ಆ್ಯಪ್ನಗರ

ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

ಗದಗ: ಭಯೋತ್ಪಾದಕ ಮಸೂದ್‌ ಅಜರ್‌ನನ್ನು ಜಾಗತಿಕ ಉಗ್ರ ಎಂದು ವಿಶ್ವಸಂಸ್ಥೆ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಗುರುವಾರ ಬಿಜೆಪಿ ಕಾರ್ಯಕರ್ತರು ನಗರದ ಟಾಂಗಾಕೂಟ್‌ನಲ್ಲಿ ವಿಜಯೋತ್ಸವ ಆಚರಿಸಿದರು.

Vijaya Karnataka 3 May 2019, 5:00 am
ಗದಗ: ಭಯೋತ್ಪಾದಕ ಮಸೂದ್‌ ಅಜರ್‌ನನ್ನು ಜಾಗತಿಕ ಉಗ್ರ ಎಂದು ವಿಶ್ವಸಂಸ್ಥೆ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಗುರುವಾರ ಬಿಜೆಪಿ ಕಾರ್ಯಕರ್ತರು ನಗರದ ಟಾಂಗಾಕೂಟ್‌ನಲ್ಲಿ ವಿಜಯೋತ್ಸವ ಆಚರಿಸಿದರು.
Vijaya Karnataka Web GDG-2SALIM1


ಈ ಸಂದರ್ಭದಲ್ಲಿ ಮಾತನಾಡಿದ ವಿಪ ಸದಸ್ಯ ಎಸ್‌.ವಿ. ಸಂಕನೂರ, ಮಸೂದ್‌ ಅಜರ್‌ನನ್ನು ಅಂತಾರಾಷ್ಟ್ರೀಯ ಭಯೋತ್ಪಾದಕ ಎಂದು ಘೋಷಣೆ ಮಾಡಿದ ವಿಶ್ವ ಸಂಸ್ಥೆಗೆ ಹಾಗೂ ಎಲ್ಲ ಬಿಜೆಪಿ ಕೇಂದ್ರ ನಾಯಕರಿಗೆ ಧನ್ಯವಾದಗಳು. ಹಠ ಬಿಟ್ಟು ಭಾರತದ ನಿಲುವನ್ನು ಬೆಂಬಲಿಸಿದ ಚೀನಾ, ಮಸೂದ್‌ನನ್ನು ಭಯೋತ್ಪಾದಕ ಎಂದು ಘೋಷಣೆ ಮಾಡಲು ನಿರ್ಧರಿಸಿದ್ದು ಸ್ವಾಗತಾರ್ಹ. ಇದು ಭಾರತದ ಬಲಿಷ್ಠ ನಾಯಕತ್ವಕ್ಕೆ ಸಂದ ಜಯ ಎಂದು ಬಣ್ಣಿಸಿದರು.

ಬಿಜೆಪಿ ಗದಗ ನಗರ ಮಂಡಲ ಅಧ್ಯಕ್ಷ ಜಗನ್ನಾಥಸಾ ಭಾಂಡಗೆ ಮಾತನಾಡಿ, ಭಯೋತ್ಪಾದನೆ ನಿರ್ಮೂಲನೆಗಾಗಿ ನರೇಂದ್ರ ಮೋದಿ ಅವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಎಲ್ಲ ರಾಷ್ಟ್ರಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡ ಪರಿಣಾಮ ಮಸೂದ್‌ ಅಜರ್‌ಗೆ ಜಾಗತಿಕ ಉಗ್ರ ಪಟ್ಟ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬಗ್ಗೆ ವಿಶ್ವಸಂಸ್ಥೆಯ ಭದ್ರತಾ ಸಮಿತಿಯ ಸಭೆಯಲ್ಲಿ ನಿರ್ಣಯ ತೆಗೆದುಕೊಂಡಿದ್ದು, ಪ್ರಧಾನಿಗಳ ಪ್ರಯತ್ನಕ್ಕೆ ಜಯ ಸಿಕ್ಕಂತಾಗಿದೆ ಎಂದು ಹೇಳಿದರು.

ಬಿಜೆಪಿ ಮುಖಂಡರಾದ ಸಂಗಮೇಶ ದುಂದೂರ, ನಗರ ಮಂಡಲ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಯಳವತ್ತಿ, ಅನಿಲ ಅಬ್ಬಿಗೇರಿ, ಸಿದ್ದು ಪಲ್ಲೇದ, ಪ್ರವೀಣ ಬನ್ಸಾಲಿ, ಮೋಹನ ಮಾಳಗಿಮನಿ, ಸುರೇಶ ಚಿತ್ತರಗಿ, ರಮೇಶ ಕುರ್ತಕೋಟಿ, ಪಾರ್ವತಿ ಪತ್ತಾರ, ಜಯಶ್ರೀ ಅಣ್ಣಿಗೇರಿ, ರತ್ನಾ ಕುರಕೋಡ, ಮಂಜು ಪಾಟೀಲ, ಛಗನ ರಾಜಪುರೋಹಿತ, ದೇವೇಂದ್ರಪ್ಪ ಹೂಗಾರ, ದತ್ತು ಭಾಂಡಗೆ ಇನ್ನಿತರರು ವಿಜಯೋತ್ಸವದಲ್ಲಿ ಭಾಗಿಯಾಗಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ