ಆ್ಯಪ್ನಗರ

ಲೋಕಸಭೆ ಚುನಾವಣೆಗೆ ಸ್ಪರ್ಧಿಸಲ್ಲ: ದೇವೇಗೌಡ ಪುನರುಚ್ಛಾರ

ನಾನು ಪ್ರಧಾನಿ ಅಭ್ಯರ್ಥಿಯಾಗುವುದಿಲ್ಲ, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಜೆಡಿಎಸ್‌ ವರಿಷ್ಠ ದೇವೇಗೌಡ ಪುನರುಚ್ಛರಿಸಿದ್ದಾರೆ.

Vijaya Karnataka Web 13 Aug 2018, 9:58 am
ಹಾಸನ: ನಾನು ಪ್ರಧಾನಿ ಅಭ್ಯರ್ಥಿಯಾಗುವುದಿಲ್ಲ, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಜೆಡಿಎಸ್‌ ವರಿಷ್ಠ ದೇವೇಗೌಡ ಪುನರುಚ್ಛರಿಸಿದ್ದಾರೆ.
Vijaya Karnataka Web devegowda 4


ಬಿಜೆಪಿಯವರಿಗೆ ಕುಮಾರಸ್ವಾಮಿಯೇ ಟಾರ್ಗೆಟ್. ಮುಂದಿನ ದಿನಗಳಲ್ಲಿ ಹೆಚ್.ಡಿ.ಕುಮಾರಸ್ವಾಮಿ ರಾಷ್ಟ್ರ ರಾಜಕಾರಣಕ್ಕೆ ಹೋಗುವ ಸಾಧ್ಯತೆ ಇದೆ ಎಂದು ಎಚ್‌ಡಿಡಿ ಹೇಳಿದ್ದಾರೆ.

ಬಿಜೆಪಿಯವರಿಗೆ ಜೆಡಿಎಸ್ ಅನ್ನು ತೆಗಳುವುದೇ ಕೆಲಸ. ಸಮ್ಮಿಶ್ರ ಸರಕಾರಕ್ಕೆ ಯಾವುದೇ ತೊಂದರೆಯಾಗದ ರೀತಿ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತೇವೆ. ಸರಕಾರ ಅಸ್ಥಿರಗೊಳಿಸಲು ಮಾಜಿ ಸಿಎಂ ಯಡಿಯೂರಪ್ಪ ಅವರ ಹುನ್ನಾರ ನಡೆಯದು. ಯಾರಿಂದಲೂ ಸಮ್ಮಿಶ್ರ ಸರಕಾರ ಅಸ್ಥಿರಗೊಳಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣನನ್ನು ಹಾಸನ ಲೋಕಸಭೆ ಅಭ್ಯರ್ಥಿಯಾಗಿ ಕಣಕ್ಕಿಳಿಸುತ್ತೇವೆ. ನಾನೇ ನಾಲ್ಕೈದು ದಿನ ಹಾಸನದಲ್ಲಿದ್ದು ಕಾರ್ಯಕರ್ತರ ಸಭೆ ನಡೆಸುತ್ತೇನೆ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ನೊಂದಿಗೆ ಮೈತ್ರಿ ಇಲ್ಲ, ಕಾಂಗ್ರೆಸ್‌ ಜತೆ ಮೈತ್ರಿಗೆ ಅಪಾಯವಾಗದಂತೆ ಸ್ಥಳೀಯ ಸಂಸ್ಥೆ ಚುನಾವಣೆ ಎದುರಿಸುತ್ತೇವೆ ಎಂದರು.

ಲೋಕಸಭೆ ಚುನಾವಣೆ ಬಳಿಕವೂ ಸಮ್ಮಿಶ್ರ ಸರಕಾರ ಬೀಳದು. ರಾಜ್ಯದ ಸಮ್ಮಿಶ್ರ ಸರಕಾರ ಗಟ್ಟಿಯಾಗಿದೆ. ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿಯವರು ಎಂಪಿ ಚುನಾವಣೆಗೂ ಮೊದಲು ಸರಕಾರ ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಲೋಕಸಭೆ ಚುನಾವಣೆಗಿಂತ ಮುಂಚೆ ಕುಮಾರಸ್ವಾಮಿಯನ್ನು ಅಧಿಕಾರದಿಂದ ಕೆಳಗಿಳಿಸಲು ಬಿಜೆಪಿ ಯತ್ನಿಸುತ್ತಿದೆ ಎಂದು ಎಚ್‌ಡಿಡಿ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ