ಆ್ಯಪ್ನಗರ

ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

ಗದಗ: ನಗರದ ಕೆ.ಎಚ್‌.ಪಾಟೀಲ ಜಿಲ್ಲಾಕ್ರೀಡಾಂಗಣದಲ್ಲಿನ. 1 ರಂದು ಬೆಳಗ್ಗೆ 9 ಕ್ಕೆ ಕನ್ನಡ ರಾಜ್ಯೋತ್ಸವ ದಿನಾಚರಣೆ, ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮ ಏರ್ಪಡಿಸಲಾಗಿದೆ.ಗದಗ ಜಿಲ್ಲಾಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಧ್ವಜಾರೋಹಣ ನೆರವೇರಿಸುವರು. ಶಾಸಕ ಎಚ್‌.ಕೆ. ಪಾಟೀಲ ಅಧ್ಯಕ್ಷತೆ ವಹಿಸುವರು.

Vijaya Karnataka Web 31 Oct 2019, 5:00 am
ಗದಗ: ನಗರದ ಕೆ.ಎಚ್‌.ಪಾಟೀಲ ಜಿಲ್ಲಾಕ್ರೀಡಾಂಗಣದಲ್ಲಿನ. 1 ರಂದು ಬೆಳಗ್ಗೆ 9 ಕ್ಕೆ ಕನ್ನಡ ರಾಜ್ಯೋತ್ಸವ ದಿನಾಚರಣೆ, ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮ ಏರ್ಪಡಿಸಲಾಗಿದೆ.ಗದಗ ಜಿಲ್ಲಾಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಧ್ವಜಾರೋಹಣ ನೆರವೇರಿಸುವರು. ಶಾಸಕ ಎಚ್‌.ಕೆ. ಪಾಟೀಲ ಅಧ್ಯಕ್ಷತೆ ವಹಿಸುವರು.
Vijaya Karnataka Web kannada rajyotsava program
ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ


ಜಿಪಂ ಅಧ್ಯಕ್ಷ ಸಿದ್ಧಲಿಂಗೇಶ ಪಾಟೀಲ , ಸಂಸದರಾದ ಶಿವಕುಮಾರ ಉದಾಸಿ, ಪಿ.ಸಿ. ಗದ್ದಿಗೌಡರ, ಶಾಸಕರಾದ ಕಳಕಪ್ಪ ಬಂಡಿ, ರಾಮಣ್ಣ ಲಮಾಣಿ, ವಿಧಾನ ಪರಿಷತ್‌ ಸದಸ್ಯರಾದ ಶ್ರೀನಿವಾಸ ಮಾನೆ, ಎಸ್‌.ವಿ. ಸಂಕನೂರ, ಪ್ರದೀಪ ಶೆಟ್ಟರ್‌, ಜಿಪಂ ಉಪಾಧ್ಯಕ್ಷೆ ಶಕುಂತಲಾ ಮೂಲಿಮನಿ, ತಾಪಂ ಅಧ್ಯಕ್ಷ ಎಸ್‌.ಎಸ್‌. ಪಾಟೀಲ, ಉಪಾಧ್ಯಕ್ಷೆ ಸುಜಾತಾ ಖಂಡು ಮುಖ್ಯ ಅತಿಥಿಗಳಾಗಿ ಆಗಮಿಸುವರು. ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಜಿಲ್ಲಾಪೊಲೀಸ್‌ ವರಿಷ್ಠಾಧಿಕಾರಿ ಶ್ರೀನಾಥ ಜೋಶಿ,ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್‌ ಕೆ. ಕಾರ್ಯಕ್ರಮದಲ್ಲಿಭಾಗವಹಿಸುವರು.

ರಾಜ್ಯೋತ್ಸವದ ಕಾರ್ಯಕ್ರಮ:
ನ. 1 ರಂದು ಬೆಳಗ್ಗೆ 7.15ಕ್ಕೆ ಮುನ್ಸಿಪಲ್‌ ಕಾಲೇಜು ಮೈದಾನದಲ್ಲಿ ಸಚಿವ ಸಿ.ಸಿ.ಪಾಟೀಲ ಅವರಿಂದ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ, ನಂತರ ಸ್ತಬ್ಧಚಿತ್ರ ಹಾಗೂ ಕಲಾ ತಂಡಗಳ ಮೆರವಣಿಗೆ ಜರುಗಲಿದೆ. ಬೆಳಗ್ಗೆ 8.45ಕ್ಕೆ ಎಲ್ಲಚುನಾಯಿತ ಪ್ರತಿನಿದಿಗಳು ಹಾಗೂ ಎಲ್ಲಇಲಾಖಾ ಅಧಿಕಾರಿಗಳು ಹಾಗೂ ಸಿಬ್ಬಂದಿ , ವಿವಿಧ ಶಾಲಾ ಕಾಲೇಜುಗಳ ಶಿಕ್ಷಕರು, ಶಿಕ್ಷಕಿಯರು ಹಾಗೂ ವಿದ್ಯಾರ್ಥಿಗಳು, ಎನ್‌ಸಿಸಿ ಹೋಮ್‌ ಗಾರ್ಡ್ಸ್ , ಸೇವಾದಳ , ನಾಗರಿಕರು, ಸಂಸ್ಥೆಗಳ ಪದಾಧಿಕಾರಿಗಳು, ಗಣ್ಯರು ಹಾಗೂ ಸಾರ್ವಜನಿಕರು, ಕೆ.ಎಚ್‌.ಪಾಟೀಲ ಜಿಲ್ಲಾಕ್ರೀಡಾಂಗಣದಲ್ಲಿಸೇರುವುದು. 9 ಕ್ಕೆ ಸಚಿವ ಸಿ.ಸಿ. ಪಾಟೀಲ ಅವರಿಂದ ಧ್ವಜಾರೋಹಣ, ಪರೇಡ್‌ ವೀಕ್ಷಣೆ, ಪಥ ಸಂಚಲನ ಹಾಗೂ ವಂದನೆ ಸ್ವೀಕಾರ, ರಾಜ್ಯೊತ್ಸವ ಸಂದೇಶ, ವಿವಿಧ ಕ್ಷೇತ್ರಗಳಲ್ಲಿಸಾಧನೆ ಮಾಡಿದ ಗಣ್ಯರಿಗೆ ಸನ್ಮಾನ, ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು. ಸಂಜೆ 4 ಕ್ಕೆ ನಗರದ ಬಿ.ಆರ್‌. ಅಂಬೇಡ್ಕರ್‌ಭವನದಲ್ಲಿ ಪ್ರಾಯೋಜಿತ ವಿವಿಧ ಕಲಾ ತಂಡಗಳಿಂದ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ವಿವಿಧ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ರ್ಕಾ‍ಯಕ್ರಮಗಳು ಜರುಗಲಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ