ಆ್ಯಪ್ನಗರ

ಇಂದು ಖಾಸಗಿ ಆಸ್ಪತ್ರೆಗಳ ಸೇವೆ ಬಂದ್‌

ಗದಗ : ಲೋಕಸಭೆಯಲ್ಲಿ ಎನ್‌ಎಂಸಿ ಮಸೂದೆ ಅಂಗೀಕರಿಸಿದ್ದನ್ನು ಪ್ರತಿಭಟಿಸಿ ನಗರದ ಎಲ್ಲ ಖಾಸಗಿ ಆಸ್ಪತ್ರೆಯ ವೈದ್ಯರು ಜು. 31 ರಂದು ತುರ್ತು ಸೇವೆ ಹೊರತುಪಡಿಸಿ, ಉಳಿದೆಲ್ಲ ವೈದ್ಯಕೀಯ ಸೇವೆ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲಿದ್ದಾರೆ.

Vijaya Karnataka 31 Jul 2019, 5:00 am
ಗದಗ : ಲೋಕಸಭೆಯಲ್ಲಿ ಎನ್‌ಎಂಸಿ ಮಸೂದೆ ಅಂಗೀಕರಿಸಿದ್ದನ್ನು ಪ್ರತಿಭಟಿಸಿ ನಗರದ ಎಲ್ಲ ಖಾಸಗಿ ಆಸ್ಪತ್ರೆಯ ವೈದ್ಯರು ಜು. 31 ರಂದು ತುರ್ತು ಸೇವೆ ಹೊರತುಪಡಿಸಿ, ಉಳಿದೆಲ್ಲ ವೈದ್ಯಕೀಯ ಸೇವೆ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲಿದ್ದಾರೆ.
Vijaya Karnataka Web private hospitals today closed
ಇಂದು ಖಾಸಗಿ ಆಸ್ಪತ್ರೆಗಳ ಸೇವೆ ಬಂದ್‌


ಜು.31ರಂದು ಬೆಳಗ್ಗೆ 9.30ಕ್ಕೆ ನಗರದ ಐಎಂಎ ಯಿಂದ ಮಹಾತ್ಮಾ ಗಾಂಧಿ ವೃತ್ತ, ರೋಟರಿ ವೃತ್ತ, ಭೂಮರಡ್ಡಿ ವೃತ್ತದ ವರೆಗೆ ರಾಜ್ಯ ಐಎಂಎ ಅಧ್ಯಕ್ಷ ಡಾ.ಅನ್ನದಾನಿ ಮೇಟಿ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ನಂತರ ಐಎಂಎ ಸಭಾಂಗಣದಲ್ಲಿ ಸಭೆ ನಡೆಯಲಿದೆ.

ಈ ಹಿನ್ನೆಲೆಯಲ್ಲಿ ಜು. 31ರಂದು ಬೆಳಗ್ಗೆ 6 ರಿಂದ ಆ.1ರ ಬೆಳಗಿನ 6 ಗಂಟೆ ವರೆಗೆ ಖಾಸಗಿ ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆಗಳನ್ನು ಹೊರತುಪಡಿಸಿ ಎಲ್ಲ ವೈದ್ಯಕೀಯ ಚಿಕಿತ್ಸೆ ಬಂದ್‌ ಮಾಡಿ ಪ್ರತಿಭಟನೆ ನಡೆಸಲಾಗುವುದು ಎಂದು ಐಎಂಎ ಅಧ್ಯಕ್ಷ ಡಾ.ಧನೇಶ ದೇಸಾಯಿ, ಕಾರ್ಯದರ್ಶಿ ಡಾ.ಶರಣು ಆಲೂರ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ