ಆ್ಯಪ್ನಗರ

ಕೌಶಲ್ಯಾಭಿವೃದ್ಧಿ ತರಬೇತಿ

ಗದಗ: ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಪ್ರಸಕ್ತ ಸಾಲಿನಲ್ಲಿಜಿಲ್ಲೆಯಲ್ಲಿಮಹಿಳಾ ತರಬೇತಿ ಯೋಜನೆಯಡಿ ಉಚಿತವಾಗಿ ಮಹಿಳೆಯರಿಗೆ ವಿವಿಧ ಕೌಶಲಗಳಲ್ಲಿತರಬೇತಿ ನೀಡಲಾಗುತ್ತಿದೆ. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯಲ್ಲಿಮತ್ತು ಕೇಂದ್ರ ಸರಕಾರದ

Vijaya Karnataka 22 Sep 2019, 5:00 am
ಗದಗ: ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಪ್ರಸಕ್ತ ಸಾಲಿನಲ್ಲಿಜಿಲ್ಲೆಯಲ್ಲಿಮಹಿಳಾ ತರಬೇತಿ ಯೋಜನೆಯಡಿ ಉಚಿತವಾಗಿ ಮಹಿಳೆಯರಿಗೆ ವಿವಿಧ ಕೌಶಲಗಳಲ್ಲಿತರಬೇತಿ ನೀಡಲಾಗುತ್ತಿದೆ. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯಲ್ಲಿಮತ್ತು ಕೇಂದ್ರ ಸರಕಾರದ ಅಧೀನದಲ್ಲಿಆಕ್ರಿಡಿಟೇಷನ್‌ ಪಡೆದಿರುವ ಸ್ವಯಂ ಸೇವಾ ಸಂಸ್ಥೆಗಳಿಂದ ತರಬೇತಿ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಕ್ರಿಡಿಟೇಷನ್‌ ಪಡೆದಿರುವ ಸಂಸ್ಥೆಗಳು ಆಕ್ರಿಡಿಟೇಷನ್‌ ಪಡೆದ ಪ್ರಮಾಣ ಪತ್ರ, ಜಾಬ್‌ ರೋಲ್‌ ನೊಂದಿಗೆ ತಮ್ಮ ಸಂಸ್ಥೆಯ ಮಾಹಿತಿ ಹೊಂದಿರಬೇಕು.ಅರ್ಹತೆ ಹೊಂದಿದ ಆಸಕ್ತ ಸ್ವಯಂ ಸೇವಾ ಸಂಸ್ಥೆಗಳು ತಮ್ಮ ಪ್ರಸ್ತಾವನೆಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಪನಿರ್ದೇಶಕರ ಕಚೇರಿ, ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ 6ರಲ್ಲಿಸೆ.30ರರೊಳಗೆ ಭರ್ತಿ ಮಾಡಿ ಸಲ್ಲಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Vijaya Karnataka Web skill development training
ಕೌಶಲ್ಯಾಭಿವೃದ್ಧಿ ತರಬೇತಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ