ಆ್ಯಪ್ನಗರ

ನೆರೆ ಪುನರ್ವಸತಿ ಕಾರ್ಯ ಚುರುಕಾಗಲಿ

ಗದಗ: ಜಿಲ್ಲೆಯ ನೆರೆ ಸಂದರ್ಭದಲ್ಲಿಸಂತ್ರಸ್ತಕ್ಕೊಳಗಾದ ಕುಟುಂಬಗಳ ಪುನರ್ವಸತಿ ಹಾಗೂ ಮೂಲ ಸೌಕರ್ಯಗಳ ಪುನರ್‌ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಲು ರಾಜ್ಯದ ಅಪರ ಮುಖ್ಯಕಾರ್ಯದರ್ಶಿಗಳು, ಉನ್ನತ ಶಿಕ್ಷಣ ಹಾಗೂ ಜಿಲ್ಲಾಉಸ್ತುವಾರಿ ಕಾರ್ಯದರ್ಶಿ ಡಾ.ರಾಜಕುಮಾರ್‌ ಖತ್ರಿ ಸೂಚಿಸಿದರು.

Vijaya Karnataka 26 Feb 2020, 5:00 am
ಗದಗ: ಜಿಲ್ಲೆಯ ನೆರೆ ಸಂದರ್ಭದಲ್ಲಿಸಂತ್ರಸ್ತಕ್ಕೊಳಗಾದ ಕುಟುಂಬಗಳ ಪುನರ್ವಸತಿ ಹಾಗೂ ಮೂಲ ಸೌಕರ್ಯಗಳ ಪುನರ್‌ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಲು ರಾಜ್ಯದ ಅಪರ ಮುಖ್ಯಕಾರ್ಯದರ್ಶಿಗಳು, ಉನ್ನತ ಶಿಕ್ಷಣ ಹಾಗೂ ಜಿಲ್ಲಾಉಸ್ತುವಾರಿ ಕಾರ್ಯದರ್ಶಿ ಡಾ.ರಾಜಕುಮಾರ್‌ ಖತ್ರಿ ಸೂಚಿಸಿದರು.
Vijaya Karnataka Web neighborhood rehabilitation work
ನೆರೆ ಪುನರ್ವಸತಿ ಕಾರ್ಯ ಚುರುಕಾಗಲಿ


ಮಂಗಳವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜರುಗಿದ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯಲ್ಲಿಜಿಲ್ಲೆಯ ವಿವಿಧ ಇಲಾಖೆಗಳ ಯೋಜನೆ ಹಾಗೂ ಕಾಮಗಾರಿಗಳ ಪ್ರಗತಿ ಪರಿಶೀಲಿಸಿ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಬರ ಪರಿಸ್ಥಿತಿ ಸರ್ವೇ ಸಾಮಾನ್ಯವಾಗುತ್ತಿದ್ದು, ಜಿಲ್ಲೆಯಲ್ಲಿನ ಅಂತರ್ಜಲ ಸಂರಕ್ಷಣೆ ಮಳೆ ನೀರು ಸಂಗ್ರಹ ಹಾಗೂ ಪರಿಸ್ಥಿತಿಗನುಗುಣವಾದ ಬೆಳೆಗಳನ್ನು ಬೆಳೆಯುವಂತೆ ಸಂಬಂಧಿತ ಇಲಾಖೆಗಳು ಅಗತ್ಯದ ಕ್ರಮ ಕೈಕೊಳ್ಳಬೇಕು. ಬರ ಪರಿಸ್ಥಿತಿ ಘೋಷಿಸಲು ನಿಯಮಗಳನ್ವಯ ಸಾಧ್ಯವಿಲ್ಲದಿದ್ದಾಗ ಆದರೆ, ಮಳೆ ಆಗದೇ ಕೊಳವೆ ಬಾವಿ ಬತ್ತಿದ ಪರಿಸ್ಥಿತಿಯಲ್ಲಿ ಪ್ರಕೃತಿ ವಿಕೋಪ ಯೋಜನೆಯಡಿ ಅನುದಾನ ಬಳಕೆ ಸಾಧ್ಯವಿಲ್ಲ. ಇಂತಹ ಪರಿಸ್ಥಿತಿಯಲ್ಲಿಜಿಲ್ಲಾಡಳಿತ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸರಕಾರದ ಮಟ್ಟದಲ್ಲಿಇಲಾಖೆಗಳ ಮುಖ್ಯಸ್ಥರೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವುದು ಎಂದರು.

ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಮಾತನಾಡಿ, ಜಿಲ್ಲೆಯ ನೆರೆ ಸಂತ್ರಸ್ತರ ಪುನರ್ವಸತಿ, ಮೂಲ ಸೌಕರ್ಯಗಳ ಪುನರ್‌ ನಿರ್ಮಾಣ, ಬರುವ ಬೇಸಿಗೆಯಲ್ಲಿ ಕುಡಿಯುವ ನೀರು, ಮೇವು, ಉದ್ಯೋಗ ಇವುಗಳ ಸರಿಯಾದ ಪೂರೈಕೆ ಕುರಿತು ಮಾಹಿತಿ ನೀಡಿ ಸಂಬಂಧಿತ ಇಲಾಖೆಗಳು ಈ ಕುರಿತಂತೆ ಕೈಕೊಳ್ಳುವ ಮುನ್ನೆಚ್ಚರಿಕೆ ಕ್ರಮಗಳ ಕುರಿತು ವರದಿ ನೀಡಲು ಸೂಚಿಸಿದರು.

ಜಿಲ್ಲೆಯಲ್ಲಿ1.77 ಲಕ್ಷ ಮೆಟ್ರಿಕ್‌ ಟನ್‌ ಮೇವು ಸಂಗ್ರಹವಿದ್ದು, 21 ವಾರ ಸಾಕಾಗಲಿದೆ. ಜಿಲ್ಲೆಯಲ್ಲಿನ 1.89 ಲಕ್ಷ ಜಾನುವಾರುಗಳಿಗೆ ಕಾಲು ಬೇನೆ ಲಸಿಕೆ ಹಾಕಲಾಗಿದೆ ಎಂದು ಪಶು ಸಂಗೋಪನಾ ಇಲಾಖೆ ಅಧಿಕಾರಿಗಳು ತಿಳಿಸಿದರು.

ಜಿಲ್ಲೆಯಲ್ಲಿ1.02 ಲಕ್ಷ ಆಯುಷ್ಮಾನ್‌ ಆರೋಗ್ಯ ಕಾರ್ಡುದಾರರು ಇದ್ದು, ಈವರೆಗೆ 5820 ಫಲಾನುಭವಿಗಳ ಪೈಕಿ 4,732 ಫಲಾನುಭವಿಗಳಿಗೆ 1.53 ಕೋಟಿ ರೂ.ವೆಚ್ಚದಲ್ಲಿವೈದ್ಯಕೀಯ ಚಿಕಿತ್ಸೆ ನೀಡಲಾಗಿದೆ. ಜಿಲ್ಲೆಯ ಹಿಂಗಾರು ಹಂಗಾಮಿನಲ್ಲಿ2.69 ಲಕ್ಷ ಹೆಕ್ಟೇರ್‌ ಪೈಕಿ 2.50 ಲಕ್ಷ ಹೆಕ್ಟೇರ ನಲ್ಲಿಬಿತ್ತನೆಯಾಗಿದೆ. ಕಡಲೆ ಹಾಗೂ ಶೇಂಗಾ ಬೆಳೆ ಬೆಂಬಲ ಬೆಲೆಯಲ್ಲಿಖರೀದಿಸಲು ಖರೀದಿ ಕೇಂದ್ರ ತೆರೆಯಲಾಗಿದೆ. ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ ಬಿಮಾ ಯೋಜನೆಯಡಿ 2019ರ ಮುಂಗಾರು ಹಂಗಾಮಿನಲ್ಲಿ 72071 ಹಾಗೂ ಹಿಂಗಾರು ಹಂಗಾಮಿನಲ್ಲಿ1.32 ಲಕ್ಷ ರೈತರು ನೋಂದಾಯಿಸಿದ್ದಾರೆ. ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಯಡಿ ಜಿಲ್ಲೆಯ 1,17,990 ರೈತ ಕುಟಂಬಗಳು ಕೇಂದ್ರ ಹಾಗೂ ರಾಜ್ಯ ಸರಕಾರದ ಹಣಕಾಸು ಸೌಲಭ್ಯ ಪಡೆಯುತ್ತಿದೆ. ಜಿಲ್ಲೆಯಲ್ಲಿಬೆಳೆ ಸಮೀಕ್ಷೆಗಾಗಿ ಪೂರ್ವ ಮುಂಗಾರಿಗಾಗಿ 330 ಗ್ರಾಮಗಳ ಪೈಕಿ 260 ಗ್ರಾಮ ಆಯ್ಕೆ ಮಾಡಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರುದ್ರಪ್ಪ ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್‌ ನಂತರ್‌ ವಿದ್ಯಾರ್ಥಿ ವೇತನವನ್ನು ನೀಡುವಲ್ಲಿವಿಳಂಬವಾಗುತ್ತಿದ್ದು ಪರೀಕ್ಷಾ ಸಮಯದಲ್ಲಿಅದನ್ನು ನೀಡುವುದು ಸಮಂಜಸವಾಗುವುದಿಲ್ಲ. ನಿಗದಿತ ಅವಧಿಯಲ್ಲಿವಿದ್ಯಾರ್ಥಿ ವೇತನ ವಿದ್ಯಾರ್ಥಿಗಳಿಗೆ ತಲುಪುವಂತೆ ಅಗತ್ಯದ ಕ್ರಮ ಕೈಕೊಳ್ಳಲು ಜಿಲ್ಲಾಉಸ್ತುವಾರಿ ಕಾರ್ಯದರ್ಶಿಗಳು ಸೂಚಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿ ಬಾರಾಟಕ್ಕೆ ಮಾತನಾಡಿ, ಜಿಲ್ಲೆಯಲ್ಲಿ13,536 ವಿದ್ಯಾರ್ಥಿಗಳು ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಬರೆಯುವುದಕ್ಕೆ ಅರ್ಹತೆ ಪಡೆದಿದ್ದು ಪರೀಕ್ಷೆಯ ಉತ್ತಮ ಫಲಿತಾಂಶಕ್ಕಾಗಿ ಎಲ್ಲರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ 1,166 ಅಂಗನವಾಡಿಗಳಿಗೆ ಹೊಸದಾಗಿ 32 ಅಂಗನವಾಡಿ ಕಾರ್ಯಕರ್ತೆಯರನ್ನು ನೇಮಕಮಾಡಿಕೊಳ್ಳಲಾಗಿದೆ. ಇಲಾಖೆಯ ಯೋಜನೆಗಳ ಜಾರಿಗೆ ಅಗತ್ಯದ ಅನುದಾನವನ್ನು ಬಿಡುಗಡೆ ಮಾಡಿಸಲು ಉಪನಿರ್ದೇಶಕಿ ಡಾ.ಎಚ್‌.ಎಚ್‌. ಕುಕನೂರ ತಿಳಿಸಿದರು.

ಜಿಲ್ಲಾನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರುದ್ರೇಶ ಎಸ್‌.ಎನ್‌. ಮಾತನಾಡಿ, ನರೇಗಾ ಸಂಬಂಧಿಸಿದಂತೆ ಲೋಕೋಪಯೋಗಿ ಇಲಾಖೆಯು 78 ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದು, ಆ ಪೈಕಿ 6.67 ಕೋಟಿ ರೂ. ವೆಚ್ಚದಲ್ಲಿ66 ಕಾಮಗಾರಿ ಪೂರ್ಣಗೊಳಿಸಿದ್ದು 12 ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ತಿಳಿಸಿದರು.

ಜಿಲ್ಲೆಯಲ್ಲಿನ ನಗರ ಪ್ರದೇಶಗಳ ಘನ ತ್ಯಾಜ್ಯ ವಿಲೇವರಿಗೆ ಸಂಬಂಧಿಸಿದಂತೆ ವಾಹನಗಳ ಹಾಗೂ ಸಲಕರಣೆಗಳ ಖರೀದಿಸಲಾಗಿದ್ದು, ವ್ಯವಸ್ಥಿತವಾಗಿ ಘನತ್ಯಾಜ್ಯ ನಿರ್ವಹಣೆಗೆ ಮಾರ್ಚ 15 ರಿಂದ ಕ್ರಮ ವಹಿಸಲಾಗುವುದು ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆನಂದ ಕೆ., ಅಪರ ಜಿಲ್ಲಾಧಿಕಾರಿ ಸತೀಶಕುಮಾರ್‌ ಎಂ, ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ