ಆ್ಯಪ್ನಗರ

ಗದಗ ಎಸ್‌ಪಿಯಾಗಿ ಯತೀಶ್‌

ಗದಗ: ಗದಗ ಜಿಲ್ಲೆಮತ್ತು ಇಲ್ಲಿನ ಜನ ಒಳ್ಳೆಯವರು. ಕೆಲಸ ಮಾಡಲು ಪ್ರಶಸ್ತ ಸ್ಥಳ ಎಂದು ಈ ಹಿಂದೆ ಕರ್ತವ್ಯ ನಿರ್ವಹಿಸಿದ ಅಧಿಕಾರಿಗಳು ತಮ್ಮ ಅನುಭವ ಹಂಚಿಕೊಂಡಿದ್ದಾರೆ. ಹೀಗಾಗಿ ಮುಂಬರುವ ದಿನಗಳಲ್ಲಿಉತ್ತಮ ಕಾರ್ಯ ಕೈಗೊಳ್ಳಲು ಉತ್ಸುಕನಾಗಿದ್ದೇನೆ ಎಂದು ಜಿಲ್ಲಾನೂತನ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ಯತೀಶ್‌ ಹೇಳಿದರು.

Vijaya Karnataka 3 Feb 2020, 5:00 am
ಗದಗ: ಗದಗ ಜಿಲ್ಲೆಮತ್ತು ಇಲ್ಲಿನ ಜನ ಒಳ್ಳೆಯವರು. ಕೆಲಸ ಮಾಡಲು ಪ್ರಶಸ್ತ ಸ್ಥಳ ಎಂದು ಈ ಹಿಂದೆ ಕರ್ತವ್ಯ ನಿರ್ವಹಿಸಿದ ಅಧಿಕಾರಿಗಳು ತಮ್ಮ ಅನುಭವ ಹಂಚಿಕೊಂಡಿದ್ದಾರೆ. ಹೀಗಾಗಿ ಮುಂಬರುವ ದಿನಗಳಲ್ಲಿಉತ್ತಮ ಕಾರ್ಯ ಕೈಗೊಳ್ಳಲು ಉತ್ಸುಕನಾಗಿದ್ದೇನೆ ಎಂದು ಜಿಲ್ಲಾನೂತನ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ಯತೀಶ್‌ ಹೇಳಿದರು.
Vijaya Karnataka Web 2SALIM11_25
ಗದಗ ಜಿಲ್ಲಾಪೊಲೀಸ್‌ ವರಿಷ್ಠಾಧಿಕಾರಿ ಯತೀಶ್‌ ಎನ್‌.


ಭಾನುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜಿಲ್ಲಾಪೊಲೀಸ್‌ ವರಿಷ್ಠಾಧಿಕಾರಿಯಾಗಿ ಇದೇ ಮೊದಲ ಬಾರಿಗೆ ಗದಗ ಆಗಮಿಸಿದ್ದೇನೆ. ಈಗಷ್ಟೆ ವರ್ಗಾವಣೆಯಾಗಿ ಬಂದಿದ್ದೇನೆ. ಹೀಗಾಗಿ ಕಾರ್ಯ ಯೋಜನೆ ಬಗ್ಗೆ ಸ್ಪಷ್ಟ ಯೋಜನೆ ಇಲ್ಲ. ಜಿಲ್ಲೆಯ ಎಲ್ಲಪೊಲೀಸ್‌ ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆದು, ಮುಂದಿನ ಕಾರ್ಯ ಯೋಜನೆಗಳ ಬಗ್ಗೆ ನಿರ್ಧರಿಸಲಾಗುವುದು ಎಂದು ತಿಳಿಸಿದರು.

ಈ ಹಿಂದಿನ ಪೊಲೀಸ್‌ ವರಿಷ್ಠಾಧಿಕಾರಿಗಳು ಜಿಲ್ಲೆಯ ಕಾನೂನು ಸುವ್ಯವಸ್ಥೆ ಕಾಪಾಡುವ ಜತೆಗೆ ಅನೇಕ ಒಳ್ಳೆಯ ಕಾರ್ಯಕ್ರಮಗಳನ್ನು ರೂಪಿಸಿದ್ದಾರೆ. ಅಂಥ ಕಾರ್ಯಕ್ರಮಗಳನ್ನು ಮುಂದುವರಿಸಿಕೊಂಡು ಹೋಗಲಾಗುವುದು ಎಂದು ತಿಳಿಸಿದರು.

2016 ಕೆಡರ್‌ ಅಧಿಕಾರಿ:
2016 ಕರ್ನಾಟಕ ಕೆಡರ್‌ ಐಪಿಎಸ್‌ ಅಧಿಕಾರಿ ಎನ್‌.ಯತೀಶ್‌ ಮೂಲತಃ ತಮಕೂರು ಜಿಲ್ಲೆಯವರು. ಬೆಂಗಳೂರಿನಲ್ಲಿವಿದ್ಯಾಭ್ಯಾಸ. ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿಎಎಸ್‌ಪಿ ಆಗಿ ಕರ್ತವ್ಯ ನಿರ್ವಹಿಸಿದ್ದಾರೆ. ನಂತರ ಬೆಂಗಳೂರಿನ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿನಿರ್ದೇಶಕರಾಗಿದ್ದರು. ಸಧ್ಯ ಗದಗ ಜಿಲ್ಲಾಪೊಲೀಸ್‌ ವರಿಷ್ಠಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ