ಆ್ಯಪ್ನಗರ

ವಿದ್ಯುತ್‌ ತಂತಿ ತಗುಲಿ ರೈತ ಸಾವು

ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತರೊಬ್ಬರಿಗೆ ಕೆಳ ಮಟ್ಟದಲ್ಲಿ ಹಾದು ಹೋಗಿದ್ದ ವಿದ್ಯುತ್‌ ತಂತಿ ತಗುಲಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲೂಕಿನ ಮಠಸಾರಗ ಗ್ರಾಮದಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ.

Vijaya Karnataka 8 Aug 2018, 5:00 am
ಸಕಲೇಶಪುರ: ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತರೊಬ್ಬರಿಗೆ ಕೆಳ ಮಟ್ಟದಲ್ಲಿ ಹಾದು ಹೋಗಿದ್ದ ವಿದ್ಯುತ್‌ ತಂತಿ ತಗುಲಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲೂಕಿನ ಮಠಸಾರಗ ಗ್ರಾಮದಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ.
Vijaya Karnataka Web former electrocuted killed
ವಿದ್ಯುತ್‌ ತಂತಿ ತಗುಲಿ ರೈತ ಸಾವು


ಗ್ರಾಮದ ಎಂ.ಡಿ. ನಾರಾಯಣ್‌(50) ಮೃತರು. ಘಟನೆಗೆ ಸೆಸ್ಕ್‌ ಇಲಾಖೆ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 11 ಹಾಗೂ 66 ಕೆ.ವಿ ವಿದ್ಯುತ್‌ ಮಾರ್ಗಗಳು ನಿಯಮದಂತೆ ನೆಲದಿಂದ 18 ಅಡಿ ಎತ್ತರದಲ್ಲಿ ಇರಬೇಕು. ಆದರೆ, ಆ ಮಟ್ಟಕ್ಕಿಂತ ಅತ್ಯಂತ ಕೆಳ ಭಾಗದಲ್ಲಿ ವಿದ್ಯುತ್‌ ತಂತಿ ಹಾದು ಹೋಗಿರುವುದೇ ನಾರಾಯಣ್‌ ಅವರ ಸಾವಿಗೆ ಕಾರಣ ಎಂದು ಗ್ರಾಮಸ್ಥರು ದೂರಿದ್ದಾರೆ.

ನಾರಾಯಣ್‌ ಪ್ರಗತಿಪರ ಕೃಷಿಕರಾಗಿದ್ದು , ವ್ಯವಸಾಯ ಕ್ಷೇತ್ರದಲ್ಲಿ ಕಷ್ಟಪಟ್ಟು ದುಡಿಯುತ್ತಿದ್ದರು. ಇವರ ಸಾವು ಕುಟುಂಬದವರಿಗೆ ಮಾತ್ರವಲ್ಲದೆ ಇಡೀ ಗ್ರಾಮಕ್ಕೆ ನಷ್ಟ ಉಂಟು ಮಾಡಿದೆ ಎಂದು ಸ್ಥಳೀಯರು ದುಃಖ ತೋಡಿಕೊಂಡಿದ್ದಾರೆ.

ಗ್ರಾಮದಲ್ಲಿ ಕೆಳಬಾಗ ಹಾದು ಹೋಗಿರುವ ವಿದ್ಯುತ್‌ ತಂತಿಯನ್ನು ನಿಯಮದಂತೆ ಮೇಲೆ ಅಳವಡಿಸಬೇಕೆಂದು ಹಲವು ಬಾರಿ ಇಲಾಖೆಗೆ ಮನವಿ ಮಾಡಿದ್ದರೂ ಯಾರೊಬ್ಬರೂ ಇತ್ತ ಗಮನ ಹರಿಸಲಿಲ್ಲ. ನಾರಾಯಣ್‌ ಅವರ ಸಾವಿಗೆ ಇಲಾಖೆಯೇ ನೇರ ಹೊಣೆ. ಸಂಬಂಧಿಸಿದ ಅಧಿಕಾರಿಗಳು ಇದಕ್ಕೆ ಸ್ಪಷ್ಟ ಉತ್ತರ ನೀಡಬೇಕು ಎಂದು ಮರಣೋತ್ತರ ಶವ ಪರೀಕ್ಷೆ ವೇಳೆ ಪಟ್ಟಣದ ಕ್ರಾಫರ್ಡ್‌ ಆಸ್ಪತ್ರೆ ಬಳಿ ಸೇರಿದ್ದ ನಾರಾಯಣ್‌ ಅವರ ಕುಟುಂಬದವರು ಹಾಗೂ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ಘಟನೆ ಸ್ಥಳಕ್ಕೆ ಆಗಮಿಸಿದ ಸೆಸ್ಕ್‌ ಇಲಾಖೆ ಅಧಿಕಾರಿಗಳು ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿ, ಈ ಸಂಬಂಧ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿ, ಸೂಕ್ತ ನೆರವು ನೀಡಲು ಮನವಿ ಮಾಡಲಾಗುವುದು ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ