ಆ್ಯಪ್ನಗರ

ಸರಕಾರಿ ಶಾಲೆಗಳಿಗೆ ಶುದ್ಧ ಕುಡಿವ ನೀರು ಪೂರೈಸಲು ಮನವಿ

ರೋಣ : ಪಟ್ಟಣದಲ್ಲಿರುವ ಸರಕಾರಿ ಪ್ರೌಢಶಾಲೆ, ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆ, ಮಾದರಿ ಹಿರಿಯ ಪ್ರಾಥಮಿಕ ಶಾಲೆ, ನೀರಾವರಿ ಕಾಲೊನಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಸರಕಾರಿ ಉರ್ದು ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೇ ತೊಂದರೆಯಾಗಿದ್ದು,

Vijaya Karnataka 3 Jun 2019, 5:00 am
ರೋಣ : ಪಟ್ಟಣದಲ್ಲಿರುವ ಸರಕಾರಿ ಪ್ರೌಢಶಾಲೆ, ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆ, ಮಾದರಿ ಹಿರಿಯ ಪ್ರಾಥಮಿಕ ಶಾಲೆ, ನೀರಾವರಿ ಕಾಲೊನಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಸರಕಾರಿ ಉರ್ದು ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೇ ತೊಂದರೆಯಾಗಿದ್ದು, ಪುರಸಭೆಯಿಂದ ಎಲ್ಲಾ ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ಶುದ್ಧ ಕುಡಿಯುವ ನೀರು ಪೂರೈಸಬೇಕು ಎಂದು ಮುಖ್ಯಾಧಿಕಾರಿ ಕೆ.ಎಂ.ನೂರುಲ್ಲಾಖಾನ್‌ ಅವರಿಗೆ ಮನವಿ ಸಲ್ಲಿಸಲಾಯಿತು.
Vijaya Karnataka Web GDG-2 RON 5
ರೋಣ ಪಟ್ಟಣದ ಎಲ್ಲಾ ಸರಕಾರಿ ಶಾಲೆಗಳಿಗೆ ಶುದ್ಧ ಕುಡಿಯುವ ನೀರು ಪೂರೈಸಲು ಆಗ್ರಹಿಸಿ ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಎಸ್‌ಡಿಎಂಸಿ ಅಧ್ಯಕ್ಷರು ಪುರಸಭೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದರು.


ಎಸ್‌ಡಿಎಂಸಿ ಅಧ್ಯಕ್ಷ ಬಸವರಾಜ ಹಕಾರಿ ಮಾತನಾಡಿ, ತಾಲೂಕಿನ ಗ್ರಾಮೀಣ ಪ್ರದೇಶಗಳ ಸರಕಾರಿ ಶಾಲೆ ಹಾಗೂ ಅಂಗನವಾಡಿಗೆ ಸ್ಥಳೀಯ ಗ್ರಾಮ ಪಂಚಾಯಿತಿ ಸಮರ್ಪಕವಾಗಿ ಕುಡಿಯಲು ಶುದ್ಧ ನೀರು ಪೂರೈಸುತ್ತಿರುವಂತೆ, ಪಟ್ಟಣದ ಎಲ್ಲಾ ಶಾಲೆಗಳಿಗೆ ಪುರಸಭೆ ಶುದ್ಧ ಕುಡಿಯುವ ನೀರು ಒದಗಿಸಬೇಕು. ಶುದ್ಧ ನೀರು ಸಿಗದೇ ವಿದ್ಯಾರ್ಥಿಗಳು ಕಲುಷಿತ ನೀರು ಸೇವಿಸಿ ಆರೋಗ್ಯಕ್ಕೆ ತೊಂದರೆಯಾದರೆ, ಅಂತಹ ವಿದ್ಯಾರ್ಥಿಗಳ ಪಾಲಕರು ಶಿಕ್ಷ ಕರನ್ನು ಹಾಗೂ ಎಸ್‌ಡಿಎಂಸಿ ಅವರನ್ನು ಹೊಣೆ ಮಾಡಿ ದೂರುತ್ತಾರೆ. ಅಂತಹ ಯಾವುದೇ ತೊಂದರೆಯಾಗುವುದು ಬೇಡ. ಮುಖ್ಯಾಧಿಕಾರಿಗಳು ಮುತುವರ್ಜಿ ವಹಿಸಿ, ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಕುಡಿಯಲು ಶುದ್ಧ ನೀರು ಒದಗಿಸಬೇಕು ಎಂದರು

ಅಕ್ಷ ರ ದಾಸೋಹ ಉಪನಿರ್ದೇಶಕ ಬಸವರಾಜ ಅಂಗಡಿ ಮಾತನಾಡಿ, ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಶಿಕ್ಷ ಕರು, ಎಸ್‌ಡಿಎಂಸಿ ಆಡಳಿತ ಮಂಡಳಿಯವರು ತಮ್ಮಲ್ಲಿ ಬೇಡಿಕೆ ಇಟ್ಟಿದ್ದು, ಇದನ್ನು ಪೂರೈಸಬೇಕು. ಮುಖ್ಯವಾಗಿ ಇಂದಿನ ದಿನಗಳಲ್ಲಿ ಕುಡಿಯುವ ನೀರಿನಿಂದಲೇ ಹಲವಾರು ರೋಗಗಳು ಹರಡುತ್ತಿವೆ. ಹೀಗಾಗಿ ಮಕ್ಕಳು ಆರೋಗ್ಯಕ್ಕೆ ಹಾನಿಯಾಗುವ ನೀರು ಸೇವನೆ ಮಾಡುವುದು ಬೇಡ. ಪುರಸಭೆಯಿಂದ ಶುದ್ದ ನೀರನ್ನು ತಕ್ಷ ಣದಿಂದಲೇ ಪೂರೈಕೆ ಮಾಡಬೇಕು. ವಿಳಂಬ ಮಾಡಿದರೆ, ಆರೋಗ್ಯಕ್ಕೆ ಏನಾದರೂ ತೊಂದರೆಯಾದರೇ, ಅಧಿಕಾರಿಗಳು ಹೊಣೆಯಾಗಬೇಕಾಗುತ್ತದೆ. ಆದ್ದರಿಂದ ಶೀಘ್ರವಾಗಿ ಪಟ್ಟಣದ ಎಲ್ಲಾ ಸರಕಾರಿ ಶಾಲೆಗಳಿಗೆ ಶುದ್ಧ ನೀರು ಪೂರೈಸುವ ಮೂಲಕ ಶೈಕ್ಷ ಣಿಕ ಪ್ರಗತಿಗೆ ಸಹಕಾರ ನೀಡಬೇಕು ಎಂದರು

ಈ ಸಮಯದಲ್ಲಿ ಎಸ್‌.ಎಸ್‌.ಕಂದಗಲ್ಲ, ಎಸ್‌.ಬಿ.ಗವಿ, ಪಿ.ಡಿ.ಬಾಲನಗೌಡ್ರ, ಎಸ್‌.ಎನ್‌.ಸೋಮಣ್ಣವರ, ಸಿ.ಬಿ.ಬಾಲಗೌಡ್ರ, ಎಸ್‌.ಎಲ್‌.ಇಂಡಿಕರ್‌, ಕುಮಾರ ಗಡಗಿ, ನಾಗಪ್ಪ ಮಡಿವಾಳರ ಸೇರಿದಂತೆ ಎಲ್ಲಾ ಶಾಲೆಗಳ ಮುಖ್ಯೋಪಾಧ್ಯಾಯರು, ಎಸ್‌ಡಿಎಂಸಿ ಅಧ್ಯಕ್ಷ ರು ಹಾಜರಿದ್ದು ಶಾಲೆಗಳಿಗೆ ನೀರು ಪೂರೈಸುವಂತೆ ಪುರಸಭೆ ಅಧಿಕಾರಿಗಳಿಗೆ ಮನವಿ ಮಾಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ