Please enable javascript.ಬೆಂಬಲ ಬೆಲೆಗೆ ಒತ್ತಾಯಿಸಿ ಜೆಡಿಎಸ್ ಪ್ರತಿಭಟನೆ - ಬೆಂಬಲ ಬೆಲೆಗೆ ಒತ್ತಾಯಿಸಿ ಜೆಡಿಎಸ್ ಪ್ರತಿಭಟನೆ - Vijay Karnataka

ಬೆಂಬಲ ಬೆಲೆಗೆ ಒತ್ತಾಯಿಸಿ ಜೆಡಿಎಸ್ ಪ್ರತಿಭಟನೆ

ವಿಕ ಸುದ್ದಿಲೋಕ 6 Dec 2014, 5:00 am
Subscribe

ಹಾವೇರಿ:ಜಿಲ್ಲೆಯಲ್ಲಿ ಅತಿವೃಷ್ಟಿ, ಅನಾವೃಷ್ಟಿಗೆ ಒಳಗಾಗಿ ಹಾನಿಯಾದ ರೈತರಿಗೆ ಪರಿಹಾರ ನೀಡಬೇಕು. ಪ್ರಸಕ್ತ ಹಂಗಾಮಿನಲ್ಲಿ ಬೆಳೆದಿರುವ ಬಲೆಗೆ

ಬೆಂಬಲ ಬೆಲೆಗೆ ಒತ್ತಾಯಿಸಿ ಜೆಡಿಎಸ್ ಪ್ರತಿಭಟನೆ
ಹಾವೇರಿ:ಜಿಲ್ಲೆಯಲ್ಲಿ ಅತಿವೃಷ್ಟಿ, ಅನಾವೃಷ್ಟಿಗೆ ಒಳಗಾಗಿ ಹಾನಿಯಾದ ರೈತರಿಗೆ ಪರಿಹಾರ ನೀಡಬೇಕು. ಪ್ರಸಕ್ತ ಹಂಗಾಮಿನಲ್ಲಿ ಬೆಳೆದಿರುವ ಬಲೆಗೆ ಬೆಂಬಲ ಬೆಲೆ ನಿಗದಿ ಮಾಡಬೇಕು ಎಂದು ಜಾತ್ಯತೀತ ಜನತಾದಳ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.

ನಗರದ ಮುರುಘ ರಾಜೇಂದ್ರಮಠದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಪಿ.ಬಿ.ರಸ್ತೆಯ ಮೂಲಕ ಸಿದ್ದಪ್ಪ ವೃತ್ತಕ್ಕೆ ಬಂದು ಅಲ್ಲಿ ರಸ್ತೆ ತಡೆ ನಡೆಸಲಾಯಿತು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಜೆಡಿಎಸ್ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಬೇವಿನಮರದ ಮಾತನಾಡಿ, ಬೆಳೆ ಹಾನಿಗೆ ಒಳಗಾದ ರೈತರಿಗೆ ಬ್ಯಾಂಕ್ ಖಾತೆ ಮೂಲಕ ನೇರವಾಗಿ ಪರಿಹಾರ ಹಣ ನೀಡಬೇಕು. ಈಗಾಗಲೇ ಬೆಳೆದಿರುವ ಬೆಲೆ ಖರೀದಿ ಕೇಂದ್ರದ ಮೂಲಕ ಬೆಂಬಲ ಬೆಲೆ ನೀಡಿ ಖರೀದಿಸಬೇಕು. ಕಬ್ಬು ಬೆಳೆಗಾರರ ಬಾಕಿ ಇರುವ ಹಣವನ್ನು ನೀಡಬೇಕು. ರೈತರ ಪಂಪ್‌ಸೆಟ್‌ಗಳಿಗೆ ದಿನದ 20 ಗಂಟೆ ವಿದ್ಯುತ್ ನೀಡಬೇಕು. ಪ್ರತಿ ಕ್ವಿಂ.ಹತ್ತಿಗೆ 10 ಸಾವಿರ ರೂ. ಮೆಕ್ಕೆ ಜೋಳಕ್ಕೆ 2 ಸಾವಿರ ರೂ. ಭತ್ತಕ್ಕೆ 3 ಸಾವಿರ ರೂ. ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಸ್ತ್ರೀ ಶಕ್ತಿ ಸಂಘಗಳಿಗೆ ನೀಡಿರುವ ಸಾಲ ಮನ್ನಾ ಮಾಡಬೇಕು. ಪಡಿತರ ಚೀಟಿ ವಿತರಣೆಗೆ ಸಂಬಂಧಿಸಿದ ಕಾನೂನು ತಿದ್ದುಪಡಿ ಮಾಡಬೇಕು. ಪಡಿತರ ಚೀಟಿ ಮೂಲಕ ಕುಟುಂಬಕ್ಕೆ ಸಾಕಾಗುವಷ್ಟು ಸೀಮೆ ಎಣ್ಣೆ ವಿತರಿಸಬೇಕು. ಪದೇಪದೆ ತೈಲ ಬೆಲೆ ಇಳಿದಿದೆ. ಆದ್ದರಿಂದ ರಾಜ್ಯ ಸರಕಾರ ಬಸ್ ಪ್ರಯಾಣದರವನ್ನು ಇಳಿಸಬೇಕು. ಜನರಿಗೆ ಅನುಕೂಲವಾಗುವಂತಹ ಮರಳು ನೀತಿ ರೂಪಿಸಬೇಕು. ಅಡುಗೆ ಅನಿಲ ಹಣದ ಸಹಾಯಧನವನ್ನು ಬ್ಯಾಂಕ್ ನೀಡುವ ನಿರ್ಧಾರ ಸರಿಯಲ್ಲ. ಅದನ್ನು ಕೈ ಬಿಟ್ಟು ಈ ಹಿಂದೆ ಇದ್ದ ಪದ್ಧತಿಯನ್ನು ಮುಂದುವರಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಜೆಡಿಎಸ್ ರಾಜ್ಯ ಕಾರ್ಯದರ್ಶಿ ಕೆ.ಎಸ್. ಸಿದ್ದಬಸಪ್ಪ ಯಾದವ್, ಡಿ.ಎಸ್. ಮಾಳಗಿ, ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.
ಕಾಮೆಂಟ್‌ ಮಾಡಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ