ಆ್ಯಪ್ನಗರ

ಧರ್ಮ ಕಾರ್ಯದಲ್ಲಿ ಹೆಚ್ಚು ಪಾಲ್ಗೊಳ್ಳಿ

ಹೊಳೆಆಲೂರ : ಸಮಾಜದಲ್ಲಿ ಸಾಮೂಹಿಕ ವಿವಾಹಗಳು ಬಡಜನರ ಶ್ರೇಯೋಭಿವೃದ್ಧಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಇದ್ದು ಸಮಾಜದ ಎಳ್ಗೆಗೂ ಪಾತ್ರವಾಗಿವೆ ಎಂದು ಸದಾಶಿವ ಮಹಾಂತ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.

Vijaya Karnataka 29 Apr 2019, 5:00 am
ಹೊಳೆಆಲೂರ : ಸಮಾಜದಲ್ಲಿ ಸಾಮೂಹಿಕ ವಿವಾಹಗಳು ಬಡಜನರ ಶ್ರೇಯೋಭಿವೃದ್ಧಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಇದ್ದು ಸಮಾಜದ ಎಳ್ಗೆಗೂ ಪಾತ್ರವಾಗಿವೆ ಎಂದು ಸದಾಶಿವ ಮಹಾಂತ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.
Vijaya Karnataka Web GDG-28HLR3-60631
ರೋಣ ತಾಲೂಕಿನ ಬೆನಹಾಳದಲ್ಲಿ ಜರುಗಿದ ದ್ವಾದಶ ಪಟ್ಟಾಧಿಕಾರ ವಾರ್ಷಿಕೋತ್ಸವ ಹಾಗೂ ಸರ್ವಧರ್ಮ ಸಾಮೂಹಿಕ ವಿವಾಹ ಕಾರ್ಯಕ್ರಮ ಜರುಗಿತು.


ಅವರು ಭಾನುವಾರ ತಾಲೂಕಿನ ಬೆನಹಾಳದಲ್ಲಿ ಜರುಗಿದ ದ್ವಾದಶ ಪಟ್ಟಾಧಿಕಾರ ವಾರ್ಷಿಕೋತ್ಸವ ಹಾಗೂ ಸರ್ವಧರ್ಮ ಸಾಮೂಹಿಕ ವಿವಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಾಮೂಹಿಕ ವಿವಾಹಗಳು ಸಮಾಜಮುಖಿ ಕಾರ್ಯಗಳಾಗಿದ್ದು, ಆರ್ಥಿವಾಗಿ ಹಿಂದುಳಿದ ಬಡವರ ಪಾಲಿಗೆ ವರದಾನವಾಗಿದೆ. ಸಾಮೂಹಿಕ ವಿವಾಹಗಳಿಂದ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬಹುದಾಗಿದೆ. ಬಡತನದಿಂದ ಬಳಲುತ್ತಿರುವ ಜನರಿಗೆ ಒಂದು ಸುಂದರ ಜೀವನ ರೂಪಿಸುವ ಹಾಗೂ ಧಾರ್ಮಿಕ ಕಾರ್ಯಗಳಲ್ಲಿ ಅವರನ್ನು ಪಾಲ್ಗೊಳ್ಳುವಂತೆ ಮಾಡುವ ಕೆಲಸವು ಸಾಮೂಹಿಕ ವಿವಾಹಗಳು ಮಾಡುತ್ತವೆ. ಪ್ರತಿಯೊಂದು ಧರ್ಮವನ್ನು ಪ್ರೀತಿಸುವುದರ ಜತೆಗೆ ನಮ್ಮ ಧರ್ಮವನ್ನು ಗೌರವಿಸುವ ಗುಣವನ್ನು ಎಲ್ಲರೂ ಬೆಳೆಸಿಕೊಳ್ಳಬೇಕು. ಆಧುನಿಕ ಜಗತ್ತಿನ ಬೆನ್ನಿಗೆ ಬಿದ್ದು ಇಂದು ಬಾಂಧವ್ಯವನ್ನು ಜನರು ಮರೆಯುತ್ತಿದ್ದಾರೆ. ಪಾಶ್ಚಿಮಾತ್ಯರ ಅನುಕರಣೆಯನ್ನು ಮೈಗೂಡಿಸಿಕೊಂಡು ಇಂದಿನ ಯುವ ಪೀಳಿಗೆಯು ನಮ್ಮ ಸಂಸ್ಕೃತಿ ಸಂಪ್ರದಾಯಗಳನ್ನು ಮರೆಯುತ್ತಿದ್ದಾರೆ. ನಮ್ಮ ಸಂಸ್ಕೃತಿ ಸಂಪ್ರದಾಯ ಉಳಿಸಿ ಬೆಳೆಸುವ ಕಾರ್ಯ ನಡೆಯಬೇಕಾಗದೆ ಎಂದರು.

ರೋಣ ಗುಲಗಂಜಿ ಮಠದ ಗುರುಪಾದ ಮಹಾಸ್ವಾಮಿಗಳು, ಕೊತಬಾಳದ ಅಂಕಲಗಿ ಅಡವಿಸಿದ್ದೇಶ್ವರ ಮಠದ ಗಂಗಾಧರ ಮಹಾಸ್ವಾಮಿಗಳು, ಅಸೂಟಿಯ ಹಿರೇಮಠದ ರೇವಣಸಿದ್ಧೇಶ್ವರ ಸ್ವಾಮಿಗಳು ಹುನಗುಂಡಿಯ ಷಡಕ್ಷ ರಯ್ಯ ಶಾಸ್ತ್ರಿಗಳು. ಶಿವಲಿಂಗಯ್ಯ ಶಾಸ್ತ್ರಿಗಳು, ಅಶೋಕ ಹಿರೇಮಠ, ಬಸವರಾಜ ಹಂಸಪ್ರಸಾದ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ