ಆ್ಯಪ್ನಗರ

ಬಾಗಿಲು ತೆರೆದ ಹಾಸನಾಂಬ ದೇವಾಲಯ: ಅ.29ರವರೆಗೆ ದೇವಿಯ ದರ್ಶನಕ್ಕೆ ಅವಕಾಶ

ಹಾಸನಾಂಬೆಯ ದರ್ಶನ ಪಡೆಯಲು ಕಾಯುತ್ತಿದ್ದವರಿಗೆ ಇದೀಗ ಸುವರ್ಣಾವಕಾಶ ಒದಗಿಬಂದಿದೆ. ವರ್ಷಕ್ಕೊಮ್ಮೆ ದರ್ಶನ ಭಾಗ್ಯವನ್ನು ಕರುಣಿಸುವ ಹಾಸನಾಂಬೆಯ ಜಾತ್ರಾ ಮಹೋತ್ಸವ ಇಂದಿನಿಂದ ಪ್ರಾರಂಭವಾಗಿದೆ. ದೇವಿಯ ಗರ್ಭಗುಡಿಯ ಬಾಗಿಲನ್ನು ಶಾಸ್ತ್ರೋಕ್ತವಾಗಿ ತೆರೆಯಲಾಗಿದೆ.

Vijaya Karnataka Web 17 Oct 2019, 2:36 pm
ಹಾಸನ: ವರ್ಷಕ್ಕೆ ಒಮ್ಮೆ ಬಾಗಿಲು ತೆರೆಯುವ ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಾಲಯ ಬಾಗಿಲನ್ನು ಇಂದು ಮಧ್ಯಾಹ್ನ 12.30 ಕ್ಕೆ ತೆರೆಯಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ, ಶಾಸಕ ಪ್ರೀತಂ ಜೆ.ಗೌಡ , ಜಿಪಂ ಅಧ್ಯಕ್ಷೆ ಶ್ವೇತಾ ದೇವರಾಜ್ , ನ್ಯಾಯಾಧೀಶರು ದೇವಸ್ಥಾಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಅ.29 ರವರೆಗೆ ದೇವಾಲಯದ ಬಾಗಿಲು ತೆರೆದಿರಲಿದ್ದು ಸಾರ್ವಜನಿಕರ ದರ್ಶನಕ್ಕೆ ಅವಕಾಶವಿದೆ.
Vijaya Karnataka Web hasanaba tempel


ಹಾಸನಾಂಬ ದರ್ಶನಕ್ಕೆ ಬರುವ ಭಕ್ತರು ನೆನೆಯದಂತೆ ವಾಟರ್‌ ಪ್ರೂಫ್‌ ಚಾವಣಿ

ದೇವಸ್ಥಾನಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ, ನಾನು ಸಚಿವನಾಗಿ ಇಲ್ಲಿಗೆ ಬಂದಿಲ್ಲ. ಸಾಮಾನ್ಯ ಭಕ್ತನಾಗಿ ಬಂದು ದೇವಿ ದರ್ಶನ ಪಡೆದಿದ್ದೇನೆ. ದೇವಿಯ ಗುಡಿಯಲ್ಲಿ ದೀಪ ಉರಿಯುತ್ತಿದ್ದುದನ್ನು ಕಂಡು ಪುಳಕಿತನಾದೆ. ಈ ಬಾರಿ ಉತ್ತಮ ಮಳೆಯಾಗಿದೆ ಅದೇ ರೀತಿ ಸಕಲ ಸಂಪತ್ತು , ಶಾಂತಿ, ನೆಮ್ಮದಿ ನೀಡಲೆಂದು ಪ್ರಾರ್ಥಿಸಿರುವುದಾಗಿ ಹೇಳಿದರು.

ಈ ಬಾರಿ ಭಕ್ತರಿಗೆ ಹಾಸನಾಂಬೆಯ ದರ್ಶನ ಭಾಗ್ಯವು ಅ. 29ರ ವರೆಗೆ ದೊರೆಯಲಿದೆ. ಆದರೆ ಗರ್ಭಗುಡಿ ತೆರೆದ ದಿನ ಹಾಗೂ ಕೊನೆಯ ದಿನ ಸಾರ್ವಜನಿಕರಿಗೆ ದರ್ಶನ ಭಾಗ್ಯ ಒದಗಿಸಲಾಗುವುದಿಲ್ಲ. ಒಟ್ಟಾರೆ ಸುಮಾರು 12 ದಿನಗಳ ಕಾಲ ಹಾಸನಾಂಬೆಯ ಬಾಗಿಲು ತೆರೆದಿರಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ