ಟು 124 ವಿದ್ಯಾರ್ಥಿಗಳ ಹಾಗೂ ನಾಗರಿಕರ ಆರೋಗ್ಯ ತಪಾಸಣೆ ನಡೆಸಿ ಉಚಿತ ಔಷಧಿ ವಿತರಿಸಲಾಯಿತು.ಡಾ.ಪ್ರೇಮಾ ಬಾಬಣ್ಣವರ, ದೀಪಾ ಬೇವೂರ, ವೀರಣ್ಣ ಹಾದಿಮನಿ, ವಿದ್ಯಾರ್ಥಿಗಳು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ