ಆ್ಯಪ್ನಗರ

ಇಂದು ನಾಡಪ್ರಭು ಕೆಂಪೇಗೌಡ ಜಯಂತಿ

ಗದಗ : ಜಿಲ್ಲಾಡಳಿತ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗದಗ ವತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಜೂ.27ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

Vijaya Karnataka 27 Jun 2019, 5:00 am
ಗದಗ : ಜಿಲ್ಲಾಡಳಿತ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗದಗ ವತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಜೂ.27ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
Vijaya Karnataka Web today is nadaprabhu kempegowda jayanti
ಇಂದು ನಾಡಪ್ರಭು ಕೆಂಪೇಗೌಡ ಜಯಂತಿ


ರಾಜ್ಯದ ಕೌಶಲಾಭಿವೃದ್ಧಿ, ಉದ್ಯಮಶೀಲತೆ , ಜೀವನೋಪಾಯ ಮತ್ತು ಮುಜರಾಯಿ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಪಿ.ಟಿ. ಪರಮೇಶ್ವರನಾಯಕ್‌ ಅವರು ಕಾರ‍್ಯಕ್ರಮ ಉದ್ಘಾಟಿಸುವರು. ಶಾಸಕ ಎಚ್‌.ಕೆ.ಪಾಟೀಲ ಅಧ್ಯಕ್ಷ ತೆ ವಹಿಸುವರು. ಗದಗ ಜಿಪಂ ಅಧ್ಯಕ್ಷ ಎಸ್‌.ಪಿ. ಬಳಿಗಾರ, ಸಂಸದರಾದ ಶಿವಕುಮಾರ ಉದಾಸಿ, ಪಿ.ಸಿ. ಗದ್ದಿಗೌಡರ, ಶಾಸಕರಾದ ಸಿ.ಸಿ. ಪಾಟೀಲ, ಕಳಕಪ್ಪ ಬಂಡಿ, ರಾಮಣ್ಣ ಲಮಾಣಿ, ವಿಧಾನ ಪರಿಷತ್‌ ಸದಸ್ಯರಾದ ಬಸವರಾಜ ಹೊರಟ್ಟಿ, ಶ್ರೀನಿವಾಸ ಮಾನೆ, ಎಸ್‌.ವಿ. ಸಂಕನೂರ, ಪ್ರದೀಪ ಶೆಟ್ಟರ್‌, ಜಿಪಂ ಉಪಾಧ್ಯಕ್ಷೆ ಶಕುಂತಲಾ ಮೂಲಿಮನಿ, ತಾಪಂ ಅಧ್ಯಕ್ಷ ಮೋಹನ ದುರಗಣ್ಣವರ, ಉಪಾಧ್ಯಕ್ಷೆ ಸುಜಾತಾ ಖಂಡು ಮುಖ್ಯ ಅತಿಥಿಗಳಾಗಿ ಆಗಮಿಸುವರು. ಪಿಪಿಜಿ ಪದವಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ರಾಜಶೇಖರ ದಾನರೆಡ್ಡಿ ಅವರು ನಾಡಪ್ರಭು ಕೆಂಪೇಗೌಡರ ಜೀವನ ಸಾಧನೆ ಕುರಿತು ಉಪನ್ಯಾಸ ನೀಡುವರು.

ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಶ್ರೀನಾಥ ಜೋಷಿ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಂಜುನಾಥ ಚವ್ಹಾಣ ಸಮಾರಂಭದಲ್ಲಿ ಭಾಗವಹಿಸುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಅರ್ಜುನ ಗೊಳಸಂಗಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ