ಆ್ಯಪ್ನಗರ

ರಾಜ್ಯದಲ್ಲಿ ಮಾನವ ಹಕ್ಕು ಉಲ್ಲಂಘನೆ: ಎಚ್ಕೆ

ಗದಗ : ರಾಜ್ಯದಲ್ಲಿಕೊರೊನಾ ನಿಯಂತ್ರಣ ಮಾಡುವಲ್ಲಿಸರಕಾರ ಸಂಪೂರ್ಣ ನಿಷ್ಕಿ್ರಯವಾಗಿದೆ. ಅದರ ಜೊತೆಗೆ ಮಾನವ ಹಕ್ಕುಗಳ ಉಲ್ಲಂಘನೆಯೂ ಆಗುತ್ತಿದೆ ಎಂದು ಶಾಸಕ ಎಚ್‌.ಕೆ. ಪಾಟೀಲ ಆರೋಪಿಸಿದ್ದಾರೆ.

Vijaya Karnataka 11 Jul 2020, 5:26 pm
ಗದಗ : ರಾಜ್ಯದಲ್ಲಿಕೊರೊನಾ ನಿಯಂತ್ರಣ ಮಾಡುವಲ್ಲಿಸರಕಾರ ಸಂಪೂರ್ಣ ನಿಷ್ಕಿ್ರಯವಾಗಿದೆ. ಅದರ ಜೊತೆಗೆ ಮಾನವ ಹಕ್ಕುಗಳ ಉಲ್ಲಂಘನೆಯೂ ಆಗುತ್ತಿದೆ ಎಂದು ಶಾಸಕ ಎಚ್‌.ಕೆ. ಪಾಟೀಲ ಆರೋಪಿಸಿದ್ದಾರೆ.
Vijaya Karnataka Web human rights violations in the state hk
ರಾಜ್ಯದಲ್ಲಿ ಮಾನವ ಹಕ್ಕು ಉಲ್ಲಂಘನೆ: ಎಚ್ಕೆ


ಈ ಕುರಿತು ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಿಗೆ ಪತ್ರ ಬರೆದಿರುವ ಅವರು, ರಾಜ್ಯದಲ್ಲಿಪ್ರತಿನಿತ್ಯ 2 ಸಾವಿರ ಜನ ಸೋಂಕಿಗೆ ಒಳಗಾಗುತ್ತಿದ್ದಾರೆ. 40 ರಿಂದ 50 ಜನ ಮೃತಪಡುತ್ತಿದ್ದಾರೆ. ಸರಕಾರದ ನಿರ್ಲಕ್ಷ್ಯ, ಅಪ್ರಾಮಾಣಿಕತೆ ಮತ್ತು ಸಮನ್ವಯತೆ ಕೊರತೆಯಿಂದ ಎದ್ದು ಕಾಣುತ್ತಿದೆ ಎಂದು ದೂರಿದ್ದಾರೆ.

ಇದರ ಪರಿಣಾಮ ರೋಗಿಗಳಿಗೆ ಸರಿಯಾದ ಚಿಕಿತ್ಸೆ ದೊರೆಯುತ್ತಿಲ್ಲ, ಆಂಬ್ಯುಲೆನ್ಸ್‌ ಸಿಗದೆ ಒದ್ದಾಡುವಂತಾಗಿದೆ. ಆಸ್ಪತ್ರೆಗೆ ಹೋದರೆ ಬೆಡ್‌ ಕೊರತೆ, ವೈದ್ಯರು ಮತ್ತು ವೈದ್ಯಕೀಯ ಸೌಲಭ್ಯ ಕೊರತೆ ಕಾಡುತ್ತಿದೆ. ಕೊರೊನಾ ಸೋಂಕಿಗೆ ಬಲಿಯಾದವರಿಗೆ ಗೌರವಯುತ ಅಂತ್ಯಸಂಸ್ಕಾರವೂ ನಡೆಯುತ್ತಿಲ್ಲ. ಇವೆಲ್ಲವೂ ಮಾನವ ಹಕ್ಕುಗಳ ಉಲ್ಲಂಘನೆ. ಆಯೋಗದ ಅಧ್ಯಕ್ಷರು, ಸದಸ್ಯರು ಸಹ ತಮ್ಮ ಜವಾಬ್ದಾರಿಯಿಂದ ವಿಮುಖರಾದಂತೆ ಕಾಣುತ್ತಿದೆ. ಹೀಗಾಗಿ ತಕ್ಷಣ ಮಾನವ ಹಕ್ಕುಗಳ ಆಯೋಗ ಕ್ರಮ ಕೈಗೊಳ್ಳಬೇಕು, ಹಕ್ಕುಗಳ ಉಲ್ಲಂಘನೆ ಮಾಡಿದವರಿಗೆ ಶಿಕ್ಷೆಗೆ ಗುರಿಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ