ಆ್ಯಪ್ನಗರ

ಅ.17ರಿಂದ ಹಾಸನಾಂಬ ದೇವಿ ದರ್ಶನ

ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಿ ದೇವಸ್ಥಾನದ ಬಾಗಿಲು ಅ.17ರಿಂದ ತೆರೆಯಲಿದ್ದು, ಭಕ್ತರಿಗೆ 13 ದಿನಗಳ ಕಾಲ ದೇವಿಯ ದರ್ಶನ ಭಾಗ್ಯ ಲಭಿಸಲಿದೆ.

Vijaya Karnataka 7 Sep 2019, 5:00 am
ಹಾಸನ: ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಿ ದೇವಸ್ಥಾನದ ಬಾಗಿಲು ಅ.17ರಿಂದ ತೆರೆಯಲಿದ್ದು, ಭಕ್ತರಿಗೆ 13 ದಿನಗಳ ಕಾಲ ದೇವಿಯ ದರ್ಶನ ಭಾಗ್ಯ ಲಭಿಸಲಿದೆ.
Vijaya Karnataka Web hassanamba devi darshan from oct 17th
ಅ.17ರಿಂದ ಹಾಸನಾಂಬ ದೇವಿ ದರ್ಶನ


ದೇವಿಯ ದರ್ಶನಕ್ಕೆ ರಾಜ್ಯ, ಹೊರ ರಾಜ್ಯದಿಂದಲೂ ಸಹಸ್ತ್ರಾರು ಸಂಖ್ಯೆಯ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತೆ ಕಲ್ಪಿಸಲು ಜಿಲ್ಲಾಧಿಕಾರಿ ಗಿರೀಶ್‌, ಅಪರ ಜಿಲ್ಲಾಧಿಕಾರಿ ನಾಗರಾಜ್‌, ತಹಸೀಲ್ದಾರ್‌ ಮೇಘನಾ, ಮುಜರಾಯಿ ತಹಸೀಲ್ದಾರ್‌ ಶಾರದಾಂಬಾ, ನಗರಸಭೆ ಆಯುಕ್ತ ಪರಮೇಶ್‌ ಮತ್ತಿತರ ಅಧಿಕಾರಿಗಳು ಶುಕ್ರವಾರ ದೇಗುಲಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಸುದ್ದಿಗಾರರೊಂದಿಗೆ ಡಿಸಿ ಗಿರೀಶ್‌ ಮಾತನಾಡಿ, ''ವರ್ಷಕ್ಕೆ ಒಮ್ಮೆ ದೀಪಾವಳಿ ಸಂದರ್ಭ ಅಶ್ವಯುಜ ಮಾಸದ ಹುಣ್ಣಿಮೆ ನಂತರ ಬರುವ ಗುರುವಾರದಂದು ಹಾಸನಾಂಬ ದೇವಿ ದೇಗುಲದ ಬಾಗಿಲು ತೆರೆಯಲಾಗುತ್ತದೆ. ಈ ಹಿನ್ನೆಲೆಯಲ್ಲಿ ಭಕ್ತರ ಅನುಕೂಲಕ್ಕಾಗಿ ಏನೆಲ್ಲ ವ್ಯವಸ್ಥೆ ಕಲ್ಪಿಸಬೇಕು ಎಂಬ ಕುರಿತು ಶೀಘ್ರವೇ ಅಧಿಕಾರಿಗಳ ಸಭೆ ಕರೆದು ಚರ್ಚಿಸುತ್ತೇನೆ. ಬಳಿಕ ಜನಪ್ರತಿನಿಧಿಗಳ ಸಲಹೆ ಪಡೆದು ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು,''ಎಂದು ತಿಳಿಸಿದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ