ಆ್ಯಪ್ನಗರ

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ಪ್ರಜೆಯ ಹೊಣೆ

ಪರಿಸರ ಸಂರಕ್ಷಿಸುವುದು ದೇಶದ ಪ್ರತಿಯೊಬ್ಬ ಪ್ರಜೆಯ ಹೊಣೆ ಹಾಗೂ ಈ ನಿಟ್ಟಿನಲ್ಲಿ ಹೆಚ್ಚು ಹೆಚ್ಚು ಗಿಡಗಳನ್ನು ಬೆಳಸಿ ಪ್ರತಿಯೊಬ್ಬರು ಪರಿಸರ ಸಂರಕ್ಷ ಣೆಗೆ ಶ್ರಮಿಸಬೇಕು ಎಂದು ಶ್ರೀ ಶಂಭುನಾಥ ಸ್ವಾಮೀಜಿ ಸಲಹೆ ನೀಡಿದರು.

Vijaya Karnataka 19 Jun 2019, 5:00 am
ಹಾಸನ : ಪರಿಸರ ಸಂರಕ್ಷಿಸುವುದು ದೇಶದ ಪ್ರತಿಯೊಬ್ಬ ಪ್ರಜೆಯ ಹೊಣೆ ಹಾಗೂ ಈ ನಿಟ್ಟಿನಲ್ಲಿ ಹೆಚ್ಚು ಹೆಚ್ಚು ಗಿಡಗಳನ್ನು ಬೆಳಸಿ ಪ್ರತಿಯೊಬ್ಬರು ಪರಿಸರ ಸಂರಕ್ಷ ಣೆಗೆ ಶ್ರಮಿಸಬೇಕು ಎಂದು ಶ್ರೀ ಶಂಭುನಾಥ ಸ್ವಾಮೀಜಿ ಸಲಹೆ ನೀಡಿದರು.
Vijaya Karnataka Web HSN-HSN18M7


ಕೃಷಿ ಮಹಾವಿದ್ಯಾಲಯ, ಕಾರೆಕೆರೆ, ಹಾಸನ ವತಿಯಿಂದ ಚನ್ನರಾಯಪಟ್ಟಣ ತಾಲೂಕು ಅಣತಿ ಗ್ರಾಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದಲ್ಲಿ ಶ್ರೀ ದಿಗಂಬರೇಶ್ವರ ವಿದ್ಯಾಸಂಸ್ಥೆ ಆವರಣದಲ್ಲಿ ವನಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ದೇಶ ಮತ್ತು ಸಮಾಜ ಅಭಿವೃದ್ಧಿಗೆ ಸೇವಾ ಮಾನೋಭಾವ ಹೊಂದಿರಬೇಕು ಮತ್ತು ಗುರು ಹಿರಿಯರ ಬಗ್ಗೆ ಭಕ್ತಿ ಭಾವ ಹೊಂದಿರಬೇಕು. ಹಾಗಿದ್ದಲ್ಲಿ ಮಾತ್ರ ಸನ್ಮಾರ್ಗದಲ್ಲಿ ನಡೆಯಲು ಸಾಧ್ಯ ಎಂದು ತಿಳಿಸಿದರು.

ಶ್ರೀ ದಿಗಂಬರೇಶ್ವರ ವಿದ್ಯಾಸಂಸ್ಥೆಯ ಆವರಣದಲ್ಲಿ ಡಾ.ನಟರಾಜ್‌ ಸಹಪ್ರಾಧ್ಯಾಪಕರು ಹಾಗೂ ಡಾ.ರಾಘವೇಂದ್ರ ಸಹಾಯಕ ಪ್ರಾಧ್ಯಾಪರು, ಕೃಷಿ ಮಹಾವಿದ್ಯಾಲಯ ಹಾಸನ ಇವರುಗಳ ನೇತೃತ್ವದಲ್ಲಿ ತಯಾರಿಸಿದ ಗಿಡನೆಡುವ ಪ್ರದೇಶದ ವಿನ್ಯಾಸದ ಸಹಾಯದಿಂದ ಸುಮಾರು 350 ವಿವಿಧ ಗಿಡಗಳನ್ನು ನೆಟ್ಟಿರುವ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳನ್ನು ಶ್ಲಾಘಿಸಿದರು.

ರಾಷ್ಟ್ರೀಯ ಸೇವಾ ಶಿಬಿರ ಯೋಜನೆಯು ವಿದ್ಯಾರ್ಥಿಗಳ ಜೀವನದಲ್ಲಿ ಸರ್ವತೋಮುಖ ಅಭಿವೃದ್ಧಿಯಾಗಲು ಉತ್ತಮ ವೇದಿಕೆಯಾಗಿದ್ದು ಅದನ್ನು ಸಂಪೂರ್ಣವಾಗಿ ಸದುಪಯೋಗ ಪಡದೆಕೊಳ್ಳಬೇಕೆಂದು ಸೂಚಿಸಿದರು.

ಅಧ್ಯಕ್ಷ ತೆ ವಹಿಸಿದ್ದ ಕೃಷಿ ಮಹಾವಿದ್ಯಾಲಯದ ಡೀನ್‌ ಡಾ. ಎನ್‌.ದೇವಕುಮಾರ್‌ ಮಾತನಾಡಿ, ರಾಷ್ಟ್ರೀಯ ಸೇವಾಯೋಜನೆ ಶಿಬಿರವು ವಿದ್ಯಾರ್ಥಿಗಳಿಗೆ ತಮ್ಮ ಜೀವನದಲ್ಲಿ ಉತ್ತಮ ಮುಂದಾಳತ್ವದ ಗುಣಗಳನ್ನು ಬೆಳಸಿಕೊಳ್ಳಲು ಉತ್ತಮ ವೇದಿಕೆಯಾಗುತ್ತದೆ ಹಾಗೂ ಗ್ರಾಮೀಣ ಪ್ರದೇಶದ ಸಾಮಾಜಿಕ, ಆರ್ಥಿಕ ಮತ್ತು ಕೃಷಿ ಅಭಿವೃದ್ಧಿ ಬಗ್ಗೆ ಹೆಚ್ಚು ವಿಚಾರಗಳನ್ನು ತಿಳಿಯಲು ಸಹಕಾರಿಯಾಗುತ್ತದೆಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಶಿಬಿರದ ಯೋಜಧಿಕಾರಿ ಡಾ. ಎಸ್‌. ಚನ್ನಕೇಶವ, ಡಾ. ಎಸ್‌. ಎನ್‌. ನಾಗೇಶ್‌ ಮತ್ತು ಡಾ. ಅನಿತ ಎಸ್‌. ಹಾಗೂ ಗ್ರಾಮದ ಮುಖಂಡ ಟಿ. ಆರ್‌. ವೆಂಕಟೇಶ್‌, ನಂದೀಶ್‌, ಅನಿಲ್‌ ಕುಮಾರ್‌, ಎ. ಕೆ. ಕುಮಾರ್‌ ಸ್ವಾಮಿ, ಎ. ಡಿ. ಶಿವೇಗೌಡರು, ಶಿವಲಿಂಗೇಗೌಡರು, ಶಿವಕುಮಾರ್‌, ಚಂದ್ರಗೌಡರು, ಕೃಷ್ಣೇಗೌಡರು , ಭಾಸ್ಕರೇಗೌಡರು ಮತ್ತು ಅಣತಿ ಗ್ರಾಮಸ್ಥರು ಹಾಜರಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ