ಆ್ಯಪ್ನಗರ

ಜನವರಿಯಲ್ಲಿ ಮತದಾರರ ಅಂತಿಮ ಪಟ್ಟಿ ಪ್ರಕಟ

ಗದಗ : ಜಿಲ್ಲೆಯ ನಾಲ್ಕು ವಿಧಾನಸಭೆ ಕ್ಷೇತ್ರಗಳಿಗೆ 1-1-2019ಕ್ಕೆ ಅನ್ವಯಿಸುವಂತೆ ಮತಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಅರ್ಜಿ ಸ್ವೀಕರಿಸಲಾಗಿತ್ತು. ಅದರಂತೆ ಸ್ವೀಕೃತವಾದ 22,550 ಅರ್ಜಿಗಳ ಪೈಕಿ 21,284 ಅರ್ಜಿಗಳನ್ನು ಲೇವಾರಿ ಮಾಡಲಾಗಿದೆ ಎಂದು ರಾಜ್ಯದ ಕೈಗಾರಿಕಾಭಿವೃದ್ಧಿ ಆಯುಕ್ತರು ಹಾಗೂ ಗದಗ ಜಿಲ್ಲೆಯ ಮತದಾರರ ಪಟ್ಟಿ ವೀಕ್ಷಕ ದರ್ಪಣ್‌ ಜೈನ್‌ ತಿಳಿಸಿದರು.

Vijaya Karnataka 27 Dec 2018, 5:00 am
ಗದಗ : ಜಿಲ್ಲೆಯ ನಾಲ್ಕು ವಿಧಾನಸಭೆ ಕ್ಷೇತ್ರಗಳಿಗೆ 1-1-2019ಕ್ಕೆ ಅನ್ವಯಿಸುವಂತೆ ಮತಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಅರ್ಜಿ ಸ್ವೀಕರಿಸಲಾಗಿತ್ತು. ಅದರಂತೆ ಸ್ವೀಕೃತವಾದ 22,550 ಅರ್ಜಿಗಳ ಪೈಕಿ 21,284 ಅರ್ಜಿಗಳನ್ನು ಲೇವಾರಿ ಮಾಡಲಾಗಿದೆ ಎಂದು ರಾಜ್ಯದ ಕೈಗಾರಿಕಾಭಿವೃದ್ಧಿ ಆಯುಕ್ತರು ಹಾಗೂ ಗದಗ ಜಿಲ್ಲೆಯ ಮತದಾರರ ಪಟ್ಟಿ ವೀಕ್ಷಕ ದರ್ಪಣ್‌ ಜೈನ್‌ ತಿಳಿಸಿದರು.
Vijaya Karnataka Web GDG-26SALIM4
ಗದಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ದರ್ಪಣ ಜೈನ್‌ ಮಾತನಾಡಿದರು.


ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.31ರ ವರೆಗೆ ಉಳಿದ ಅರ್ಜಿಗಳನ್ನು ವಿಲೇವಾರಿ ಮಾಡಿ, 2019ರ ಜನವರಿ 15ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು ಎಂದರು.

ಯಾವುದೇ ಲೋಪದೋಷಗಳಿಲ್ಲದೇ ಪಾರದರ್ಶಕ ಹಾಗೂ ವ್ಯವಸ್ಥಿತ ಚುನಾವಣೆ ನಡೆಸಲು ಮತದಾರ ಪಟ್ಟಿ ಮಹತ್ವದ್ದಾಗಿದೆ. ಆದ್ದರಿಂದ ಡಿ. 31ರೊಳಗೆ ಇನ್ನೊಮ್ಮೆ ಮತಗಟ್ಟೆ ಅಧಿಕಾರಿಗಳ ಹಾಗೂ ಏಜೆಂಟರ ಸಭೆ ಜರುಗಿಸಲು ಸೂಚನೆ ನೀಡಲಾಗಿದೆ. ಬೂತ್‌ ಮಟ್ಟದ ಅಧಿಕಾರಿಗಳ ಕಾರ್ಯವನ್ನು ತಹಸೀಲ್ದಾರ್‌, ಉಪವಿಭಾಗಾಧಿಕಾರಿ, ಅಪರ ಜಿಲ್ಲಾಧಿಕಾರಿ, ಜಿಲ್ಲಾಧಿಕಾರಿ ಪರಿಶೀಲನೆ ನಡೆಸಬೇಕು ಎಂದು ಸೂಚನೆ ನೀಡಲಾಗಿದೆ ಎಂದರು.

ಜನವರಿಯಲ್ಲಿ ಪ್ರಕಟಗೊಳ್ಳುವ ಆಂತಿಮ ಮತದಾರ ಪಟ್ಟಿ ದೋಷ ರಹಿತ ಮತ್ತು ಎಲ್ಲ ಅರ್ಹ ಮತದಾರರು ಒಳಗೊಂಡ ಮಾದರಿ ಮತದಾರರ ಪಟ್ಟಿ ತಯಾರಿಸಲು ಹಾಗೂ ಪರಿಷ್ಕರಣೆ ಸಂದರ್ಭದಲ್ಲಿ ಅತಿ ಹೆಚ್ಚು ಮತ್ತು ಅತಿ ಕಡಿಮೆ ಹೆಸರುಗಳ ಸೇರ್ಪಡೆ, ತಿದ್ದುಪಡಿ ಆಗಿರುವ ಭಾಗಗಳನ್ನು ಪುನರ್‌ ಪರಿಶೀಲನೆ ಮಾಡಲಾಗುವುದು ಎಂದರು.

ಜಿಲ್ಲೆಯಲ್ಲಿ ಒಟ್ಟು ಮತದಾರರ ಸಂಖ್ಯೆ 8,43,907 ಇದ್ದು, ಇದು ಜಿಲ್ಲೆಯ ಜನಸಂಖ್ಯೆಯ ಶೇ. 73.47 ರಷ್ಟಾಗಿದೆ. ಜಿಲ್ಲೆಯಲ್ಲಿ ಮತದಾರ ಪರಿಷ್ಕರಣೆ ಹಾಗೂ ಮತದಾರ ಪಟ್ಟಿಯಲ್ಲಿನ ದೋಷಗಳ ಕುರಿತು ಮತದಾರರಿಗಾಗಿ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಸಹಾಯವಾಣಿ ಸ್ಥಾಪಿಸಲಾಗಿದೆ ಎಂದರು.

ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಸ್ವೀಪ್‌ ಸಮಿತಿ ಸದಸ್ಯ ಕಾರ‍್ಯದರ್ಶಿ ಟಿ. ದಿನೇಶ, ಉಪಭಾಗಾಧಿಕಾರಿ ಪಿ.ಎಸ್‌. ಮಂಜುನಾಥ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ