ಆ್ಯಪ್ನಗರ

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಆರೋಪ

ಆಲೂರು ತಾಲೂಕು ದೊಡ್ಡಕಣಗಾಲು ಗ್ರಾಮದ ಸರಕಾರಿ ಶಾಲೆಯ ಮುಖ್ಯ ಶಿಕ್ಷಕ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂಬ ವಿದ್ಯಾರ್ಥಿನಿಯರು, ಪೋಷಕರ ಆರೋಪದ ಮೇರೆಗೆ ಪೊಲೀಸರು ಆರೋಪಿ ಶಿಕ್ಷಕನ ವಿಚಾರಣೆ ನಡೆಸುತ್ತಿದ್ದಾರೆ.

ವಿಕ ಸುದ್ದಿಲೋಕ 13 Mar 2016, 5:47 am
ಹಾಸನ: ಆಲೂರು ತಾಲೂಕು ದೊಡ್ಡಕಣಗಾಲು ಗ್ರಾಮದ ಸರಕಾರಿ ಶಾಲೆಯ ಮುಖ್ಯ ಶಿಕ್ಷಕ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂಬ ವಿದ್ಯಾರ್ಥಿನಿಯರು, ಪೋಷಕರ ಆರೋಪದ ಮೇರೆಗೆ ಪೊಲೀಸರು ಆರೋಪಿ ಶಿಕ್ಷಕನ ವಿಚಾರಣೆ ನಡೆಸುತ್ತಿದ್ದಾರೆ.
Vijaya Karnataka Web
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಆರೋಪ

ಗ್ರಾಮದ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಕೆಲ ದಿನಗಳಿಂದ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ ಎಂದು ಆರೋಪಿಸಿ ಶನಿವಾರ ಶಾಲೆಯ ಬಳಿ ಜಮಾಯಿಸಿದ ಪೋಷಕರು, ಗ್ರಾಮಸ್ಥರು ಮುಖ್ಯ ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಸ್ಥಳಕ್ಕೆ ಆಗಮಿಸಿದ ಆಲೂರು ಪೊಲೀಸರು ಶಿಕ್ಷಕನನ್ನು ತಮ್ಮೊಂದಿಗೆ ಕರೆದುಕೊಂಡು ಹೋದರು.
ಆಲೂರು ಠಾಣೆಯಲ್ಲಿ ಮಹಿಳಾ ಪೊಲೀಸರ ಸಮ್ಮುಖದಲ್ಲಿ ವಿದ್ಯಾರ್ಥಿನಿಯರ ಹೇಳಿಕೆಯನ್ನು ದಾಖಲಿಸಲಾಗಿದೆ. ಶಿಕ್ಷಕನ ವಿರುದ್ಧ ದೂರು ನೀಡಿ ಎಂದು ಪೋಷಕರಿಗೆ ತಿಳಿಸಿದ್ದು, ಅವರು ದೂರು ನೀಡಲು ನಿರಾಕರಿಸಿದ್ದಾರೆ ಎಂದು ಎಸ್‌ಐ ನಂಜೇಗೌಡ ತಿಳಿಸಿದರು. ದೂರು ಏನು ಬೇಡ ಶಿಕ್ಷಕನನ್ನು ವರ್ಗ ಮಾಡಿದರೆ ಸಾಕು ಎಂದು ತಿಳಿಸಿದ್ದು, ದೂರು ನೀಡದಿದ್ದರೆ ನಾವು ಕ್ರಮ ಕೈಗೊಳ್ಳುವುದು ಸಾಧ್ಯವಿಲ್ಲ ಎಂದು ಮನವರಿಕೆ ಮಾಡಿಕೊಟ್ಟಿದ್ದೇನೆ ಎಂದು ಎಸ್‌ಐ ತಿಳಿಸಿದರು. ದೂರು ನೀಡಿಲ್ಲ: ಲೈಂಗಿಕ ಕಿರುಕುಳ ಸಂಬಂಧ ವಿದ್ಯಾರ್ಥಿ ಪೋಷಕರು ಲಿಖಿತವಾಗಿ ದೂರು ನೀಡಿಲ್ಲ. ದೂರು ನೀಡಿದರೆ ಇಲಾಖಾ ನಿಯಮದ ಅನ್ವಯ ಕ್ರಮ ಕೈಗೊಳ್ಳಲಾಗುವುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವೇದಾವತಿ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ