ಆ್ಯಪ್ನಗರ

ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಒತ್ತಾಯಿಸಿ ಧರಣಿ

ಕಳೆದ ಹಲವು ತಿಂಗಳಿಂದ ಹದಗೆಟ್ಟ ಸ್ಥಿತಿಯಲ್ಲಿ ರುವ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರ ರಸ್ತೆ ದುರಸ್ತಿಗೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ‌್ಯಕರ್ತರು ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.

Vijaya Karnataka 4 Oct 2019, 9:42 pm
ಸಕಲೇಶಪುರ: ಕಳೆದ ಹಲವು ತಿಂಗಳಿಂದ ಹದಗೆಟ್ಟ ಸ್ಥಿತಿಯಲ್ಲಿ ರುವ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರ ರಸ್ತೆ ದುರಸ್ತಿಗೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ‌್ಯಕರ್ತರು ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.
Vijaya Karnataka Web HSN4SKP1_16


ತಾಲೂಕಿನ ಬಾಗೆ ಗ್ರಾಮದ ಸಮೀಪ ಕೆಲಕಾಲ ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರು ಕೇಂದ್ರ ಹಾಗೂ ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿದರು. ಹೆದ್ದಾರಿ ನಡುವಿನ ಗುಂಡಿ ಯಲ್ಲಿ ಸಸಿಗಳನ್ನು ನೆಟ್ಟು ಆಕ್ರೋಶ ವ್ಯಕ್ತಪಡಿಸಿ, ರಸ್ತೆ ಮಧ್ಯೆ ಕುಳಿತು ಪ್ರತಿಭಟನೆ ನಡೆಸಿದರು.

ಕರವೇ ತಾಲೂಕು ಅಧ್ಯಕ್ಷ ದಿನೇಶ್ ಕುಮಾರ್ ಮಾತನಾಡಿ, ‘‘ರಾಜಧಾನಿ ಮತ್ತು ಕರಾವಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಹೆದ್ದಾರಿ ಇದಾಗಿ ದ್ದು, ಕಳೆದ ಎಷ್ಟೋ ದಿನಗಳಿಂದ ಹದಗೆಟ್ಟ ಸ್ಥಿತಿಯ ಲ್ಲಿದೆ. ಪಟ್ಟಣದಿಂದ ಬಾಳ್ಳುಪೇಟೆ ವರೆಗಿನ ಸುಮಾರು 12 ಕಿ.ಮೀ ರಸ್ತೆ ಸಂಪೂರ್ಣ ಹಾಳಾಗಿ ದ್ದು, ಅಪಾಯಕಾರಿ ಗುಂಡಿಗಳಿಂದ ಕೂಡಿದೆ. ಮೊದಲೇ ಅಪಾಯಕಾರಿ ತಿರುವುಗಳಿಂದ ಕೂಡಿದ ಈ ರಸ್ತೆ ದುರಸ್ತಿ ಮಾಡದೆ ಎಷ್ಟೋ ವಾಹನ ಸವಾರರು ಬಿದ್ದು ಕೂ, ಕಾಲು ಮುರಿದುಕೊಂಡಿದ್ದಾರೆ. ಬಾಗೆ ಸಮೀಪ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು ಪ್ರತಿದಿನ ಒಂದಲ್ಲೊಂದು ಅಪಘಾತಗಳು ಸಂಭವಿಸುತ್ತಲೇ ಇವೆ,’’ ಆಕ್ರೋಶವ್ಯಕ್ತಪಡಿಸಿದರು.

ಹೆದ್ದಾರಿ ಪ್ರಾಧಿಕಾರದ ಮೆಟೀರಿಯಲ್ ಎಂಜಿನಿಯರ್ ರಾಜಶೇಖರ್ ಸ್ಥಳಕ್ಕೆ ಆಗಮಿಸಿ ಮಾತನಾಡಿ, ‘‘ರಸ್ತೆ ದುರಸ್ತಿಗೆ 7.5 ಕೋಟಿ ಯೋಜನೆ ರೂಪಿಸಿ ಕೇಂದ್ರಕ್ಕೆ ಅಂದಾಜು ಪಟ್ಟಿ ಸಲ್ಲಿಸಲಾಗಿದೆ. ಹಣ ಬಂದ ತಕ್ಷಣ ಕಾಮಗಾರಿ ಆರಂಭಿಸಲಾಗುವುದು ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ