ಆ್ಯಪ್ನಗರ

ರಾಷ್ಟ್ರೀಯ ಏಕತಾ ದಿವಸ ಆಚರಣೆ

ಜಿಲ್ಲಾಡಳಿತ ವತಿಯಿಂದ ರಾಷ್ಟ್ರೀಯ ಏಕತಾ ದಿವಸ ದಿನಾಚರಣೆ ಅಂಗವಾಗಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕಾರ್ಯ ಕ್ರಮದಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ದಾಸರಿ, ಅಪರ ಜಿಲ್ಲಾಧಿಕಾರಿ ಪೂರ್ಣಿಮ, ಉಪವಿಭಾಗಾಧಿಕಾರಿ ಡಾ.ಎಚ್.ಎಲ್. ನಾಗರಾಜ್ ಅವರು ಏಕತಾ ಪ್ರಮಾಣ ವಚನ ಭೋದಿಸಿದರು.

Vijaya Karnataka 1 Nov 2017, 5:16 am
ಹಾಸನ: ಜಿಲ್ಲಾಡಳಿತ ವತಿಯಿಂದ ರಾಷ್ಟ್ರೀಯ ಏಕತಾ ದಿವಸ ದಿನಾಚರಣೆ ಅಂಗವಾಗಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕಾರ್ಯ ಕ್ರಮದಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ದಾಸರಿ, ಅಪರ ಜಿಲ್ಲಾಧಿಕಾರಿ ಪೂರ್ಣಿಮ, ಉಪವಿಭಾಗಾಧಿಕಾರಿ ಡಾ.ಎಚ್.ಎಲ್. ನಾಗರಾಜ್ ಅವರು ಏಕತಾ ಪ್ರಮಾಣ ವಚನ ಭೋದಿಸಿದರು.
Vijaya Karnataka Web national one day celebration
ರಾಷ್ಟ್ರೀಯ ಏಕತಾ ದಿವಸ ಆಚರಣೆ


‘ರಾಷ್ಟ್ರದ ಏಕತೆ, ಸಮಗ್ರತೆ ಮತ್ತು ಭದ್ರತೆ ಯನ್ನು ಕಾಪಾಡಲು ನನ್ನನ್ನು ಅರ್ಪಿಸಿ ಕೊಳ್ಳುತ್ತೇನೆ ಮತ್ತು ನನ್ನ ದೇಶ ಬಾಂಧವರಲ್ಲಿ ಈ ಸಂದೇಶವನ್ನು ಸಾರಲು ಶ್ರಮಿಸುತ್ತೇನೆ ಎಂದು ನಾನು ಶ್ರದ್ಧಾಪೂರ್ವಕವಾಗಿ ಪ್ರತಿಜ್ಞೆ ಮಾಡುತ್ತೇನೆ. ಸರ್ದಾರ್ ವಲ್ಲಬಾಯ್ ಪಟೇಲ್ ಅವರ ದೂರದೃಷಿ ಮತ್ತು ಕಾರ್ಯಕ್ಷಮತೆಯಿಂದ ಸಾಧಿಸಿದ ರಾಷ್ಟ್ರೀಯ ಏಕೀಕರಣದ ಸ್ಫೂರ್ತಿಯನ್ನು ಕಾಪಾಡುತ್ತೇನೆ ಎಂದು ಪ್ರಮಾಣ ಮಾಡುತ್ತೇನೆ. ರಾಷ್ಟ್ರದ ಆಂತರಿಕ ಭದ್ರತೆಯನ್ನು ಖಾತ್ರಿ ಪಡಿಸಲು ನಾನು ನನ್ನದೇ ಆದ ಕೊಡುಗೆಯನ್ನು ನೀಡುತ್ತೇನೆ’ ಎಂದು ಪ್ರತಿಜ್ಞೆ ಬೋಧಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಭಾರ ಸಹಾಯಕ ನಿರ್ದೇಶಕ ವಿನೋದ್ ಚಂದ್ರ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಕೃಷ್ಣಮೂರ್ತಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಪ್ರಮಾಣ ವಚನ ಸ್ವೀಕರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ