ಆ್ಯಪ್ನಗರ

ಜಾವಗಲ್‌: ಅಪ್ರಾಪ್ತೆಗೆ ಕಿರುಕುಳ: ದೂರು ದಾಖಲು

ಅಪ್ರಾಪ್ತಗೆ ಲೈಂಗಿಕ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ವೃದ್ಧರೊಬ್ಬರ ವಿರುದ್ಧ ಪೋಕ್ಸೋ ಕಾಯಿದೆಯಡಿ ಜಾವಗಲ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

Vijaya Karnataka 11 Sep 2017, 5:08 am

ಜಾವಗಲ್‌: ಅಪ್ರಾಪ್ತಗೆ ಲೈಂಗಿಕ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ವೃದ್ಧರೊಬ್ಬರ ವಿರುದ್ಧ ಪೋಕ್ಸೋ ಕಾಯಿದೆಯಡಿ ಜಾವಗಲ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಜಾವಗಲ್‌ ಹೋಬಳಿ ಮೊಸಳೆ ಗ್ರಾಮದ ಶಂಕರಪ್ಪ (65) ಗ್ರಾಮದಲ್ಲಿ ಆಟವಾಡುತ್ತಿದ್ದ ಬಾಲಕಿಯನ್ನು ಸೀಬೆಕಾಯಿ ನೀಡುವುದಾಗಿ ಹೇಳಿ ಮನೆಯ ಬಳಿ ಕರೆದುಕೊಂಡು ಹೋಗಿದ್ದ. ಈ ವೇಳೆ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಲು ಮುಂದಾದಾಗ ಬಾಲಕಿ ಆತನನ್ನು ನೂಕಿ ಮನೆಯಿಂದ ಹೊರ ಬಂದು ಪೋಷಕರಿಗೆ ತಿಳಿಸಿದ್ದಾಳೆ.

ಪೋಷಕರು ಜಾವಗಲ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿ ನಾಪತ್ತೆಯಾಗಿದ್ದು ಬಂಧನಕ್ಕೆ ಪೊಲೀಸರು ಶೋಧ ಕಾರ‍್ಯ ಕೈಗೊಂಡಿದ್ದಾರೆ ಎಂದು ಪಿಎಸ್‌ಐ ನಟರಾಜು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ