ಆ್ಯಪ್ನಗರ

ರಾಜ್ಯ ರಾಜಕಾರಣ ಕುರಿತು ಸದ್ಯ ಯಾವುದೇ ನಿರ್ಧಾರವಿಲ್ಲ: ಬಿಎಸ್‌ವೈ

ಅತೃಪ್ತ ಶಾಸಕರ ಮನವೊಲಿಸುವ ಕಸರತ್ತು ಮುಂದುವರೆಸಿರುವ ಕಾಂಗ್ರೆಸ್ ಹೈಕಮಾಂಡ್, ಬೆಂಗಳೂರಿನಲ್ಲೆ ಟೆಂಟ್ ಹಾಕುವಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರಿಗೆ ಸೂಚಿಸಿದೆ.

Vijaya Karnataka Web 7 Jul 2019, 3:14 pm
ಹಾಸನ: ಕೈ, ತೆನೆ ಶಾಸಕರ ರಾಜೀನಾಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ, ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಸದ್ಯಕ್ಕೆ ಯಾವುದೇ ನಿರ್ಧಾರವಿಲ್ಲ ಎಂದಿದ್ದಾರೆ.
Vijaya Karnataka Web BSY 1200


ಚನ್ನರಾಯಪಟ್ಟಣ ತಾಲೂಕು ಬಾಗೂರಿನಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ರಾಜ್ಯ ರಾಜಕಾರಣ ಕುರಿತು ಸದ್ಯದಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಎಲ್ಲವನ್ನು ಕಾದು ನೋಡುತ್ತೇನೆ. ಹೈಕಮಾಂಡ್ ಸೂಚನೆಯಂತೆ ನಡೆದುಕೊಳ್ಳಲಾಗುವುದು. ಉಪ ಚುನಾವಣೆ ನಡೆಯದು, ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಮನವೊಲಿಕೆ ಕಸರತ್ತು ಮುಂದುವರೆಸಿರುವ ಕೈ ಪಡೆ

ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಅಮೆರಿಕದಿಂದ ವಾಪಸ್ ಬರುವ ಮುನ್ನವೇ ಮೈತ್ರಿ ಸರಕಾರಕ್ಕೆ ಕೌಂಟ್ ಡೌನ್ ಶುರುವಾಗಿದ್ದು, ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರದ 14 ಶಾಸಕರು ರಾಜೀನಾಮೆ ನೀಡುವ ಮೂಲಕ ರಾಜ್ಯ ರಾಜಕೀಯದಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಸಿದ್ದಾರೆ.

ಅತೃಪ್ತ ಶಾಸಕರ ಮನವೊಲಿಸುವ ಕಸರತ್ತು ಮುಂದುವರೆಸಿರುವ ಕಾಂಗ್ರೆಸ್ ಹೈಕಮಾಂಡ್, ಬೆಂಗಳೂರಿನಲ್ಲೆ ಟೆಂಟ್ ಹಾಕುವಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರಿಗೆ ಸೂಚಿಸಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಸಭೆ ನಡೆಸಲಿರುವ ವೇಣುಗೋಪಾಲ್, ಸಿಎಂ ಅಮೆರಿಕಾದಿಂದ ವಾಪಸ್ ಆದ ಬಳಿಕ ಭೇಟಿಯಾಗಲಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ