ಆ್ಯಪ್ನಗರ

ಪರಿಸರ ಸಂರಕ್ಷ ಣೆಯಿಂದ ಆರೋಗ್ಯ ವೃದ್ಧಿ

ಹಾಸನ: ಪರಿಸರ ಸಂರಕ್ಷ ಣೆ ಮಾಡುವುದರಿಂದ ಆರೋಗ್ಯ ವೃದ್ಧಿಸಿಕೊಳ್ಳಬಹುದು ಎಂದು ಸರಕಾರಿ ಶುಶ್ರೂಷ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಶೋಭಾ ದೇವಮಾನೆ ತಿಳಿಸಿದರು.

Vijaya Karnataka 24 Feb 2019, 5:00 am
ಹಾಸನ: ಪರಿಸರ ಸಂರಕ್ಷ ಣೆ ಮಾಡುವುದರಿಂದ ಆರೋಗ್ಯ ವೃದ್ಧಿಸಿಕೊಳ್ಳಬಹುದು ಎಂದು ಸರಕಾರಿ ಶುಶ್ರೂಷ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಶೋಭಾ ದೇವಮಾನೆ ತಿಳಿಸಿದರು.
Vijaya Karnataka Web hassan rghus nss camp
ಪರಿಸರ ಸಂರಕ್ಷ ಣೆಯಿಂದ ಆರೋಗ್ಯ ವೃದ್ಧಿ


ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಸರಕಾರಿ ಶುಶ್ರೂಷ ಮಹಾವಿದ್ಯಾಲಯದ ನಾಲ್ಕನೇ ವರ್ಷದ ಬಿ.ಎಸ್ಸಿ ನರ್ಸಿಂಗ್‌ ವಿದ್ಯಾರ್ಥಿಗಳ ಎನ್‌ಎಸ್‌ಎಸ್‌ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿ ಮಾತನಾಡಿ, ಎನ್‌ಎಸ್‌ಎಸ್‌ ಶಿಬಿರ ವಿದ್ಯಾರ್ಥಿಗಳಿಗೆ ಒಂದು ಒಳ್ಳೆಯ ಅನುಭವ. ಜೀವನದಲ್ಲಿ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಳ್ಳಲು ಸಹಕಾರಿಯಾಗುತ್ತದೆ. ದೇಶದ ಸೌಹಾರ್ದತೆ ಮೂಡಿಸುವಲ್ಲಿ ಶಿಬಿರಗಳು ತುಂಬಾ ಸಹಕಾರಿಯಾಗುತ್ತದೆ ಎಂದು ಹೇಳಿದರು.

ದೊಡ್ಡಗೇಣಿಗೆರೆ ಗ್ರಾಪಂ ಅಧ್ಯಕ್ಷ ಕುಮಾರ್‌ ಮಾತನಾಡಿ, ಪರಿಸರ ಸ್ವಚ್ಛತೆ ನಮ್ಮೆಲ್ಲರ ಕರ್ತವ್ಯ. ಪ್ರತಿ ವ್ಯಕ್ತಿಯು ಸ್ವಚ್ಛತೆ ಬಗ್ಗೆ ಗಮನಹರಿಸಬೇಕು ಎಂದರು.

ಎಚ್‌.ಡಿ. ದೇವೇಗೌಡ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಉದಯ್‌ ಕುಮಾರ್‌ ಮಾತನಾಡಿ, ಎನ್‌ಎಸ್‌ಎಸ್‌ನಿಂದ ವಿದ್ಯಾರ್ಥಿಗಳು ನಾಯಕತ್ವ ಗುಣ ಬೆಳೆಸಿಕೊಳ್ಳುತ್ತಾರೆ. ಸಮಾಜದ ಒಳಿತಿಗೆ ವಿದ್ಯಾರ್ಥಿಗಳ ಪಾತ್ರ ಅತಿ ಮುಖ್ಯವಾದದ್ದು ಎಂದು ಹೇಳಿದರು.

ಪಿಡಿಒ ಶಿವಕುಮಾರ್‌, ಗ್ರಾಪಂ ಉಪಾಧ್ಯಕ್ಷೆ ಶೈಲಜಾ, ಸದಸ್ಯರಾದ ಅಕ್ಷಿತ್‌, ಎನ್‌ಎಸ್‌ಎಸ್‌ ಕಾರ‍್ಯಕ್ರಮಾಧಿಕಾರಿ ಟಿ.ಎಸ್‌.ಕುಮಾರ್‌, ಎನ್‌ಎಸ್‌ಎಸ್‌ ಸಹ ಕಾರ‍್ಯಕ್ರಮಾಧಿಕಾರಿ ಕೆ.ವೈ.ರವಿ, ಶುಶ್ರೂಷ ಮಹಾವಿದ್ಯಾಲಯದ ಉಪನ್ಯಾಸಕಿ ನಿರ್ಮಲಾ ಕುಮಾರಿ, ಸುಮಿತ್ರಾದೇವಿ, ರಾಜು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ