ಆ್ಯಪ್ನಗರ

ಕನ್ನಡ ರಾಜ್ಯೋತ್ಸವ,ಭುವನೇಶ್ವರಿ ಭಾವಚಿತ್ರದ ಮೆರವಣಿಗೆ

ಮುಂಡರಗಿ: ವಿಶ್ವ ಕನ್ನಡ ರಕ್ಷಣಾ ವೇದಿಕೆ ಜಿಲ್ಲಾಮತ್ತು ತಾಲೂಕು ಘಟಕ ಆಶ್ರಯದಲ್ಲಿನ.1 ರಂದು ಬೆಳಗ್ಗೆ 9ಕ್ಕೆ ಪಟ್ಟಣದ ಕೊಪ್ಪಳ ವೃತ್ತದಲ್ಲಿ64ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಜರುಗಲಿದೆ ಎಂದು ವಿಶ್ವ ಕನ್ನಡ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಎಂ.ಕೆ.ತಳಗಡೆ ಹೇಳಿದರು.

Vijaya Karnataka 31 Oct 2019, 5:00 am
ಮುಂಡರಗಿ: ವಿಶ್ವ ಕನ್ನಡ ರಕ್ಷಣಾ ವೇದಿಕೆ ಜಿಲ್ಲಾಮತ್ತು ತಾಲೂಕು ಘಟಕ ಆಶ್ರಯದಲ್ಲಿನ.1 ರಂದು ಬೆಳಗ್ಗೆ 9ಕ್ಕೆ ಪಟ್ಟಣದ ಕೊಪ್ಪಳ ವೃತ್ತದಲ್ಲಿ64ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಜರುಗಲಿದೆ ಎಂದು ವಿಶ್ವ ಕನ್ನಡ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಎಂ.ಕೆ.ತಳಗಡೆ ಹೇಳಿದರು.
Vijaya Karnataka Web procession of the portrait of kannada rajyotsava bhubaneswari
ಕನ್ನಡ ರಾಜ್ಯೋತ್ಸವ,ಭುವನೇಶ್ವರಿ ಭಾವಚಿತ್ರದ ಮೆರವಣಿಗೆ


ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿಮಾತನಾಡಿ,ಬೆಳಗ್ಗೆ 9 ಕ್ಕೆ ಧ್ವಜಾರೋಹಣ ಜರುಗಲಿದೆ. ವಿಶ್ವ ಕನ್ನಡ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಎಂ.ಕೆ.ತಳಗಡೆ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ರಾಮಣ್ಣ ಲಮಾಣಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ಕಾರ್ಯಕ್ರಮ ಉದ್ಘಾಟಿಸುವರು. ಅತಿಥಿಗಳಾಗಿ ಜಿಪಂ ಸದಸ್ಯೆ ಶೋಭಾ ಮೇಟಿ, ಈರಣ್ಣ ನಾಡಗೌಡ್ರ, ತಹಸೀಲ್ದಾರ ಡಾ.ವೆಂಕಟೇಶ ನಾಯಕ, ಸಿಪಿಐ ಶ್ರೀನಿವಾಸ ಮೇಟಿ ಆಗಮಿಸಲಿದ್ದಾರೆ.

ನಂತರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಾಯೋಜಕತ್ವದಲ್ಲಿಭುವನೇಶ್ವರಿ ಭಾವಚಿತ್ರದ ಮೆರವಣಿಗೆ ಜರುಗಲಿದೆ.

ನ.8 ಮತ್ತು 9 ರಂದು ವೇದಿಕೆ ಆಶ್ರಯದಲ್ಲಿಅನ್ನದಾನೀಶ್ವರ ತಾಲೂಕು ಕ್ರೀಡಾಂಗಣದಲ್ಲಿವಾಲಿಬಾಲ್‌ ಪಂದ್ಯಾವಳಿ ಆಯೋಜಿಸಲಾಗಿದೆ. ಪ್ರಥಮ ಸ್ಥಾನ ಪಡೆದ ತಂಡಕ್ಕೆ 11,101ರೂ, ದ್ವಿತೀಯ ಸ್ಥಾನ ಪಡೆದ ತಂಡಕ್ಕೆ 7,101ರೂ, ತೃತೀಯ ಸ್ಥಾನ ಪಡೆದುಕೊಂಡ ತಂಡಕ್ಕೆ 3,101ರೂ, ನಗದು ಬಹುಮಾನ ನೀಡಲಾಗುತ್ತದೆ ಎಂದರು.ಭಾಗವಹಿಸುವ ತಂಡದವರು ನ.6ರೊಳಗೆ ಹೆಸರನ್ನು ನೊಂದಾಯಿಸಬೇಕು.ಮಾಹಿತಿಗಾಗಿ ಎಂ.ಕೆ.ತಳಗಡೆ (9448806609),ಅಬುಬಕರ್‌ ಚೌಥಾಯಿ (7676212465) ಅವರನ್ನು ಸಂಪರ್ಕಿಸಬೇಕು ಎಂದರು.

ದುರುಗಪ್ಪ ಮೋರನಾಳ, ದಾವಲ್‌ ಸಾಬ್‌ ಕರ್ನಾಚಿ, ಅಬೂಬಕರ ಚೌತಾಯಿ, ಮಹ್ಮದಅಲಿ ಅಳವಂಡಿ, ಬಾಷುಸಾಬ ಸುಂಕದ ಇತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ