ಆ್ಯಪ್ನಗರ

ಕಾರ್ಮಿಕ ವಿರೋಧಿ ತಿದ್ದುಪಡಿ ಕೈಬಿಡಲು ಆಗ್ರಹಿಸಿ ಪ್ರತಿಭಟನೆ

ಕಾರ್ಮಿಕ ವಿರೋಧಿ ತಿದ್ದುಪಡಿ ಕೈಬಿಡಬೇಕು, ಕಲ್ಲಿದ್ದಲು ನಿಕ್ಷೇಪ ಹರಾಜಿಗೆ ಆನುವಾಗುವ ಸುಗ್ರೀವಾಜ್ಞೆ ಮತ್ತು ಕೋಲ್ ಇಂಡಿಯಾ ಶೇರು ಮಾರಾಟ ನಿಲ್ಲಿಸಬೇಕು ಎಂದು ಆಗ್ರಹಿಸಿ ಕಾರ್ಮಿಕ ಸಂಘಗಳ ಜಂಟಿ ಸಮಿತಿ (ಜೆಸಿಟಿಯು) ವತಿಯಿಂದ ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು.

ವಿಕ ಸುದ್ದಿಲೋಕ 11 Mar 2016, 5:06 am
ಹಾಸನ: ಕಾರ್ಮಿಕ ವಿರೋಧಿ ತಿದ್ದುಪಡಿ ಕೈಬಿಡಬೇಕು, ಕಲ್ಲಿದ್ದಲು ನಿಕ್ಷೇಪ ಹರಾಜಿಗೆ ಆನುವಾಗುವ ಸುಗ್ರೀವಾಜ್ಞೆ ಮತ್ತು ಕೋಲ್ ಇಂಡಿಯಾ ಶೇರು ಮಾರಾಟ ನಿಲ್ಲಿಸಬೇಕು ಎಂದು ಆಗ್ರಹಿಸಿ ಕಾರ್ಮಿಕ ಸಂಘಗಳ ಜಂಟಿ ಸಮಿತಿ (ಜೆಸಿಟಿಯು) ವತಿಯಿಂದ ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು.
Vijaya Karnataka Web
ಕಾರ್ಮಿಕ ವಿರೋಧಿ ತಿದ್ದುಪಡಿ ಕೈಬಿಡಲು ಆಗ್ರಹಿಸಿ ಪ್ರತಿಭಟನೆ


ಹೇಮಾವತಿ ಪ್ರತಿಮೆ ಬಳಿಯಿಂದ ಹೊರಟ ಪ್ರತಿಭಟನಾ ಕಾರರು ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಸಿದರು. ವಿಮಾ ರಂಗದಲ್ಲಿ ವಿದೇಶಿ ನೇರ ಬಂಡವಾಳ ಮಿತಿಯನ್ನು ಶೇ.49ಕ್ಕೆ ಹೆಚ್ಚಿಸುವ ಸುಗ್ರೀವಾಜ್ಞೆ ಹಿಂಪಡೆಯಬೇಕು, ರಾಜಸ್ಥಾನ ಶಾಸನ ಸಭೆ ಅಂಗೀಕರಿಸಿರುವ ಕಾರ್ಮಿಕ ಕಾನೂನು ತಿದ್ದುಪಡಿ ಮಸೂದೆ ವಾಪಸ್ ಪಡೆಯಬೇಕು, ರಾಷ್ಟ್ರವ್ಯಾಪ್ತಿ ಕನಿಷ್ಠ ವೇತನ 18 ಸಾವಿರಕ್ಕೆ ನಿಗದಿಯಾಗಬೇಕು ಎಂದು ಆಗ್ರಹಿಸಿದರು.

ಗುತ್ತಿಗೆ ಕಾರ್ಮಿಕ ಕಾನೂನಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ತಿದ್ದುಪಡಿ ಮಾಡಬೇಕು, ಕನಿಷ್ಠ ಪಿಂಚಣಿ ಮೂರು ಸಾವಿರ ರೂ., ಬೋನಸ್, ಭವಿಷ್ಯನಿಧಿ, ಉಪ ಧನ ಕಾಯಿದೆ ಗಳಲ್ಲಿನ ಮಿತಿ ಹೆಚ್ಚಳ ಮಾಡಬೇಕು, ಸಾರ್ವಜನಿಕ ಉದ್ದಿಮೆ ಗಳ ಷೇರು ವಿಕ್ರಯ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ನಿಧಿ ಸ್ಥಾಪನೆ, ಕಲ್ಯಾಣ ಯೋಜನೆಗಳ ಜಾರಿಗಾಗಿ ಸಮರ್ಪಕ ಹಣ ಮೀಸಲಿಡಬೇಕು. ಬೆಲೆ ಏರಿಕೆ ನಿಯಂತ್ರಣಕ್ಕಾಗಿ ಸಾರ್ವತ್ರಿಕ ವಿತರಣಾ ವ್ಯವಸ್ಥೆ ಜಾರಿ ಮಾಡಬೇಕು. ಕಾರ್ಮಿಕ ಕಾನೂನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. 45 ದಿನಗಳ ನೋಂದವಣಿಗಾಗಿ ಅಂತಾರಾಷ್ಟ್ರೀಯ ಕಾರ್ಮಿಕ ಸಂಘಟನೆ ಐಎಲ್‌ಒ ಕಟ್ಟುವ ಸ್ವಾತಂತ್ರಕ್ಕಾಗಿ ಸಂಸತ್ ಅನುಮೋದನೆ ಪಡೆಯಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಧರ್ಮೇಶ್, ಎಂ.ಸಿ.ಡೋಂಗ್ರೆ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ