ಆ್ಯಪ್ನಗರ

ಮತದಾರರ ಪಟ್ಟಿ ಪರಿಶೀಲನೆಗೆ ಆ್ಯಪ್‌

ಗದಗ: ಮತದಾರ ಪಟ್ಟಿಯ ಪರಿಶೀಲನಾ ಕಾರ್ಯ ಸೆ.25 ರಿಂದ ಅ.15 ರವರೆಗೆ ಜರುಗಲಿದ್ದು,1ಜ.2020 ಕ್ಕೆ 18 ವರ್ಷ ಪೂರ್ಣಗೊಳ್ಳುವ ಮತದಾರರು ತಮ್ಮನ್ನು ಮತದಾರ ಪಟ್ಟಿಗೆ ಸೇರ್ಪಡೆಗೊಳ್ಳಲು ಭಾರತ ಚುನಾವಣೆ ಆಯೋಗ ವೋಟರ್‌ ಹೆಲ್ಪಲೈನ್‌ ಮೊಬೈಲ್‌ ಆ್ಯಪ್‌ ಪರಿಚಯಿಸಿದೆ ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ತಿಳಿಸಿದರು.

Vijaya Karnataka 24 Sep 2019, 5:00 am
ಗದಗ: ಮತದಾರ ಪಟ್ಟಿಯ ಪರಿಶೀಲನಾ ಕಾರ್ಯ ಸೆ.25 ರಿಂದ ಅ.15 ರವರೆಗೆ ಜರುಗಲಿದ್ದು,1ಜ.2020 ಕ್ಕೆ 18 ವರ್ಷ ಪೂರ್ಣಗೊಳ್ಳುವ ಮತದಾರರು ತಮ್ಮನ್ನು ಮತದಾರ ಪಟ್ಟಿಗೆ ಸೇರ್ಪಡೆಗೊಳ್ಳಲು ಭಾರತ ಚುನಾವಣೆ ಆಯೋಗ ವೋಟರ್‌ ಹೆಲ್ಪಲೈನ್‌ ಮೊಬೈಲ್‌ ಆ್ಯಪ್‌ ಪರಿಚಯಿಸಿದೆ ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ತಿಳಿಸಿದರು.
Vijaya Karnataka Web voter list review
ಮತದಾರರ ಪಟ್ಟಿ ಪರಿಶೀಲನೆಗೆ ಆ್ಯಪ್‌


ಜಿಲ್ಲಾಧಿಕಾರಿ ಸಭಾಂಗಣದಲ್ಲಿಂದು ಜರುಗಿದ ಮತದಾರರ ಪಟ್ಟಿ ಪರಿಶೀಲನಾ ಕಾರ್ಯಕ್ರಮದಲ್ಲಿಂದು ಅವರು ಮಾತನಾಡಿದರು. ಮತದಾರರ ಪಟ್ಟಿಯಲ್ಲಿರುವ ಮತದಾರರ ವಿವರಗಳನ್ನು ಪರಿಶೀಲಿಸಲು ಹೆಸರನ್ನು ತೆಗೆದು ಹಾಕಲು, ಪರಿಶೀಲನೆ ಮತ್ತು ಧೃಢೀಕರಣ, ತಿದ್ದುಪಡಿಗಳಿಗಾಗಿ ಆಪ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಪಾಸಪೋರ್ಟ್‌, ಚಾಲನಾ ಪರವಾನಿಗೆ, ಆಧಾರ ಪತ್ರ, ಪಡಿತರ ಚೀಟಿ, ಸರಕಾರಿ ಅರೆ ಸರಕಾರಿ ನೌಕರರು ಹೊಂದಿರುವ ಗುರುತಿನ ಚೀಟಿ, ಬ್ಯಾಂಕ್‌ ಪಾಸ್‌‍ಬುಕ್‌, ರೈತರ ಗುರುತಿನ ಚೀಟಿ, ಚುನಾವಣಾ ಆಯೋಗ ಅನುಮೋದಿಸಿರುವ ಯಾವುದೇ ದಾಖಲೆಗಳನ್ನು ಇವುಗಳಲ್ಲಿಒಂದನ್ನು ದಾಖಲೆ ರೂಪದಲ್ಲಿ ಮೊಬೈಲ್‌ ಆ್ಯಪ್‌ ಮೂಲಕ ಅಪ್‌ಲೋಡ್‌ ಮಾಡಬಹುದು ಎಂದು ಅಪರ್‌ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ತಿಳಿಸಿದರು.

ಈ ಮೊಬೈಲ್‌ ಆ್ಯಪ್‌ ಗೂಗಲೆ ಪ್ಲೇಸ್ಟೋರ್‌ ಮೂಲಕ ಪಡೆದುಕೊಳ್ಳಬಹುದು. ಮತದಾರರ ಪಟ್ಟಿಯ ಪರಿಶೀಲನಾ ಕಾರ್ಯದ ಅಂಗವಾಗಿ ಈಗಾಗಲೇ ನೋಂದಣಿಯಾಗಿರುವ ಮತದಾರರು ತಮ್ಮ ಹಾಗೂ ಕುಟುಂಬ ಸದಸ್ಯರ ಹೆಸರುಗಳ ಸರಿಯಾಗಿ ನೋಂದಣಿಯಾಗಿರುವ ಬಗ್ಗೆ ಆಯೋಗದ ವೆಬ್‌‍ಸೈಟ್‌ ಎನ್‌.ವಿ.ಎಸ್‌.ಪಿ ಪೋರ್ಟಲ್‌, ಮತದಾರರ 1950 ಸಹಾಯವಾಣಿಗೆ ಕರೆ ಮಾಡಿ ಅಥವಾ ಸಾಮಾನ್ಯ ಸೇವಾ ಕೇಂದ್ರ, ಮತದಾರ ನೋಂದಣಿ ಕಛೇರಿ, ಅಟಲ್‌ ಜನ ಸ್ನೇಹಿ ಕೇಂದ್ರ, ಗ್ರಾಮ ಪಂಚಾಯತಗಳಲ್ಲಿಯ ಬಾಪೂಜಿ ಸೇವಾ ಕೇಂದ್ರ ಅಲ್ಲದೆ ಮತಗಟ್ಟೆ ಅಧಿಕಾರಿ ಬಳಿ ಇರುವ ಮತದಾರ ಪಟ್ಟಿಯಲ್ಲಿಪರಿಶೀಲಿಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದರು.

ಜಿಲ್ಲಾಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಟಿ ದಿನೇಶ, ವಿವಿಧ ಇಲಾಖೆ ಅಧಿಕಾರಿಗಳು, ವಿವಿಧ ಕಾಲೇಜುಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ