ಆ್ಯಪ್ನಗರ

ಶಿಕ್ಷಣದಿಂದ ಸಮಾಜ ಸುಧಾರಣೆ : ವಚನಾನಂದ ಶ್ರೀ

ಗದಗ : ಶೈಕ್ಷ ಣಿಕವಾಗಿ ಅಭಿವೃದ್ಧಿ ಹೊಂದಿದಾಗ ಮಾತ್ರ ಸಮಾಜದಲ್ಲಿ ಸುಧಾರಣೆ ತರಲು ಸಾಧ್ಯ. ಹಿಂದುಳಿದ ಹಾಗೂ ಸಮಾಜದ ಬಡ ವಿದ್ಯಾರ್ಥಿಗಳ ಶಿಕ್ಷ ಣಕ್ಕೆ ಎಲ್ಲರೂ ಸಹಕರಿಸಬೇಕು. ಅಂದಾಗ ಮಾತ್ರ ಸಮಾಜ ಬೆಳೆಯುತ್ತದೆ ಎಂದು ಪಂಚಮಸಾಲಿ ಹರಿಹರ ಪೀಠದ ವಚನಾನಂದ ಸ್ವಾಮಿಗಳು ಹೇಳಿದರು.

Vijaya Karnataka 14 Aug 2019, 5:00 am
ಗದಗ : ಶೈಕ್ಷ ಣಿಕವಾಗಿ ಅಭಿವೃದ್ಧಿ ಹೊಂದಿದಾಗ ಮಾತ್ರ ಸಮಾಜದಲ್ಲಿ ಸುಧಾರಣೆ ತರಲು ಸಾಧ್ಯ. ಹಿಂದುಳಿದ ಹಾಗೂ ಸಮಾಜದ ಬಡ ವಿದ್ಯಾರ್ಥಿಗಳ ಶಿಕ್ಷ ಣಕ್ಕೆ ಎಲ್ಲರೂ ಸಹಕರಿಸಬೇಕು. ಅಂದಾಗ ಮಾತ್ರ ಸಮಾಜ ಬೆಳೆಯುತ್ತದೆ ಎಂದು ಪಂಚಮಸಾಲಿ ಹರಿಹರ ಪೀಠದ ವಚನಾನಂದ ಸ್ವಾಮಿಗಳು ಹೇಳಿದರು.
Vijaya Karnataka Web social reform from education wachanananda sri
ಶಿಕ್ಷಣದಿಂದ ಸಮಾಜ ಸುಧಾರಣೆ : ವಚನಾನಂದ ಶ್ರೀ


ನಗರದ ಪಂಚಾಚಾರ್ಯ ಮಾಂಗಲ್ಯ ಮಂದಿರದಲ್ಲಿ ಜಿಲ್ಲಾ ವೀರಶೈವ ಲಿಂಗಾಯತ ಪಂಚಮಸಾಲಿ ಟ್ರಸ್ಟ್‌ ವತಿಯಿಂದ ಆಯೋಜಿಸಿದ್ದ ಪಂಚಮಸಾಲಿ ಸಮಾಜದ ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದು ಉತ್ತೀರ್ಣವಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಕಿತ್ತೂರ ಚನ್ನಮ್ಮ ಪಂಚಮಸಾಲಿ ವಿದ್ಯಾರ್ಥಿಗಳ ಉಚಿತ ಪ್ರಸಾದ ನಿಲಯ ಉದ್ಘಾಟನೆ, ಪಂಚಮಸಾಲಿ ಸಂಘದ ರಾಜ್ಯ ಘಟಕದ ಬೆಳ್ಳಿ ಹಬ್ಬ ಕಾರ್ಯಕ್ರಮ ಹಾಗೂ ಸಮಾಜ ಬಾಂಧವರಿಗೆ ಲಿಂಗದೀಕ್ಷೆ ಹಾಗೂ ಲಿಂಗಧಾರಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಮಾಜದಲ್ಲಿ ಶಿಕ್ಷ ಣ ಎನ್ನುವುದು ಪ್ರಮುಖವಾದುದು. ಸಮಾಜದ ಎಲ್ಲರೂ ತಮ್ಮ ಮಕ್ಕಳಿಗೆ ಶಿಕ್ಷ ಣ ನೀಡಿ ಪ್ರೋತ್ಸಾಹಿಸಬೇಕು. ಮಕ್ಕಳಿಗೆ ವಿಷಯಾಧಾರಿತ ಅಭಿರುಚಿ ಇರುವ ವಿಷಯದ ಅಭ್ಯಶಿಸಲು ಅವರಿಗೆ ಆಯ್ಕೆ ಮಾಡುವ ಅವಕಾಶ ನೀಡಬೇಕೆಂದರು.

ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಪ್ರೋತ್ಸಾಹಿಸಲಾಯಿತು.

ಸಮಾಜ ಮಾಜಿ ರಾಜ್ಯಾಧ್ಯಕ್ಷ ಬಸವರಾಜ ದಿಂಡೂರ, ಜಿಲ್ಲಾಧ್ಯಕ್ಷ ಅಮರೇಶ ಬೂದಿಹಾಳ, ಭಾವಿ ಬೆಟ್ಟಪ್ಪನವರ, ಕಾರ್ಯಾಧ್ಯಕ್ಷ ಜಿ.ಪಿ. ಪಾಟೀಲ, ಜಿಪಂ ಅಧ್ಯಕ್ಷ ಎಸ್‌.ಪಿ. ಬಳಿಗಾರ, ಎಸ್‌.ವಿ. ನೇಗಲಿ ಇತರರು ಉಪಸ್ಥಿತರಿದ್ದರು.ಬಿ.ವಿ. ಚನ್ನಪ್ಪಗೌಡರ ನಿರೂಪಿಸಿದರು. ಎಂ.ವಿ. ವೀರಾಪುರ ವಂದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ