ಆ್ಯಪ್ನಗರ

ಜಲ ಸಂರಕ್ಷಣೆ, ನಿರ್ವಹಣೆ ಕಾರ್ಯಾಗಾರ ನಾಳೆಯಿಂದ

ಗದಗ: ನಗರದ ಪಂಚಾಚಾರ್ಯ ಮಾಂಗಲ್ಯ ಮಂದಿರದಲ್ಲಿಡಿ.30 ಮತ್ತು 31 ರಂದು ಜಲಾಮೃತ ಯೋಜನೆಯಡಿ ಜಲಸಂರಕ್ಷಣೆ ಮತ್ತು ನಿರ್ವಹಣೆ ಕುರಿತು ರಾಜ್ಯಮಟ್ಟದ ಜಲಾಮೃತ ಜಲ ಸಂರಕ್ಷಣೆ ಹಾಗೂ ನಿರ್ವಹಣೆ ಕಾರ್ಯಾಗಾರ ನಡೆಯಲಿದೆ.

Vijaya Karnataka 29 Dec 2019, 5:00 am
ಗದಗ: ನಗರದ ಪಂಚಾಚಾರ್ಯ ಮಾಂಗಲ್ಯ ಮಂದಿರದಲ್ಲಿಡಿ.30 ಮತ್ತು 31 ರಂದು ಜಲಾಮೃತ ಯೋಜನೆಯಡಿ ಜಲಸಂರಕ್ಷಣೆ ಮತ್ತು ನಿರ್ವಹಣೆ ಕುರಿತು ರಾಜ್ಯಮಟ್ಟದ ಜಲಾಮೃತ ಜಲ ಸಂರಕ್ಷಣೆ ಹಾಗೂ ನಿರ್ವಹಣೆ ಕಾರ್ಯಾಗಾರ ನಡೆಯಲಿದೆ.
Vijaya Karnataka Web water conservation management workshop tomorrow
ಜಲ ಸಂರಕ್ಷಣೆ, ನಿರ್ವಹಣೆ ಕಾರ್ಯಾಗಾರ ನಾಳೆಯಿಂದ


ಸಕಾರವು ಜಲ ವರ್ಷಾಚರಣೆಯನ್ನಾಗಿ ಘೋಷಿಸಿರುವ ಹಿನ್ನೆಲೆಯಲ್ಲಿರಾಜ್ಯ ವಿಜ್ಞಾನ ಪರಿಷತ್ತು, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ, ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿಈ ಕಾರ್ಯಾಗಾರ ಆಯೋಜಿಸಲಾಗಿದೆ.

ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಂದ ವಿಶ್ಲೇಷಣಾತ್ಮಕ ಅಧ್ಯಯನ ವರದಿ ಆಹ್ವಾನಿಸಲಾಗಿತ್ತು. ಉತ್ತಮ ವರದಿಗಳ ಆಧಾರದ ಮೇರೆ ಪ್ರತಿ ಜಿಲ್ಲೆಯಿಂದ ಮೂವರಂತೆ ರಾಜ್ಯದೆಲ್ಲೆಡೆಯಿಂದ ಸುಮಾರು 102 ವಿದ್ಯಾರ್ಥಿಗಳು ಮತ್ತು ಶಿಕ್ಷಕರು ರಾಜ್ಯಮಟ್ಟದ ಕಾರ್ಯಾಗಾರದಲ್ಲಿಭಾಗವಹಿಸಲಿದ್ದಾರೆ. ರಾಜ್ಯ ಮಟ್ಟದ ಸ್ಪರ್ಧೆಯಲ್ಲಿಕಂದಾಯ ವಿಭಾಗಗಳಿಂದ ವಿಜೇತರಾಗುವ 3 ವಿದ್ಯಾರ್ಥಿಗಳಿಗೆ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು. ರಾಜ್ಯ ಮಟ್ಟದ ಈ ಸ್ಪರ್ಧೆಯ ಸಂದರ್ಭದಲ್ಲಿವಿಜ್ಞಾನಿಗಳೊಂದಿಗೆ ವಿದ್ಯಾರ್ಥಿಗಳ ಸಂವಾದ ಕಾರ್ಯಕ್ರಮ ಏರ್ಪಡಿಸಿದೆ. ಬಸವರಾಜ್‌ ಬಂಡಿವಡ್ಡರ್‌, ಅಯ್ಯಪ್ಪ ಮಸಗಿ, ಶಿವಾಜಿ ಕಾಗಣೀಕರ್‌, ನೇಸರಗಿ ಸುರೇಶ್‌ ಕುಲಕರ್ಣಿ ಅವರು ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಲಿದ್ದಾರೆ ಎಂದು ಜಿಲ್ಲಾಸಮಿತಿಯ ಕಾರ್ಯದರ್ಶಿ ಎನ್‌.ವಿ.ಜೋಷಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ