ಆ್ಯಪ್ನಗರ

ಹಾಸನ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಆದ್ಯತೆ; ಸಾ.ರಾ. ಮಹೇಶ್

ಬೇಲೂರು, ಹಳೇಬೀಡು ಮತ್ತು ಶ್ರವಣಬೆಳಗೊಳ ಸಹಿತ ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ದಿಗೆ ವಿಶೇಷ ಗಮನ ಹರಿಸಲಾಗುವುದು ಎಂದು ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವ ಸಾ. ರಾ. ಮಹೇಶ್ ತಿಳಿಸಿದ್ದಾರೆ.

Vijaya Karnataka Web 18 Jun 2018, 8:32 pm
ಹಾಸನ: ಬೇಲೂರು, ಹಳೇಬೀಡು ಮತ್ತು ಶ್ರವಣಬೆಳಗೊಳ ಸಹಿತ ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ದಿಗೆ ವಿಶೇಷ ಗಮನ ಹರಿಸಲಾಗುವುದು ಎಂದು ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವ ಸಾ. ರಾ. ಮಹೇಶ್ ತಿಳಿಸಿದ್ದಾರೆ.
Vijaya Karnataka Web SA RA Mahesh


ಬೇಲೂರಿನಲ್ಲಿ ಪ್ರವಾಸೋದ್ಯಮ ಅಭಿವೃದ್ದಿ ಕುರಿತಂತೆ ಸಭೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ವಿಶ್ವವಿಖ್ಯಾತ ಪ್ರವಾಸಿ ತಾಣಗಳನ್ನು ಹೊಂದಿರುವ ಹಾಸನ ಜಿಲ್ಲೆಯ ಪ್ರವಾಸೋದ್ಯಮದ ಸಮಗ್ರ ಅಭಿವೃದ್ಧಿ ಕೈಗೊಳ್ಳಲಾಗುವುದು ಎಂದರು.

ಮಾಜಿ ಪ್ರಧಾನಿ ಹಾಗೂ ಲೋಕಸಭಾ ಸದಸ್ಯ ಎಚ್.ಡಿ. ದೇವೇಗೌಡ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿ ಈಗಾಗಲೇ ಜಿಲ್ಲೆಯ ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಒತ್ತು ನೀಡುವಂತೆ ತಿಳಿಸಿದ್ದು, ಅದರಂತೆ ಅನುಸರಿಸಲಾಗುವುದು ಎಂದರು. ಬೇಲೂರು ದೇವಾಲಯದ ಸುತ್ತ ಹಾಗೂ ಪಟ್ಟಣ ವ್ಯಾಪ್ತಿಯಲ್ಲಿ ಪ್ರವಾಸೋದ್ಯಮ ಅಭಿವೃದ್ದಿಗೆ ಅಂದಾಜು 19 ಕೋಟಿ ರೂ.ಗಳ ಯೋಜನೆ ಸಿದ್ದಪಡಿಸಲಾಗಿದೆ. ಬೇಲೂರು ಮತ್ತು ಹಳೆಬೀಡುಗಳಲ್ಲಿ ಒಟ್ಟಾರೆ 30 ಕೋಟಿ ರೂಪಾಯಿ ವೆಚ್ಚದ ಅಭಿವೃದ್ದಿ ಕಾಮಗಾರಿಗಳನ್ನು ಮೊದಲ ಹಂತದಲ್ಲಿ ಕೈಗೆತ್ತಿಕೊಳ್ಳಲಾಗುವುದು ಎಂದರು.

ತಾವು ಇಲಾಖೆ ಸಚಿವರಾಗಿ ಜವಾಬ್ದಾರಿ ವಹಿಸಿಕೊಂಡು ಕೇವಲ 15 ದಿನಗಳಲ್ಲಿ ಈಗಾಗಲೇ 2 ಬಾರಿ ಇಲಾಖಾ ಅಧಿಕಾರಿಗಳ ಸಭೆ ನಡೆಸಿ ಪರಾಮರ್ಶೆ ನಡೆಸಲಾಗಿದೆ. ಮುಂದಿನ 6 ತಿಂಗಳೊಳಗೆ ಎಲ್ಲಾ ನೆನೆಗುದಿಗೆ ಬಿದ್ದಿರುವ ಯೋಜನೆಗಳನ್ನು ಪ್ರಾರಂಭಿಸಲಾಗುವುದು ಎಂದರು.

ಬೇಲೂರಿನಲ್ಲಿ ಪಾರ್ಕಿಂಗ್ ವ್ಯವಸ್ಥೆ, ರಸ್ತೆ ವಿಸ್ತರಣೆ, ಪ್ರವಾಸಿ ಮಾಹಿತಿ ಕೇಂದ್ರದ ಬಲವರ್ಧನೆ, ಕ್ಯಾಂಟೀನ್ ಸೌಲಭ್ಯ ಮತ್ತಿತರ ಅಭಿವೃದ್ದಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗುತ್ತದೆ. ಬೇಲೂರು ದೇವಾಲಯಕ್ಕೆ 900 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಪುರಾತತ್ವ ಇಲಾಖೆ ಹಾಗೂ ಇತರ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಪ್ರವಾಸಿ ತಾಣಗಳ ಜಾಗ ಒತ್ತುವರಿ, ಮೂಲಭೂತ ಸೌಕರ್ಯಗಳ ಅಭಿವೃದ್ದಿ ಕಾರ್ಯಗಳ ಬಗ್ಗೆ ಗಮನ ಹರಿಸಲಾಗುವುದು.

ರಾಜ್ಯದ ಎಲ್ಲ ಪ್ರವಾಸಿ ತಾಣಗಳಲ್ಲಿ ಶೌಚಗೃಹ ಹಾಗೂ ಇತರೆ ಮೂಲ ಸೌಕರ್ಯಗಳ ಅಳವಡಿಕೆಗೆ ಮೊದಲ ಆದ್ಯತೆ ನೀಡಲಾಗುವುದು. ಬೇಲೂರಿನಲ್ಲಿ ಹಾಲಿ ಇರುವ ವಸತಿ ಸೌಲಭ್ಯದ ಕೊರತೆಯನ್ನು ನೀಗಿಸಲಾಗುವುದು ಎಂದು ಸಚಿವರು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ