ಆ್ಯಪ್ನಗರ

ಬಿಜೆಪಿಗೆ ಮತ ಹಾಕಿದ್ದರಿಂದ ದಕ್ಷಿಣ ಕನ್ನಡಕ್ಕೆ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ 5ನೇ ಸ್ಥಾನ: ರೇವಣ್ಣ

ಚುನಾವಣೆಯಲ್ಲಿ ದಕ್ಷಿಣ ಕನ್ನಡದವರು ಬಿಜೆಪಿಗೆ ಮತ ಹಾಕಿದ್ದಾರೆ. ಜೆಡಿಎಸ್‌ಗೆ ಮತ ಹಾಕಿಲ್ಲ. ಹೀಗಾಗಿ ಅದು ಫಲಿತಾಂಶದಲ್ಲಿ ಹಿಂದೆ ಬಿದ್ದಿದೆ ಎಂದು ರೇವಣ್ಣ ಹೇಳಿದ್ದಾರೆ.

Vijaya Karnataka Web 1 May 2019, 5:36 pm
ಹಾಸನ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಈ ಬಾರಿ ಐದನೇ ಸ್ಥಾನ ಪಡೆದುಕೊಂಡಿದ್ದು ಏಕೆ ಗೊತ್ತಾ? ಜೆಡಿಎಸ್‌ಗೆ ಮತ ಹಾಕಿಲಿಲ್ಲ. ಅದಕ್ಕೆ. ಐದನೇ ಸ್ಥಾನ ದೊರೆತಿದೆ.
Vijaya Karnataka Web ಎಚ್‌ಡಿ ರೇವಣ್ಣ
ಎಚ್‌ಡಿ ರೇವಣ್ಣ


ಈ ಕಾರಣವನ್ನು ಕೊಟ್ಟಿರುವವರು ಯಾರು ಗೊತ್ತಾ?

ಲೋಕೋಪಯೋಗಿ ಸಚಿವ, ಎಚ್‌ಡಿ ದೇವೇಗೌಡ ಪುತ್ರ ಎಚ್‌ಡಿ ರೇವಣ್ಣ.

ಚುನಾವಣೆಯಲ್ಲಿ ದಕ್ಷಿಣ ಕನ್ನಡದವರು ಬಿಜೆಪಿಗೆ ಮತ ಹಾಕಿದ್ದಾರೆ. ಜೆಡಿಎಸ್‌ಗೆ ಮತ ಹಾಕಿಲ್ಲ. ಹೀಗಾಗಿ ಅದು ಫಲಿತಾಂಶದಲ್ಲಿ ಹಿಂದೆ ಬಿದ್ದಿದೆ ಎಂದು ರೇವಣ್ಣ ಹೇಳಿದ್ದಾರೆ.

ದಕ್ಷಿಣ ಕನ್ನಡದವರು ಜೆಡಿಎಸ್‌ಗೆ ಮತ ಹಾಕಿದ್ದರೆ ಫಲಿತಾಂಶದಲ್ಲಿ ನಂಬರ್‌ ಒನ್‌ ಸ್ಥಾನ ಪಡೆಯುತ್ತಿತ್ತು ಎಂದು ಸ್ಪಷ್ಟಪಡಿಸಿದ್ದಾರೆ ರೇವಣ್ಣ.

ಇಡೀ ದೇಶದಲ್ಲಿ ನಮ್ಮ ಕ್ಷೇತ್ರದಲ್ಲಿ ಎಂಟು ಮೊರಾರ್ಜಿ ಶಾಲೆಗಳಿವೆ, ಏಳು ಪ್ರಥಮ ದರ್ಜೆ ಕಾಲೇಜುಗಳಿವೆ,

ಯಾವ ಪ್ರಧಾನಿ ಲೋಕಸಭಾ ಕ್ಷೇತ್ರದಲ್ಲೂ ಇಷ್ಟೊಂದು ಕಾಲೇಜುಗಳಿಲ್ಲ ಎಂದು ರೇವಣ್ಣ ತಿಳಿಸಿದರು.

ನಾನು ಸಚಿವನಾದ ಬಳಿಕ ವಿಶೇಷ ತರಬೇತಿ ನಡೆಸಲು ಹೇಳಿದ್ದೇ. ಭಾನುವಾರವೂ ಶಿಕ್ಷಕರು ತರಗತಿ ತೆಗೆದುಕೊಳ್ಳುತ್ತಿದ್ದರು. ಇದೆಲ್ಲವನ್ನೂ ಮಾಡಿದ್ದು ಭವಾನಿ ಎಂದು ರೇವಣ್ಣ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ