ಆ್ಯಪ್ನಗರ

ಉದ್ಯೋಗ ಖಾತರಿ ಯೋಜನೆ ಅನುಷ್ಠಾನ: ಜಿಲ್ಲೆಗೆ 3ನೇ ಸ್ಥಾನ

ಹಾಸನ : ಉದ್ಯೋಗ ಖಾತರಿ ಯೋಜನೆಯ ಅನುಷ್ಠಾನದಲ್ಲಿ ಹಾಸನ ಜಿಲ್ಲೆ ರಾಜ್ಯದಲ್ಲಿಯೇ ಮೂರನೇ ಸ್ಥಾನ ಹೊಂದಿದೆ ಎಂದು ಜಿಪಂ ಅಧ್ಯಕ್ಷೆ ಶ್ವೇತಾ ದೇವರಾಜ್‌ ತಿಳಿಸಿದರು.

Vijaya Karnataka 20 Jan 2019, 5:00 am
ಹಾಸನ : ಉದ್ಯೋಗ ಖಾತರಿ ಯೋಜನೆಯ ಅನುಷ್ಠಾನದಲ್ಲಿ ಹಾಸನ ಜಿಲ್ಲೆ ರಾಜ್ಯದಲ್ಲಿಯೇ ಮೂರನೇ ಸ್ಥಾನ ಹೊಂದಿದೆ ಎಂದು ಜಿಪಂ ಅಧ್ಯಕ್ಷೆ ಶ್ವೇತಾ ದೇವರಾಜ್‌ ತಿಳಿಸಿದರು.
Vijaya Karnataka Web narega hassan district 3rd place in state
ಉದ್ಯೋಗ ಖಾತರಿ ಯೋಜನೆ ಅನುಷ್ಠಾನ: ಜಿಲ್ಲೆಗೆ 3ನೇ ಸ್ಥಾನ


ಜಿಪಂ ಕಚೇರಿ ಆವರಣದಲ್ಲಿ ಜಾಗೃತಿ ಕಾರ‍್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕಳೆದ 2 ವರ್ಷದಿಂದ ಅರಸೀಕೆರೆಯಂತಹ ಬರಪೀಡಿತ ಪ್ರದೇಶಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸಲಾಗಿದೆ. ಬೇಲೂರು, ಚನ್ನರಾಯಪಟ್ಟಣ ಸೇರಿದಂತೆ ಇತರೆ ಕಡೆ ಕೃಷಿ ಹೊಂಡ ಹಾಗೂ ಕಾಂಕ್ರಿಟ್‌ ರಸ್ತೆ ನಿರ್ಮಾಣಗಳು ನಡೆಯುತ್ತಿವೆ. ಸಕಲೇಶಪುರದಲ್ಲಿ ಇಂಟೀರಿಯರ್‌ ರಸ್ತೆ ಹಾಗೂ ಸಂಪರ್ಕ ರಸ್ತೆ ನಿರ್ಮಾಣದ ಮೂಲಕ ಉದ್ಯೋಗ ಖಾತರಿ ದಾರಿ ದೀಪವಾಗುತ್ತಿದೆ ಎಂದು ತಿಳಿಸಿದರು.

ಜಿಪಂ ಪುಟ್ಟಸ್ವಾಮಿ, ಯೋಜನಾ ನಿರ್ದೇಶಕ ಅರುಣ್‌ ಕುಮಾರ್‌, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಲೋಕೇಶ್‌, ಐಇಸಿ ಸಂಯೋಜಕ ಡಾ.ಎಸ್‌.ಜಿ. ಮಹೇಶ್‌ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ