ಆ್ಯಪ್ನಗರ

14ರಂದು ರಾಷ್ಟ್ರೀಯ ಲೋಕ ಅದಾಲತ್‌

ಗದಗ: ಜಿಲ್ಲೆಯ ಗದಗ, ರೋಣ, ಲಕ್ಷ್ಮೇಶ್ವರ, ಮುಂಡರಗಿ, ನರಗುಂದ ನ್ಯಾಯಾಲಯಗಳಲ್ಲಿ 14 ರಂದು ಆಯಾ ನ್ಯಾಯಾಲಯಗಳಲ್ಲಿಇತ್ಯರ್ಥಪಡಿಸಿಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್‌ ಏರ್ಪಡಿಸಲಾಗಿದೆ.

Vijaya Karnataka 9 Dec 2019, 5:00 am
ಗದಗ: ಜಿಲ್ಲೆಯ ಗದಗ, ರೋಣ, ಲಕ್ಷ್ಮೇಶ್ವರ, ಮುಂಡರಗಿ, ನರಗುಂದ ನ್ಯಾಯಾಲಯಗಳಲ್ಲಿ 14 ರಂದು ಆಯಾ ನ್ಯಾಯಾಲಯಗಳಲ್ಲಿಇತ್ಯರ್ಥಪಡಿಸಿಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್‌ ಏರ್ಪಡಿಸಲಾಗಿದೆ.
Vijaya Karnataka Web national lok adalat on the 14th
14ರಂದು ರಾಷ್ಟ್ರೀಯ ಲೋಕ ಅದಾಲತ್‌


ಚಾಲ್ತಿ ಇರುವ ಪ್ರಕರಣಗಳು ಹಾಗೂ ಇನ್ನೂ ನ್ಯಾಯಾಲಯಕ್ಕೆ ದಾಖಲಿಸದಿರುವ ಪ್ರಕರಣಗಳನ್ನು ವ್ಯಾಜ್ಯಪೂರ್ವ ಪ್ರಕರಣಗಳು ಎಂದು ಪರಿಗಣಸಿ ಮೋಟಾರು ವಾಹನ ಅಪಘಾತ ಪರಿಹಾರದ ಪ್ರಕರಣಗಳು, ಅಸಲು ದಾವೆಗಳು, ಬ್ಯಾಂಕುಗಳಿಗೆ ಸಂಬಂಧಿಸಿದ ಪ್ರಕರಣಗಳು, ವೈವಾಹಿಕ ಹಾಗೂ ಜೀವನಾಂಶ ಪ್ರಕರಣಗಳು, ಕಾನೂನಿನನ್ವಯ ರಾಜಿ ಆಗಬಹುದಾದ ಕ್ರಿಮಿನಲ್‌ ಪ್ರಕರಣಗಳು, ಚಕ್‌ಬೌನ್ಸ್‌ ಪ್ರಕರಣಗಳು, ರಾಜೀ ಆಗಬಹುದಾದ ಎಲ್ಲತರಹದ ಪ್ರಕರಣಗಳನ್ನು ಇದೇ ಡಿ.14 ರಂದು ಆಯಾ ನ್ಯಾಯಾಲಯಗಳಲ್ಲಿಇತ್ಯರ್ಥಪಡಿಸಿಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್‌ ಏರ್ಪಡಿಸಲಾಗಿದೆ. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ನಿರ್ದೇಶನದ ಮೇರೆಗೆ ನಡೆಯುವ ಈ ಅದಾಲತ್‌ಗಳ ಸದುಪಯೋಗವನ್ನು ಕಕ್ಷಿದಾರರು, ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ಗದಗ ಪ್ರಧಾನ ಜಿಲ್ಲಾಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಜಿ.ಎಸ್‌.ಸಂಗ್ರೇಶಿ ಪ್ರಕಟಣೆಯಲ್ಲಿತಿಳಿಸಿದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ