ಆ್ಯಪ್ನಗರ

ಹಾಸನದಲ್ಲಿ ಏ.18 ಮತ್ತು 19ರಂದು ನಡೆಯಲಿದೆ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ!

ಹಾಸನದಲ್ಲಿ ಏ.18 ಮತ್ತು 19ರಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಕೇಂದ್ರದ ಮುಖಂಡರು, ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ 338 ಮಂದಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವ ಕೆ. ಗೋಪಾಲಯ್ಯ ಮಾಹಿತಿ ನೀಡಿದ್ದಾರೆ.

Vijaya Karnataka Web 9 Apr 2021, 8:06 pm
ಹಾಸನ: ಪಕ್ಷದ ಸಂಘಟನೆ ಹಿನ್ನೆಲೆಯಲ್ಲಿ ಏ.18 ಮತ್ತು 19ರಂದು ರಾಜ್ಯ ಬಿಜೆಪಿ ಕಾರ್ಯಕಾರಣಿ
Vijaya Karnataka Web ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಸಭೆ ನಗರದಲ್ಲಿ ಏರ್ಪಡಿಸಲಾಗಿದ್ದು, ಕೇಂದ್ರದ ಮುಖಂಡರು, ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ338 ಮಂದಿ ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಸಚಿವ ಕೆ. ಗೋಪಾಲಯ್ಯ ತಿಳಿಸಿದ್ದಾರೆ.

ನಗರದ ಬಿಎಂ ರಸ್ತೆ ಖಾಸಗಿ ಹೋಟೆಲ್ ಪಕ್ಕದ ವಿಶಾಲ ಮೈದಾನದಲ್ಲಿ ಕಾರ್ಯಕಾರಿಣಿ ಸಭೆ ವೇದಿಕೆ ನಿರ್ಮಾಣಕ್ಕೆ ಶುಕ್ರವಾರ ಗುದ್ದಲಿ ಪೂಜೆ ನೆರವೇರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ನಮ್ಮೆಲ್ಲರ ಕೋರಿಕೆ ಅನ್ವಯ ಇದೇ ಪ್ರಥಮ ಬಾರಿಗೆ ರಾಜ್ಯ ಬಿಜೆಪಿ ಕಾರ್ಯಕಾರಣಿ ನಡೆಸುವ ಅವಕಾಶ ದೊರೆತಿದ್ದು, ಕೇಂದ್ರದ ಮುಖಂಡರು ಹಾಗೂ ರಾಜ್ಯ ಉಸ್ತುವಾರಿ ಸಚಿವರು, ಸಿಂಎಂ ಸೇರಿದಂತೆ ರಾಜ್ಯ ನಾಯಕರು, ಕೋರ್ ಕಮಿಟಿ ಸದಸ್ಯರು ಭಾಗವಹಿಸಲಿದ್ದು, ಕೋವಿಡ್ ಹಿನ್ನೆಲೆಯಲ್ಲಿ ಒಂದು ಆಸನಕ್ಕೂ ಮತ್ತೊಂದಕ್ಕೂ ಆರು ಅಡಿ ಅಂತರ ಕಾಯ್ದುಕೊಂಡು ಸಭೆ ನಡೆಸಲು ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ರಾಜ್ಯದ ಎಲ್ಲಾ ಸಚಿವರು ಹಾಗೂ ರಾಷ್ಟ್ರಮಟ್ಟದ ನಾಯಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಎರಡು ದಿನಗಳು ನಡೆಯುವ ಈ ಕಾರ್ಯಕಾರಣಿ ಸಭೆಯಲ್ಲಿ ರಾಜ್ಯದ ಆಗುಹೋಗು ಹಾಗೂ ಪಕ್ಷದ ಆಂತರಿಕ ವಿಷಯದ ಬಗ್ಗೆ ಚರ್ಚಿಸಲಾಗುವುದು ಎಂದರು.

ಜಿಲ್ಲೆಯಲ್ಲಿ 15 ವರ್ಷದ ಹಿಂದೆ ನಾಲ್ಕು ಜನ ಶಾಸಕರನ್ನು ಗೆಲ್ಲಿಸಿದ ಇತಿಹಾಸ ಇದೆ. ಈ ಹಿನ್ನೆಲೆಯಲ್ಲಿ ಪಕ್ಷಬಲವರ್ಧನೆ ಕುರಿತು ಕಾರ್ಯಕಾರಣಿ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದರು.

ಗೆಲುವು ನಮ್ಮದೆ
ರಾಜ್ಯದಲ್ಲಿ ನಡೆಯುತ್ತಿರುವ ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಗೆಲುವು ಸಾಧಿಸಲಿದೆ. ಫಲಿತಾಂಶದ ವಿಷಯದಲ್ಲಿ ಸಂಶಯ ಬೇಡವೇ ಬೇಡ ಎಂದು ದೃಢವಿಶ್ವಾಸ ವ್ಯಕ್ತಪಡಿಸಿದರು.

ಕಠಿಣ ಕ್ರಮ

ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಖಾಸಗಿ ಮತ್ತಿತರ ವಾಹನಗಳ ವ್ಯವಸ್ಥೆ ಕಲ್ಪಿಸಲಾಗಿದೆ . ಅವರು ದುಬಾರಿ ಶುಲ್ಕ ವಸೂಲಿ ಮಾಡಿದರೆ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ನೀವು ಸಿಎಂ ಆಗಿದ್ದಾಗ ಕೇಳಿಬಂದ ಅಪಸ್ವರಗಳು ಹೀಗಿವೆ, ಸಿದ್ದರಾಮಯ್ಯಗೆ ಪಟ್ಟಿ ನೀಡಿದ ಬಿಜೆಪಿ
ಸಾರಿಗೆ ನೌಕರರ ಹಲವು ಬೇಡಿಕೆಗಳನ್ನು ಈಡೇರಿಸಲಾಗಿದೆ. ಉಳಿದ ಒಂದೆರಡು ಬೇಡಿಕೆಗಳನ್ನು ಕೂತು ಬಗೆಹರಿಸಿಕೊಳ್ಳಲು ಸಾರಿಗೆ ಸಿಬ್ಬಂದಿಗಳು ಮುಂದಾಗಬೇಕೆ ಹೊರತು ಸಾರ್ವಜನಿಕರಿಗೆ ತೊಂದರೆ ಕೊಡುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ!
ಉಪ ಚುನಾವಣೆ ಬಳಿಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬದಲಾವಣೆ ಆಗಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು ಸಿಎಂ ಅವರು ಪೂರ್ಣಗೊಳಿಸಲಿದ್ದಾರೆ. ಬದಲಾವಣೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಪ್ರತಿಕ್ರಿಯಿಸಿದರು.

ಪಕ್ಷದಲ್ಲಿ ಯತ್ನಾಳ್ ಅವರು ಇಲ್ಲಸಲ್ಲದ ಆರೋಪ ಮಾಡುತ್ತಿರುವುದಕ್ಕೆ ಹೈಕಮಾಂಡ್ ಕುಮ್ಮಕ್ಕೆ ಕಾರಣ ಎಂಬಆರೋಪದ ಬಗ್ಗೆ ಉತ್ತರಿಸಿ, ಯತ್ನಾಳ್ ಅವರಿಗೆ ಈಗಾಗಲೇ ಪಕ್ಷದಿಂದ ಎಚ್ಚರಿಕೆ ನೀಡಲಾಗಿದೆ. ಈ ಸಂಬಂಧ ರಾಜ್ಯ ನಾಯಕರು ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ ಹೈಕಮಾಂಡ್ ವೀಕ್ ಅಲ್ಲ ಸ್ಟ್ರಾಂಗ್ ಇದೆ ಕಾದು ನೋಡಿ ಎಂದರು.

ಈಶ್ವರಪ್ಪ ಅವರ ಖಾತೆಯಲ್ಲಿ ಸಿಎಂ ಹಸ್ತಕ್ಷೇಪ ಮಾಡಿ ನೇರವಾಗಿ ಇಲಾಖೆಗೆ ಹಣ ಬಿಡುಗಡೆ ಮಾಡುತ್ತಿದ್ದಾರೆ ಇದರಿಂದ ಕಮಿಷನ್ ಕೈತಪ್ಪುತ್ತಿದೆ ಎಂದು ಮುನಿಸಿಕೊಂಡು ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಆರೋಪದ ಬಗ್ಗೆ ಪ್ರತಿಕ್ರಿಯಿಸಿ, ಸಿಎಂ ಯಡಿಯೂರಪ್ಪ ಅವರ ಪರಮಾಧಿಕಾರ ಯಾವ ಇಲಾಖೆಗೆ ಎಷ್ಟು ಅನುದಾನ ನೀಡಬೇಕು ಅದನ್ನು ಕೊಡುತ್ತಾರೆ ಈಶ್ವರಪ್ಪ ಕೂತು ಮಾತನಾಡಿ ಸಮಸ್ಯೆ ಬಗೆಹರಿಸಿಕೊಳ್ಳಲಿದ್ದಾರೆ ಎಂದು ಹೇಳಿದರು. ಅಬಕಾರಿ ಇಲಾಖೆ ಗುರಿಮೀರಿದ ಸಾಧನೆಗೆ ಮದ್ಯ ವ್ಯಸನಿಗಳು ಹೆಚ್ಚಾಗಿದ್ದಾರೆಯೇ ಎಂದು ಕೇಳಿದ ಪ್ರಶ್ನೆಗೆ ನಗುವಿನ ಮೂಲಕವೇ ಉತ್ತರಿಸಿ ಅಧಿಕಾರಿಗಳ ಶ್ರಮ ಎಂದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಹುಲ್ಲಳ್ಳಿ ಸುರೇಶ್, ಮಾಜಿ ಅಧ್ಯಕ್ಷ ನವಿಲೆ ಅಣ್ಣಪ್ಪ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ