ಆ್ಯಪ್ನಗರ

ಮುಂಡರಗಿ; ತುಂಬಿ ಹರಿಯುತ್ತಿರುವ ತುಂಗಭದ್ರಾ

ಮುಂಡರಗಿ: ಶಿವಮೊಗ್ಗ ಮತ್ತು ಮಲೆನಾಡಿನ ಭಾಗದಲ್ಲಿಸತತ ಮಳೆ ಸುರಿಯುತ್ತಿರುವುದರಿಂದ ಮುಂಡರಗಿ ತಾಲೂಕಿನ ತುಂಗಭದ್ರಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಹೀಗಾಗಿ ತಾಲೂಕಿನ ಸಿಂಗಟಾಲೂರ ಏತ ನೀರಾವರಿ ಯೋಜನೆಯ ಹಮ್ಮಿಗಿ ಬ್ಯಾರೇಜ್‌ನ 26ಗೇಟ್‌ಗಳ ಪೈಕಿ 19 ಗೇಟ್‌ಗಳ ಮೂಲಕ ನೀರನ್ನು ನದಿಗೆ ಹರಿಬಿಡಲಾಗುತ್ತಿದೆ.

Vijaya Karnataka 8 Aug 2020, 5:00 am
ಮುಂಡರಗಿ: ಶಿವಮೊಗ್ಗ ಮತ್ತು ಮಲೆನಾಡಿನ ಭಾಗದಲ್ಲಿಸತತ ಮಳೆ ಸುರಿಯುತ್ತಿರುವುದರಿಂದ ಮುಂಡರಗಿ ತಾಲೂಕಿನ ತುಂಗಭದ್ರಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಹೀಗಾಗಿ ತಾಲೂಕಿನ ಸಿಂಗಟಾಲೂರ ಏತ ನೀರಾವರಿ ಯೋಜನೆಯ ಹಮ್ಮಿಗಿ ಬ್ಯಾರೇಜ್‌ನ 26ಗೇಟ್‌ಗಳ ಪೈಕಿ 19 ಗೇಟ್‌ಗಳ ಮೂಲಕ ನೀರನ್ನು ನದಿಗೆ ಹರಿಬಿಡಲಾಗುತ್ತಿದೆ.
Vijaya Karnataka Web 7MDR2 TUNG TUMBI_25
ಮುಂಡರಗಿ ತಾಲೂಕಿನ ಸಿಂಗಟಾಲೂರ ಏತ ನೀರಾವರಿ ಯೋಜನೆಯ ಹಮ್ಮಿಗಿ ಬ್ಯಾರೇಜ್‌ನಿಂದ ಅಪಾರ ಪ್ರಮಾಣದ ನೀರನ್ನು ನದಿಗೆ ಹರಿಬಿಡಲಾಗಿದೆ.

ತುಂಗಾ ಜಲಾಶಯದಿಂದ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಹಾಗೆ ವಿವಿಧೆಡೆ ಮಳೆ ಸುರಿಯುತ್ತಿರುವುದರಿಂದ ನದಿಗೆ ನೀರು ಹರಿದು ಬರುತ್ತಿದ್ದು ಬ್ಯಾರೇಜ್‌ನಿಂದ ಆ.7 ರಂದು 83.837 ಕ್ಯೂಸೆಕ್‌ ನೀರನ್ನು ನದಿಗೆ ಬಿಡಲಾಗಿದೆ.

ಸಿಂಗಟಾಲೂರ ಬ್ಯಾರೇಜ್‌ಗೆ 1.83 ಟಿಎಂಸಿಗೂ ಹೆಚ್ಚು ನೀರು ಹರಿದು ಬಂದರೆ ಹಿನ್ನೀರಿಗೆ ಮುಳುಗುವ ಬಿದರಳ್ಳಿ, ಗುಮ್ಮಗೋಳ, ವಿಠಲಾಪುರ ಗ್ರಾಮಗಳಿಗೆ ಪ್ರವಾಹ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ಕಳೆದ ವರ್ಷ ಆಗಷ್ಟ ತಿಂಗಳಿನಲ್ಲೇ ಮುಳುಗಡೆ ಪ್ರದೇಶಕ್ಕೆ ಒಳಪಡುವ ತಾಲೂಕಿನ ಮೂರು ಗ್ರಾಮಗಳು ಸೇರಿ ಮತ್ತಿತರರ ಗ್ರಾಮಗಳಲ್ಲಿಪ್ರವಾಹ ಸಮಸ್ಯೆಯಾಗಿತ್ತು. ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವುದು ನದಿ ಭಾಗದ ಗ್ರಾಮಗಳಲ್ಲಿಪ್ರವಾಹ ಬೀತಿ ಎದುರಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ