ಆ್ಯಪ್ನಗರ

ದೇಶಿ ಕ್ರೀಡೆಗಳನ್ನು ಬೆಳಸುವುದು ಪ್ರತಿಯೊಬ್ಬರ ಕರ್ತವ್ಯ

ಗದಗ: ಆಧುನಿಕ ದಿನಮಾನದಲ್ಲಿ ವಿದೇಶಿ ಕ್ರೀಡೆಗಳಿಗೆ ಹೆಚ್ಚು ಮಹತ್ವ ದೊರಕುತ್ತಿರುವ ಸಂದರ್ಭದಲ್ಲಿ ಭಾರತದಂತಹ ದೇಶದಲ್ಲಿ ಪಾರಂಪರಿಕ ದೇಶಿ ಕ್ರೀಡೆಗಳು ಮಹತ್ವ ಕಳೆದುಕೊಳ್ಳುತ್ತಿರುವುದು ವಿಷಾದನೀಯ ಸಂಗತಿ ಎಂದು ಜ.ಡಾ.ತೋಂಟದ ಸಿದ್ಧರಾಮ ಸ್ವಾಮೀಜಿ ಹೇಳಿದರು.

Vijaya Karnataka 16 Apr 2019, 5:00 am
ಗದಗ: ಆಧುನಿಕ ದಿನಮಾನದಲ್ಲಿ ವಿದೇಶಿ ಕ್ರೀಡೆಗಳಿಗೆ ಹೆಚ್ಚು ಮಹತ್ವ ದೊರಕುತ್ತಿರುವ ಸಂದರ್ಭದಲ್ಲಿ ಭಾರತದಂತಹ ದೇಶದಲ್ಲಿ ಪಾರಂಪರಿಕ ದೇಶಿ ಕ್ರೀಡೆಗಳು ಮಹತ್ವ ಕಳೆದುಕೊಳ್ಳುತ್ತಿರುವುದು ವಿಷಾದನೀಯ ಸಂಗತಿ ಎಂದು ಜ.ಡಾ.ತೋಂಟದ ಸಿದ್ಧರಾಮ ಸ್ವಾಮೀಜಿ ಹೇಳಿದರು.
Vijaya Karnataka Web GDG-15Rudragoud3
ಗದಗನ ಬಸವೇಶ್ವರ ಮಹಾವಿದ್ಯಾಲಯದ ಮೈದಾನದಲ್ಲಿ ಏರ್ಪಡಿಸಿದ್ದ ರಾಜ್ಯಮಟ್ಟದ ಬಾಲಕ ಮತ್ತು ಬಾಲಕಿಯರ ಕಬಡ್ಡಿ ಪಂದ್ಯಾವಳಿಯನ್ನು ಜ.ಡಾ.ತೋಂಟದ ಸಿದ್ಧರಾಮ ಸ್ವಾಮೀಜಿ ಉದ್ಘಾಟಿಸಿದರು.


ನಗರದ ತೋಂಟದಾರ್ಯ ಮಠದ ಜಾತ್ರಾ ಸಮಿತಿ ಹಾಗೂ ಜಿಲ್ಲಾ ಅಮೇಚೂರು ಕಬಡ್ಡಿ ಅಸೋಸಿಯೇಶನ್‌ ವತಿಯಿಂದ ಜ.ತೋಂಟದಾರ್ಯ ಮಠದ ಜಾತ್ರಾ ಮಹೋತ್ಸವದ ಅಂಗವಾಗಿ ಬಸವೇಶ್ವರ ಮಹಾವಿದ್ಯಾಲಯದ ಮೈದಾನದಲ್ಲಿ ಏರ್ಪಡಿಸಿದ್ದ ರಾಜ್ಯಮಟ್ಟದ ಬಾಲಕ ಮತ್ತು ಬಾಲಕಿಯರ ಕಬಡ್ಡಿ ಪಂದ್ಯಾವಳಿಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿ, ಭಾರತೀಯರು ಪಾರಂಪರಿಕವಾಗಿ ಬೆಳೆದು ಬಂದ ದೇಶಿ ಕ್ರೀಡೆಗಳನ್ನು ರಕ್ಷಿಸಿ ಬೆಳೆಸುವುದು ಆದ್ಯ ಕರ್ತವ್ಯವಾಗಿದೆ. ಕಬಡ್ಡಿ ರಾಷ್ಟ್ರೀಯ ಕ್ರೀಡೆಯಾಗಿದ್ದು ಇದು ದೈಹಿಕ, ಮಾನಸಿಕ ದೃಢತೆಗೆ ಹೆಚ್ಚು ಉಪಯುಕ್ತವಾಗಿದೆ ಎಂದರು.

ಅಮೇಚೂರು ಕಬಡ್ಡಿ ಅಸೋಶಿಯೇಷನ್‌ ಮುಖ್ಯಸ್ಥ ಗಣಾಚಾರಿ ಮಾತನಾಡಿದರು. ಕಬಡ್ಡಿ ಪಂದ್ಯಾವಳಿಯಲ್ಲಿ ಜಿಲ್ಲೆಯ ಅನೇಕ ಪ್ರದೇಶಗಳಿಂದ 18 ಕಬಡ್ಡಿ ತಂಡ ಭಾಗವಹಿಸಿದ್ದವು. ಜಾತ್ರಾ ಸಮಿತಿ ಅಧ್ಯಕ್ಷ ಡಾ.ಎಂ.ಬಿ.ನಿಂಬಣ್ಣವರ, ಆರೋಗ್ಯ ಸಮಿತಿ ಚೇರಮನ್‌ ಡಾ.ಅನಂತ ಶಿವಪುರ, ಜಾತ್ರಾ ಸಮಿತಿ ಉಪಾಧ್ಯಕ್ಷ ಅಮರೇಶ ಅಂಗಡಿ, ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷ ಶೇಖಣ್ಣ ಕವಳಿಕಾಯಿ ಇದ್ದರು.

ಮೃತ್ಯುಂಜಯ ಹಿರೇಮಠ ಪ್ರಾರ್ಥಿಸಿದರು. ಕೊಟ್ರೇಶ ಮೆಣಸಿನಕಾಯಿ ಸ್ವಾಗತಿಸಿದರು. ಪ್ರೊ.ವೈ.ಎಸ್‌.ಮತ್ತೂರ ನಿರೂಪಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ