ಆ್ಯಪ್ನಗರ

ಹಾಸನಾಂಬ ಜಾತ್ರಾ ಮಹೋತ್ಸವ ಆರಂಭಕ್ಕೆ ಮುನ್ನ ರಸ್ತೆ ಸುಸ್ಥಿತಿಗೆ ತರಲು ಸೂಚನೆ

ಹಾಸನಾಂಬ ಜಾತ್ರಾ ಮಹೋತ್ಸವ ಪ್ರಾರಂಭವಾಗುವ ಮುಂಚಿತವಾಗಿ ನಗರದಲ್ಲಿಗುಂಡಿ ಬಿದ್ದಿರುವ ಎಲ್ಲಾರಸ್ತೆಗಳನ್ನು ಸುಸ್ಥಿತಿಗೆ ತರಬೇಕು. ಸಾರ್ವಜನಿಕರಿಗೆ ಯಾವುದೇ ಸಮಸ್ಯೆಯಾಗದಂತೆ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿ ಎಂದು ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

Vijaya Karnataka 27 Sep 2019, 5:00 am
ಹಾಸನ: ಹಾಸನಾಂಬ ಜಾತ್ರಾ ಮಹೋತ್ಸವ ಪ್ರಾರಂಭವಾಗುವ ಮುಂಚಿತವಾಗಿ ನಗರದಲ್ಲಿಗುಂಡಿ ಬಿದ್ದಿರುವ ಎಲ್ಲಾರಸ್ತೆಗಳನ್ನು ಸುಸ್ಥಿತಿಗೆ ತರಬೇಕು. ಸಾರ್ವಜನಿಕರಿಗೆ ಯಾವುದೇ ಸಮಸ್ಯೆಯಾಗದಂತೆ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿ ಎಂದು ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.
Vijaya Karnataka Web HSN26N13_16


ನಗರದಲ್ಲಿತುರ್ತಾಗಿ ಆಗಬೇಕಿರುವ ರಸ್ತೆ ದುರಸ್ಥಿ, ನವೀಕರಣ, ಮತ್ತಿತರ ಅಭಿವೃದ್ಧಿ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಕಚೇರಿಯಲ್ಲಿಗುರುವಾರ ನಗರದ ನಾನಾ ಭಾಗದಲ್ಲಿತುರ್ತಾಗಿ ನಡೆಯಬೇಕಾಗಿರುವ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿಮಾತನಾಡಿದರು.

ಹಾಸನಾಂಬ ಜಾತ್ರಾ ಮಹೋತ್ಸವದ ಪ್ರಯುಕ್ತ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ನಿಗಾವಹಿಸಿ, ದೇವಸ್ಥಾನದ ಆವರಣ ಸ್ವಚ್ಛತೆಗೆ ಪ್ರಮುಖ ಆದ್ಯತೆ ನೀಡಬೇಕು. ಸಾರ್ವಜನಿಕರಿಗೆ ಅನುಕೂಲವಾಗುವಂತೆ ಸೂಕ್ತ ಜಾಗ ನಿಗದಿಪಡಿಸಿಕೊಂಡು ಮಹಿಳೆಯರಿಗೆ ಹಾಗೂ ಪುರುಷರಿಗೆ ಪ್ರತ್ಯೇಕ ಶೌಚಾಲಯ ನಿರ್ಮಿಸಿ ಅವುಗಳ ಶುಚಿತ್ವ ಕಾಪಾಡುವಲ್ಲಿನಿರ್ಮಿತಿ ಕೇಂದ್ರ ಹಾಗೂ ನಗರಸಭೆ ಗಮನಹರಿಸಬೇಕು ಎಂದರು.

ಹೊಸ ಬಸ್‌ ನಿಲ್ದಾಣದ ಬಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿಯೂ ತ್ವರಿತಗತಿಯಲ್ಲಿಸಾಗಬೇಕು. ಸಾಲಗಾಮೆ ರಸ್ತೆಯಲ್ಲಿವಾಹನ ಸಂಚಾರಕ್ಕೆ ಅಡೆತಡೆ ಉಂಟಾಗುತ್ತಿದ್ದು ಶೀಘ್ರವಾಗಿ ಆ ರಸ್ತೆಯನ್ನು ನವೀಕರಿಸಬೇಕು. ನಗರದ ವರ್ತುಲ ರಸ್ತೆಗಳ ಸಂಪರ್ಕ ಮಾರ್ಗಗಳನ್ನು ಸಂಚಾರ ಯೋಗ್ಯವನ್ನಾಗಿ ಮಾಡಿ ಎಂದು ಜಿಲ್ಲಾಧಿಕಾರಿ ಹೇಳಿದರು.

ಜಿಲ್ಲೆಯಲ್ಲಿಪ್ಲಾಸ್ಟಿಕ್‌ ಬಳಕೆ ಸಂಪೂರ್ಣ ನಿಷೇಧವಾಗಬೇಕು. ಪ್ರತಿ ಅಂಗಡಿಗಳಿಗೆ ನಗರಸಭೆ ವತಿಯಿಂದ ನೋಟಿಸ್‌ ನೀಡಬೇಕು. ಪ್ಲಾಸ್ಟಿಕ್‌ ಮಾರಾಟಗಾರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಗಿರೀಶ್‌ ತಿಳಿಸಿದರು.

ಜಿಲ್ಲಾಪೊಲೀಸ್‌ ವರಿಷ್ಠಾಧಿಕಾರಿ ರಾಮ್‌ ನಿವಾಸ್‌ ಸೆಫಟ್‌ ಮಾತನಾಡಿ, ಹಾಸನಾಂಬ ಜಾತ್ರಾ ಮಹೋತ್ಸವದಲ್ಲಿದೇವಸ್ಥಾನದ ಹಾಗೂ ನಗರದ ಪ್ರಮುಖ ಕಡೆಗಳಲ್ಲಿಪೊಲೀಸ್‌ ಬಂದೋಬಸ್‌್ತ ಮಾಡಲಾಗುವುದು ಹಾಗೂ ದೇವಿ ದರ್ಶನದ ವೇಳೆ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

ಪ್ರಭಾರ ಅಪರ ಜಿಲ್ಲಾಧಿಕಾರಿ ಡಾ.ಎಚ್‌.ಎಲ್‌.ನಾಗರಾಜ್‌ ಮಾತನಾಡಿ, ಜಿಲ್ಲೆಯಲ್ಲಿಎಲ್ಲೆಲ್ಲಿತ್ಯಾಜ್ಯ ಸಂಗ್ರಹವಿದೆಯೋ ಅದರ ವ್ಯವಸ್ಥಿತ ವಿಲೇವಾರಿಯಾಗಬೇಕು ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ಅವರಿಗೆ ತಿಳಿಸಿದರು.

ಜಿಲ್ಲೆಯ ಕೆರೆಯ ನೀರಿನ ಪುನಶ್ಚೇತನಕ್ಕೆ ಹೆಚ್ಚಿನ ಗಮನಹರಿಸಿ, ಕೆರೆಗಳ ಸಂರಕ್ಷಣೆಗೂ ನಿಗಾವಹಿಸಬೇಕು ಎಂದು ಸಣ್ಣ ನೀರಾವರಿ ಇಲಾಖೆಗೆ ಸೂಚನೆ ನೀಡಿದರು.

ಸಭೆಯಲ್ಲಿನಗರಸಭೆ ಪೌರಾಯುಕ್ತರಾದ ಕೃಷ್ಣಮೂರ್ತಿ, ಪಿಡ್ಲ್ಯೂಡಿ ಕಾರ್ಯಪಾಲಕ ಎಂಜಿನಿಯರ್‌ ಮಂಜುನಾಥ್‌ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ