ಆ್ಯಪ್ನಗರ

24ಕ್ಕೆ ಲೈಂಗಿಕ ಬಾಧಿತರಿಗೆ ಕಾನೂನು ಅರಿವು-ನೆರವು

ಅಕ್ಕಿಆಲೂರು: ಇಲ್ಲಿನ ಸಿ.ಜಿ.ಬೆಲ್ಲದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿತಾಲೂಕಾ ಕಾನೂನು ಸೇವಾ ಸಮಿತಿ ಹಾಗೂ ನ್ಯಾಯವಾದಿಗಳ ಸಂಘದ ಆಶ್ರಯದಲ್ಲಿಸೆ. 24 ರಂದು ರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳೆ ಮತ್ತು ಮಕ್ಕಳ ಕಳ್ಳಸಾಗಾಣಿಕೆ ಹಾಗೂ ಲೈಂಗಿಕ ಕಿರುಕುಳದಿಂದ ಬಾಧಿತರಿಗೆ ಕಾನೂನು ಅರಿವು-ನೆರವು ಕಾರ್ಯಕ್ರಮ ಆಯೋಜಿಸಲಾಗಿದೆ.

Vijaya Karnataka 24 Sep 2019, 5:00 am
ಅಕ್ಕಿಆಲೂರು: ಇಲ್ಲಿನ ಸಿ.ಜಿ.ಬೆಲ್ಲದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿತಾಲೂಕಾ ಕಾನೂನು ಸೇವಾ ಸಮಿತಿ ಹಾಗೂ ನ್ಯಾಯವಾದಿಗಳ ಸಂಘದ ಆಶ್ರಯದಲ್ಲಿಸೆ. 24 ರಂದು ರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳೆ ಮತ್ತು ಮಕ್ಕಳ ಕಳ್ಳಸಾಗಾಣಿಕೆ ಹಾಗೂ ಲೈಂಗಿಕ ಕಿರುಕುಳದಿಂದ ಬಾಧಿತರಿಗೆ ಕಾನೂನು ಅರಿವು-ನೆರವು ಕಾರ್ಯಕ್ರಮ ಆಯೋಜಿಸಲಾಗಿದೆ.
Vijaya Karnataka Web 24th legal awareness assistance for sexual victims
24ಕ್ಕೆ ಲೈಂಗಿಕ ಬಾಧಿತರಿಗೆ ಕಾನೂನು ಅರಿವು-ನೆರವು

ಬೆಳಗ್ಗೆ 10.30 ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಹಿರಿಯ ನ್ಯಾಯಾಧೀಶೆ ಶಾರದಾದೇವಿ ಹಟ್ಟಿ ಉದ್ಘಾಟಿಸಲಿದ್ದು, ಉಪನ್ಯಾಸಕಿ ಪೂರ್ಣಿಮಾ ಬಿ.ಎಚ್‌. ಅಧ್ಯಕ್ಷತೆ ವಹಿಸುವರು. ನ್ಯಾಯವಾದಿಗಳ ಸಂಘದ ಅಧ್ಯಕ್ಷ ಸೋಮಶೇಖರ ಕೋತಂಬರಿ, ಉಪಾಧ್ಯಕ್ಷ ಎಸ್‌.ಟಿ.ಕಾಮನಹಳ್ಳಿ, ಕಾರ್ಯದರ್ಶಿ ಆರ್‌.ಎಸ್‌.ತಳವಾರ, ಸಹಾಯಕ ಸರಕಾರಿ ಅಭಿಯೋಜಕ ಸೂರ್ಯನಾರಾಯಣ, ಅಧಿಕ ಸಹಾಯಕ ಸರಕಾರಿ ಅಭಿಯೋಜಕಿ ಇಂದುಮತಿ ಪಾಟೀಲ, ಪ್ರಾಚಾರ್ಯ ಡಾ.ಮಲ್ಲಿಕಾರ್ಜುನ ಕಡ್ಡಿಪುಡಿ ಭಾಗವಹಿಸಲಿದ್ದು, ನ್ಯಾಯವಾದಿ ಶ್ರೀಕಾಂತ ಹಾದಿಮನಿ ಉಪನ್ಯಾಸ ನೀಡುವರು ಎಂದು ಪ್ರಕಟಣೆ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ