ಆ್ಯಪ್ನಗರ

ಅಗತ್ಯ ಸೌಲಭ್ಯ ಒದಗಿಸಲು ಸೂಚನೆ

ಗದಗ: ಮಲಪ್ರಭಾ ಅಚ್ಚುಕಟ್ಟು ಪ್ರದೇಶದಲ್ಲಿಮಳೆ ಪ್ರಮಾಣ ಹೆಚ್ಚಳದಿಂದ ನವಿಲುತೀರ್ಥ ಜಲಾಶಯದಿಂದ 22 ಸಾವಿರ ಕ್ಯೂಸೆಕ್‌ ನೀರು ಹೊರಬಿಡಲಾಗುತ್ತಿದ್ದು, ನೀರಿನ ಹೊರ ಹರಿವಿನ ಪ್ರಮಾಣ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. ಅಲ್ಲದೇ ಬೆಣ್ಣಿಹಳ್ಳದ ಪ್ರವಾಹದಿಂದಾಗಿ ನರಗುಂದ ತಾಲೂಕಿನ ಕೊಣ್ಣೂರು, ಹದಲಿ, ವಾಸನ, ಕಪಲಿ, ಬೂದಿಹಾಳ, ಬೆಳ್ಳೆರಿ, ಕುರ್ಲಗೇರಿ ಸುರಕೋಡ ಗ್ರಾಮಗಳು ಜಲಾವೃತಗೊಳ್ಳುವ ಸಂಭವವಿದ್ದು ಅವಶ್ಯಕ ಮುಂಜಾಗೃತಾ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸಚಿವ ಸಿ.ಸಿ. ಪಾಟೀಲ ಸೂಚಿಸಿದರು.

Vijaya Karnataka 22 Oct 2019, 5:00 am

Vijaya Karnataka Web notice to provide necessary facility
ಅಗತ್ಯ ಸೌಲಭ್ಯ ಒದಗಿಸಲು ಸೂಚನೆ

ಮಲಪ್ರಭಾ ನದಿ ಹಾಗೂ ಬೆಣ್ಣೆಹಳ್ಳದ ಪ್ರವಾಹದಿಂದಾಗಿ ನೆರೆಹಾವಳಿಗೊಳಗಾದ ಗ್ರಾಮಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ ಸಚಿವರು, ಜಲಾವೃತಗೊಂಡಂತಹ ಲಕಮಾಪುರ ಗ್ರಾಮಕ್ಕೆ ರಸ್ತೆ ಸಂಪರ್ಕ ಕಳೆದುಕೊಂಡಿದ್ದು ನೀರಿನಲ್ಲಿಸಿಲುಕಿರುವ ಸಂತ್ರಸ್ತರಿಗೆ ಊಟ, ನೀರು ಹಾಗೂ ಅಗತ್ಯದ ಸೌಕರ್ಯ ಪೂರೈಸಲು ಅವಶ್ಯಕ ಕ್ರಮ ಕೈಗೊಳ್ಳಲು ಸೂಚನೆ ನೀಡಿದ ಅವರು, ಗ್ರಾಮಸ್ಥರನ್ನು ಸುರಕ್ಷಿತ ಸ್ಥಳಗಳಿಗೆ ಸಾಗಿಸಲು ಕೂಡಲೇ ಕ್ರಮ ಜರುಗಿಸಲು ಸೂಚಿಸಿದರು. ಮಲಪ್ರಭೆ ನದಿ ನೀರು ಹೊರ ಹರಿವಿನಿಂದ ಕೊಣ್ಣೂರು ಗ್ರಾಮಕ್ಕೆ ಮತ್ತೆ ನೀರು ನುಗ್ಗುವ ಸಾಧ್ಯತೆಯಿದ್ದು ಸಾರ್ವಜನಿಕರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಮನವಿ ಮಾಡಿದ ಅವರು ಸಂತ್ರಸ್ತರಿಗೆ ಕಾಳಜಿ ಕೇಂದ್ರ ಸ್ಥಾಪಿಸಲು ಸೂಚಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ