ಆ್ಯಪ್ನಗರ

ನಿರ್ಭೀತಿಯಿಂದ ಮತ ಚಲಾಯಿಸಿ

ಗದಗ: ಚುನಾವಣೆ ಆಯೋಗದ ನಿರ್ದೇಶನದಂತೆ ದುರ್ಬಲ ಪ್ರದೇಶದಲ್ಲಿರುವ ಮತದಾರರ ಮನೋಸ್ಥೈರ್ಯ ಹೆಚ್ಚಿಸಲು ಪೊಲೀಸ್‌ ಇಲಾಖೆ ಹಾಗೂ ಕಂದಾಯ ಇಲಾಖೆ ಜಂಟಿಯಾಗಿ ನಗರದ ಗಂಗಾಪುರ ಪೇಟೆಯಲ್ಲಿ ಪ್ರೇರಣಾ ಕಾರ್ಯಕ್ರಮ ಹಮ್ಮಿಕೊಂಡಿತ್ತು.

Vijaya Karnataka 5 Apr 2019, 5:00 am
ಗದಗ: ಚುನಾವಣೆ ಆಯೋಗದ ನಿರ್ದೇಶನದಂತೆ ದುರ್ಬಲ ಪ್ರದೇಶದಲ್ಲಿರುವ ಮತದಾರರ ಮನೋಸ್ಥೈರ್ಯ ಹೆಚ್ಚಿಸಲು ಪೊಲೀಸ್‌ ಇಲಾಖೆ ಹಾಗೂ ಕಂದಾಯ ಇಲಾಖೆ ಜಂಟಿಯಾಗಿ ನಗರದ ಗಂಗಾಪುರ ಪೇಟೆಯಲ್ಲಿ ಪ್ರೇರಣಾ ಕಾರ್ಯಕ್ರಮ ಹಮ್ಮಿಕೊಂಡಿತ್ತು.
Vijaya Karnataka Web vote with fearlessness
ನಿರ್ಭೀತಿಯಿಂದ ಮತ ಚಲಾಯಿಸಿ


ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಉಪವಿಭಾಗಾಧಿಕಾರಿ ಶಿವಾನಂದ ಪಾಟೀಲ, ಪ್ರಜಾಪ್ರಭುತ್ವ ಗಟ್ಟಿಗೊಳ್ಳಲು ಎಲ್ಲರೂ ತಪ್ಪದೇ ಮತ ಚಲಾಯಿಸಬೇಕು. ಅಂಗವಿಕಲರಿಗೆ, ವೃದ್ಧರಿಗೆ ವ್ಹೀಲ್‌ ಚೇರ್‌ ಮತ್ತು ವಾಹನ ವ್ಯವಸ್ಥೆ ಮಾಡಲಾಗುತ್ತದೆ ಎಂದು ತಿಳಿಸಿದರು.

ಡಿವೈಎಸ್ಪಿ ಓ.ಬಿ. ಕಲ್ಲೇಶಪ್ಪ ಮಾತನಾಡಿ, ಮತದಾರರು ಯಾವುದೇ ಆಮಿಷಕ್ಕೆ ಒಳಗಾಗದೆ ಕಡ್ಡಾಯವಾಗಿ ಮತದಾನ ಮಾಡಬೇಕು. ಮುಕ್ತ ಮತ್ತು ನ್ಯಾಯಸಮ್ಮತ ಮತದಾನ ನಡೆಸಲು ಚುನಾವಣೆ ಆಯೋಗ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದೆ ಎಂದು ತಿಳಿಸಿದರು.

ತಹಸೀಲ್ದಾರ್‌ ಶ್ರೀನಿವಾಸ ಮೂರ್ತಿ ಕುಲಕರ್ಣಿ ಮತದಾರರಿಗೆ ಪ್ರಮಾಣವಚನ ಬೋಧಿಸಿದರು. ಗದಗ ಶಹರ ಸಿಪಿಒ ಎಸ್‌.ಕೆ. ಹೊಳೆಯಣ್ಣವರ, ಪಿಎಸ್‌ಐ ಸೋಮೇಶ ಗೆಜ್ಜಿ ಇತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ