ಆ್ಯಪ್ನಗರ

ಜಿಲ್ಲೆಯಲ್ಲಿ ಸರ್ವಾಧಿಕಾರಿ ಧೋರಣೆ : ಆರೋಪ

ಹಾಸನ: ದೇಶಕ್ಕೆ ಸ್ವಾತಂತ್ರ್ಯ ಬಂದು 72 ವರ್ಷಗಳಾದರೂ ಜಿಲ್ಲೆಯಲ್ಲಿ ಮಾತ್ರ ಸರ್ವಾಧಿಕಾರಿ ಧೋರಣೆ ನಡೆಯುತ್ತಿದೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಮೋಹನ್‌ ಕುಮಾರ್‌ ಆರೋಪಿಸಿದರು.

Vijaya Karnataka 15 Mar 2019, 5:00 am
ಹಾಸನ: ದೇಶಕ್ಕೆ ಸ್ವಾತಂತ್ರ್ಯ ಬಂದು 72 ವರ್ಷಗಳಾದರೂ ಜಿಲ್ಲೆಯಲ್ಲಿ ಮಾತ್ರ ಸರ್ವಾಧಿಕಾರಿ ಧೋರಣೆ ನಡೆಯುತ್ತಿದೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಮೋಹನ್‌ ಕುಮಾರ್‌ ಆರೋಪಿಸಿದರು.
Vijaya Karnataka Web hassan bjp leaders allegation jds party
ಜಿಲ್ಲೆಯಲ್ಲಿ ಸರ್ವಾಧಿಕಾರಿ ಧೋರಣೆ : ಆರೋಪ


ಬಡವರು, ಹಿಂದುಳಿದವರು ಹಾಗೂ ದಲಿತರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಭ್ರಷ್ಟಾಚಾರ ಹೆಚ್ಚಿದ್ದು ಭ್ರಷ್ಟಾಚಾರದ ವಿರುದ್ಧ ಪ್ರಶ್ನೆ ಮಾಡುವವರ ಹಾಗೂ ಪ್ರಾಮಾಣಿಕ ಅಧಿಕಾರಿಗಳ ಮೇಲೆ ಒತ್ತಡ ಹೇರಿ ಸುಳ್ಳು ಪ್ರಕರಣ ದಾಖಲಿಸಲಾಗುತ್ತದೆ. ವೈಯಕ್ತಿಕ ನಿಂದನೆಗಳು ಹೆಚ್ಚುತ್ತಿವೆ. ದೇಶಕ್ಕೆ ಒಂದು ಕಾನೂನು ವ್ಯವಸ್ಥೆ. ಆದರೆ, ಹಾಸನ ಜಿಲ್ಲೆಗೆ ಒಂದು ಕಾನೂನು ರಚಿಸಿಕೊಂಡು ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ದೂರಿದರು.

ಜಿಲ್ಲೆಯೊಳಗೆ ನಡೆಯುತ್ತಿರುವ ಗೂಂಡಾ ಪ್ರವೃತ್ತಿ ತೊಲಗಿಸಿ ಸಾಮಾನ್ಯ ಜನರಿಗೆ ಸ್ವಾತಂತ್ರ್ಯ ಮತ್ತು ರಕ್ಷ ಣೆ ನೀಡಲು ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಜಿಲ್ಲೆಯ ಜನತೆ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಸಬೇಕು. ಜಿಲ್ಲೆಯೊಳಗೆ ಹಿಂದುಳಿದವರು, ಕುರುಬರು ಹಾಗೂ ದಲಿತರಿಗೆ ಟಿಕೆಟ್‌ ಕೊಡಲು ಪಕ್ಷ ದ ರಾಜ್ಯ ನಾಯಕರಿಗೆ ಮನವಿ ಮಾಡುತ್ತೇವೆ. ಸಾಮಾಜಿಕ ನ್ಯಾಯ ಪರಿಕಲ್ಪನೆಯಡಿ ಕೆಲಸ ಮಾಡುವವರಿಗೆ ಟಿಕೆಟ್‌ ಕೊಡಬೇಕು ಎಂದು ಒತ್ತಾಯಿಸಿದರು.

ಎ.ಮಂಜು ಪಕ್ಷಕ್ಕೆ ಬರುವುದನ್ನು ರಾಜ್ಯ ನಾಯಕರು ತೀರ್ಮಾನ ಮಾಡುತ್ತಾರೆ. ಅವರು ಬಂದರೆ ನಮ್ಮ ಸ್ವಾಗತ. ಅವರನ್ನು ಜಿಲ್ಲೆಯ ಬಿಜೆಪಿ ಮತ್ತು ಕಾಂಗ್ರೆಸ್‌ ಕಾರ್ಯಕರ್ತರು ಗೆಲ್ಲಿಸಬೇಕು ಎಂದರು.

ಎಂ.ಸಿ.ಮೋಹನ್‌, ಹೊಳೆನರಸೀಪುರದಲ್ಲಿ ನಡೆಯುತ್ತಿರುವ ಅಕ್ರಮ ಕಾಮಗಾರಿಗಳು ಹಾಗೂ ಭ್ರಷ್ಟಾಚಾರವನ್ನು ಪ್ರಶ್ನಿಸಲು ಮುಂದಾದ ಹಿನ್ನೆಲೆಯಲ್ಲಿ ನನ್ನ ಮೇಲೆಯೇ ಎರಡು ಸುಳ್ಳು ಪ್ರಕರಣಗಳನ್ನು ದಾಖಲಿಸಿದ್ದಾರೆ. ನಾನು ಒಬ್ಬ ಕುರುಬನಾಗಿ ಹುಟ್ಟಿದ್ದೇ ತಪ್ಪಾಗಿದೆ. ನನ್ನ ವಿರುದ್ಧ ಸೇಡಿನ ರಾಜಕಾರಣ ಸಾಧಿಸುತ್ತಿದ್ದಾರೆ. ಜಿಲ್ಲೆಯ ಜನತೆಗೆ ಅಭಯ ನೀಡಲು ಮಾಜಿ ಸಚಿವ ಎ.ಮಂಜು ಅವರಂತಹ ನಾಯಕರ ಅಗತ್ಯವಿದೆ ಎಂದು ತಿಳಿಸಿದರು.

ಅಭಿಲಾಷ್‌, ರಾಘವೇಂದ್ರ, ಅವಿನಾಶ್‌ ಧನಂಜಯ್‌ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ