ಆ್ಯಪ್ನಗರ

ಗದಗ ಬಳಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ: 10ಕ್ಕೂ ಅಧಿಕ ಜನರಿಗೆ ಗಾಯ

ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾದ ಪರಿಣಾಮ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.

Vijaya Karnataka Web 23 Sep 2019, 10:52 am
ಗದಗ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾದ ಪರಿಣಾಮ 10ಕ್ಕೂ ಅಧಿಕ ಜನರು ಗಾಯಗೊಂಡಿರುವ ಘಟನೆ ಗದಗ ತಾಲೂಕಿನ ನಾರಾಯಣಪುರ ಗ್ರಾಮದ ಬಳಿ ನಡೆದಿದೆ.
Vijaya Karnataka Web ksrtc


ಇಂದು ಬೆಳಗಿನ‌ ಜಾವ ಈ ಘಟನೆ ನಡೆದಿದ್ದು, ಬಸ್ ಕಲಬುರ್ಗಿಯಿಂದ ಧಾರವಾಡಕ್ಕೆ ಹೊರಟಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಸಂಜೀವ್ ಕುಮಾರ್, ಮೊಹ್ಮದ್ ಹರ್ಷದ್, ಮಳೇಂದ್ರಯ್ಯ, ಕೇದಾರನಾಥ, ವಾಸುದೇವರಾವ್, ಭೀಮರೆಡ್ಡಿ, ಭಾಗ್ಯವಂತ, ತೀರ್ಥರಾಜ, ಮಂಜುನಾಥ ಸೇರಿದಂತೆ 10 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ