ಅರಸೀಕೆರೆ: ಮನೆ ಮುಂದೆ ನಿಲ್ಲಿಸಿದ್ದ ಆಟೋಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಸುಟ್ಟು ಹಾಕಿರುವ ಘಟನೆ ನಗರದ ಬಿಜಿ ಹಟ್ಟಿ ಬಡಾವಣೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ಬಡಾವಣೆಯ ನಿವಾಸಿ ಮಂಜುನಾಥ್ ಅವರು ತಮ್ಮ ಆಟೋವನ್ನು ಮನೆಯ ಮುಂದೆ ನಿಲ್ಲಿಸಿದ್ದರು.ಯಾರೋ ದುಷ್ಕರ್ಮಿಗಳು ರಾತ್ರಿ ಬೆಂಕಿ ಹಚ್ಚಿದ್ದಾರೆ ಎಂದು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಆತಂಕ: ಇದೇ ರೀತಿ ಕಳೆದ ಕೆಲವು ತಿಂಗಳ ಹಿಂದೆ ನಗರದ ಶಾನಭೋಗರ ಬೀದಿ ಮಿನಿ ವಿಧಾನಸೌಧ ಹಿಂಭಾಗ ಹಾಗೂ ಮಲ್ಲೇಶ್ವರ ಬಡಾವಣೆಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ಗಳಿಗೆ ಕಿಡಿಗೇಡಿಗಳು ಬೆಂಕಿ ಹಾಕಿದ್ದರು.